ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಕ್ರಮ ಸಾರಾಯಿ ಮಾರಾಟವನ್ನು ಕೂಡಲೇ ಬಂದ್ ಮಾಡಬೇಕು: ಯುವ ಕ್ರಾಂತಿ ಸಂಘಟನೆ ಆಗ್ರಹ

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದಲ್ಲಿ ಅಕ್ರಮವಾಗಿ ನಡೆಯುತ್ತಿರುವ ಸಾರಾಯಿ ಮಾರಾಟವನ್ನು ಕೂಡಲೇ ಬಂದ್ ಮಾಡಿ, ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ, ಯುವ ಕ್ರಾಂತಿ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಶ್ರೀ ಸಂಗಮೇಶ ಭೂರೆ ಅವರ ನೇತೃತ್ವದಲ್ಲಿ ಬಸವಕಲ್ಯಾಣ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.
ಮನವಿಯಲ್ಲಿ, ಮಂಠಾಳ ಗ್ರಾಮದಲ್ಲಿ ಅಕ್ರಮ ಸಾರಾಯಿ ಮಾರಾಟದಿಂದ ಸಾರ್ವಜನಿಕರ ಆರೋಗ್ಯ, ಶಾಂತಿ ಹಾಗೂ ಸಾಮಾಜಿಕ ವ್ಯವಸ್ಥೆಯ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ವಿಶೇಷವಾಗಿ ಯುವಕರು ಮತ್ತು ಬಡ ಕುಟುಂಬಗಳು ಇದರ ಪರಿಣಾಮಕ್ಕೆ ಒಳಗಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ದಾಳಿ ನಡೆಸಿ ಅಕ್ರಮ ಸಾರಾಯಿ ಮಾರಾಟವನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಯುವ ಕ್ರಾಂತಿ ಸಂಘಟನೆಯ ತಾಲೂಕ ಅಧ್ಯಕ್ಷರಾದ ಶ್ರೀ ನವನಾಥ ಮೇತ್ರೆ,ಮಂಠಾಳ ವಲಯ ಘಟಕದ ಅಧ್ಯಕ್ಷರಾದ ಶ್ರೀ ಸಂದೀಪ ಪಾಟೀಲ,ಸಚಿನ ಮೊಳಕೆರೆ, ವಿರೇಶ ಗುಡ್ಡಾ ,ಆಶಿಸ ಬಿರಾದಾರ, ಸತೀಶ್ ಜಮಾದಾರ್, ಸುನಿಲ್ ಜುಂಜ, ಸಾಗರ್, ಮಹಾಂತೇಶ, ಸುಮಿತ್ ಜಮಾದಾರ್, ಕಂಠೆಪ್ಪ ಜಮಾದಾರ್, ಸಿದ್ದರಾಮ ಕುಂಬಾರೇ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ: ಶ್ರೀನಿವಾಸ ಬಿರಾದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!