ಬಳ್ಳಾರಿ / ಕಂಪ್ಲಿ : ಸ್ಥಳೀಯ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೋಟ್ಟಲ್ನಲ್ಲಿ (ಗೋಪಾಲಪುರ) ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಉಚಿತ ಹೊಲಿಗೆ ತರಬೇತಿ ಕಾರ್ಯಾಗಾರವನ್ನು ಮಂಗಳವಾರ ಉದ್ಘಾಟಿಸಲಾಯಿತು.
ಪುರಸಭೆ ಮಾಜಿ ಅಧ್ಯಕ್ಷ ಎಂ.ಸುಧಿರ್ ಮಾತನಾಡಿ, ‘ಸ್ವ ಉದ್ಯೋಗಕ್ಕೆ ಪೂರಕವಾಗಿ ಉಚಿತ ಹೊಲಿಗೆ ತರಬೇತಿ ಸಹಕಾರಿಯಾಗಲಿದೆ. ಮಹಿಳೆಗೆ ಉದ್ಯೋಗವಿಲ್ಲದಿದ್ದರೆ ಆರ್ಥಿಕ, ಮಾನಸಿಕ, ಸಾಮಾಜಿಕವಾಗಿ
ಹಿಂದುಳಿಯಲು ಕಾರಣವಾಗಲಿದೆ. ಉಚಿತ ಹೊಲಿಗೆ ತರಬೇತಿ ಪಡೆದು ಸ್ವಯಂ ಉದ್ಯೋಗ ಕೈಗೊಳ್ಳಬೇಕು ಎಂದರು.
ಪ್ರಾದೇಶಿಕ ಕಚೇರಿ ಜ್ಞಾನ ವಿಕಾಸ ವಿಭಾಗದ ಯೋಜನಾಧಿಕಾರಿ ಸುಧಾ ಮಾತನಾಡಿ, “ಮಹಿಳೆಯರು ಬಿಡುವಿನ ವೇಳೆ ಹೊಲಿಗೆ ಮೂಲಕ ಸ್ವ ಉದ್ಯೋಗ ಮಾಡಿದರೆ ಆರ್ಥಿಕವಾಗಿ ಪ್ರಗತಿ ಹೊಂದಲು ಸಹಕಾರಿಯಾಗಲಿದೆ ಎಂದರು. ಜ್ಞಾನವಿಕಾಸ ಸಮನ್ವಯ ಅಧಿಕಾರಿ ತನುಜಾ, ಕೇಂದ್ರದ ಅಧ್ಯಕ್ಷೆ ಜ್ಯೋತಿ ಸೇರಿ ಸೇವಾ ಪ್ರತಿನಿಧಿ ಸಂಘದ ಸದಸ್ಯರು ಭಾಗವಹಿಸಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















