ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹಿಂದಿನ ಬಾಗಿಲಿನಿಂದ ಅಧಿಕಾರ ಹಿಡಿಯುವವರ ವಿರುದ್ಧ ಮಾಜಿ ತಾ.ಪಂ. ಸದಸ್ಯ ನರಸಿಂಹಯ್ಯ ಆಕ್ರೋಶ.

ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕು ಮಾದರ ಮಹಾಸಭಾ ಅಧ್ಯಕ್ಷರಾಗಿ ಸಮುದಾಯದ ಎಲ್ಲಾ ಹಿರಿಯ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಒಮ್ಮತದಿಂದ ವಕೀಲ ಬಾಣದ ರಂಗಯ್ಯ ಅವರನ್ನು ಆಯ್ಕೆ ಮಾಡಿದರು.

ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಮಧುಗಿರಿ ಮಾದರ ಮಹಾಸಭಾ, ವಿವಿಧ ಸಮುದಾಯ ಸಂಘಟನೆಗಳು ಹಾಗೂ ಹಿರಿಯ ರಾಜಕೀಯ ಮುಖಂಡರ ಸಹಯೋಗದಲ್ಲಿ ” ಜನಾಂಗದ ಸಮಸ್ಯೆಗಳು ಮತ್ತು ಪರಿಹಾರೋಪಾಯಗಳು ” ಕುರಿತ ಕಾರ್ಯಾಗಾರ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ದಲಿತ ಒಕ್ಕೂಟದ ತಾಲ್ಲೂಕು ಅಧ್ಯಕ್ಷ ಡಿ.ಟಿ. ಸಂಜೀವಮೂರ್ತಿ, ತಾಲ್ಲೂಕಿನ ಮಾದರ ಮಹಾಸಭೆಯ ವಿಚಾರದಲ್ಲಿ ಉಂಟಾಗಿದ್ದ ಗೊಂದಲಗಳನ್ನು ನಿವಾರಿಸಿ ಸಮುದಾಯವನ್ನು ಒಂದೇ ವೇದಿಕೆಗೆ ತರಬೇಕೆಂಬ ಉದ್ದೇಶದಿಂದ ಹಿರಿಯರು ಒಮ್ಮತದಿಂದ ಬಾಣದ ರಂಗಯ್ಯ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದರು. ಅವರ ನೇತೃತ್ವದಲ್ಲಿ ಸಮುದಾಯ ಇನ್ನಷ್ಟು ಸಂಘಟಿತವಾಗಿ ಅಭಿವೃದ್ಧಿಯತ್ತ ಸಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ತಾ.ಪಂ. ಸದಸ್ಯ ನರಸಿಂಹಯ್ಯ ಮಾತನಾಡಿ, ಸಮುದಾಯದ ಹಿತಾಸಕ್ತಿಯನ್ನು ಕಡೆಗಣಿಸಿ ಕೆಲವರಿಗೆ ಮಾತ್ರ ಅಧಿಕಾರ ನೀಡುವ ಪ್ರವೃತ್ತಿ ನಿಲ್ಲಬೇಕು ಎಂದು ಅಭಿಪ್ರಾಯಪಟ್ಟರು.

ಮಾಜಿ ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಸಿದ್ದಾಪುರ ರಾಮಣ್ಣ ಮಾತನಾಡಿ, ಸಮುದಾಯದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಿರ್ಧಾರಗಳನ್ನು ಕೈಗೊಳ್ಳುವ ಪರಂಪರೆ ಮತ್ತೆ ಬರಬೇಕು. ಈ ಉದ್ದೇಶದಿಂದಲೇ ಎಲ್ಲರೂ ಸೇರಿ ಬಾಣದ ರಂಗಯ್ಯ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದರು.

ಪ್ರಗತಿಪರ ಚಿಂತಕ ಡಾ. ಕಾಳೇನಹಳ್ಳಿ ನರಸಿಂಹಯ್ಯ ಮಾತನಾಡಿ, ರಾಜ್ಯ ಮಟ್ಟದ ಮಾದರ ಮಹಾಸಭೆಯ ಬೆಳವಣಿಗೆಗಳು ಹಾಗೂ ಮಧುಗಿರಿಯ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಹಿರಿಯ ನಾಯಕರ ಗಮನಕ್ಕೆ ತರಲಾಗಿದೆ. ಸಮುದಾಯದ ಅಭಿವೃದ್ಧಿಗೆ ಬದ್ಧರಾಗಿರುವವರಿಗೆ ಜವಾಬ್ದಾರಿ ನೀಡಲಾಗುತ್ತಿದ್ದು, ಬಾಣದ ರಂಗಯ್ಯ ಅವರ ಆಯ್ಕೆ ಉತ್ತಮ ಬೆಳವಣಿಗೆಯಾಗಿದೆ ಎಂದು ಹೇಳಿದರು.

ನೂತನ ಅಧ್ಯಕ್ಷ ಬಾಣದ ರಂಗಯ್ಯ ಮಾತನಾಡಿ, ತಮ್ಮ ಮೇಲೆ ವಿಶ್ವಾಸವಿಟ್ಟು ಜವಾಬ್ದಾರಿ ನೀಡಿದ ಸಮುದಾಯದ ಎಲ್ಲ ಮುಖಂಡರಿಗೆ ಕೃತಜ್ಞತೆ ಸಲ್ಲಿಸಿದರು. ಸಮುದಾಯದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಹಾಗೂ ಅಭಿವೃದ್ಧಿಯ ಅವಕಾಶ ಕಲ್ಪಿಸಲು ಶ್ರಮಿಸುವುದಾಗಿ ಹಾಗೂ ಹಿರಿಯರ ಮಾರ್ಗದರ್ಶನದಲ್ಲಿ ಸಂಘಟನೆಯನ್ನು ಮುನ್ನಡೆಸುವುದಾಗಿ ಭರವಸೆ ನೀಡಿದರು.

ಆದಿಜಾಂಭವ ಮಹಾಸಭಾ ತಾಲ್ಲೂಕು ಅಧ್ಯಕ್ಷ ಮಹಾರಾಜು ಮಾತನಾಡಿ, ಸಮುದಾಯದಲ್ಲಿರುವ ಪ್ರಬುದ್ಧರು, ವಿದ್ಯಾವಂತರು ಹಾಗೂ ಹೋರಾಟಗಾರರನ್ನು ಒಗ್ಗೂಡಿಸಿಕೊಂಡು ಸಾಗಿದಾಗ ಮಾತ್ರ ಅಭಿವೃದ್ಧಿ ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಸಭೆಯಲ್ಲಿ ಮಾಜಿ ತಾ.ಪಂ. ಸದಸ್ಯ ಸಿದ್ದಗಂಗಪ್ಪ, ಹಿರಿಯ ಮುಖಂಡರಾದ ಕೆ.ಎಚ್. ಶಿವಕುಮಾರ್, ಬೆಲ್ಲದಮಡು ಭರತ್ ಕುಮಾರ್ ಗರಣಿ ಶ್ರೀನಿವಾಸ್, BSP ನಾಗಭೂಷಣ್ ಸೇರಿದಂತೆ ಹಲವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಮುದಾಯದ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಹಿರಿಯ ರಾಜಕೀಯ ನಾಯಕರು ಹಾಗೂ ನೂರಾರು ಸದಸ್ಯರು ಭಾಗವಹಿಸಿದ್ದರು.

ವರದಿ: ರಂಗರಾಜು ಎಂ. ಗರಣಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!