ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಒಂದು ವರ್ಷ ಗ್ಯಾರಂಟಿ ಯೋಜನೆ ನಿಲ್ಲಿಸಿ ರೈತರ ಸಾಲ ಮನ್ನಾ ಮಾಡುವಂತೆ ಮೆಹಬೂಬ್ ಸಾಬ್ ಚೌದರಿ ಒತ್ತಾಯ.

ಕಲ್ಬುರ್ಗಿ ಸುದ್ದಿ : ಕಾಂಗ್ರೆಸ್ ಸರ್ಕಾರ ರೈತರಿಗಾಗಿ ಏನೂ ಮಾಡಿಲ್ಲ ಈ ಸರ್ಕಾರ ಬರೀ ಪ್ರಚಾರದ ಗುಂಗಿನಲ್ಲಿದೆ ಕೂಡಲೇ ರಾಜ್ಯದಲ್ಲಿ ಬರಗಾಲ ಘೋಷಣೆಯನ್ನು ಮಾಡಿ ರೈತರ ಸಾಲವನ್ನು ಮನ್ನಾ ಮಾಡುವಂತೆ ಮಹಬೂಬ್ ಸಾಬ್ ಚೌದರಿ ವಕೀಲರು ಬಿಳವಾರ ಅವರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ ಕಾಂಗ್ರೆಸ್ ಸರ್ಕಾರ ತಾನು ರೈತರ ಪರ ಎಂದು ಬಿಂಬಿಸಿಕೊಳ್ಳುವ ಕೆಲಸ ಮಾಡುತ್ತಿದೆ ಆದರೆ ಗ್ರಾಮೀಣ ಭಾಗದ ರೈತರಿಗೆ ಉಚಿತ ವಿದ್ಯುತ್ ನೀಡದೆ ರೈತರೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಮೆಹಬೂಬ್ ಸಾಬ್ ಚೌದರಿ ವಕೀಲರು ಸರಕಾರದ ನಡೆಗೆ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
ಗ್ಯಾರಂಟಿ ಯೋಜನೆಯಿಂದ ವರ್ಷಕ್ಕೆ 50,000 ಕೋಟಿ ವೆಚ್ಚವಾಗುತ್ತಿದೆ ಎಂದು ಸರ್ಕಾರ ಹೇಳುತ್ತಿದೆ ಆದರೆ ಮೊದಲು ಸರ್ಕಾರ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲಿ ಹಾಗೂ ರಾಜ್ಯದ ರೈತರ ಸಾಲ ಮನ್ನಾ ಮಾಡಿ ಸಂಕಷ್ಟದಲ್ಲಿರುವ ರೈತರ ನೆರವಿನ ಹಸ್ತ ನೀಡುವ ಕೆಲಸ ರಾಜ್ಯ ಸರ್ಕಾರ ಮಾಡಬೇಕಿದೆ ರೈತರು ಸಾಲ ಸೋಲ ಮಾಡಿ ದುಬಾರಿ ಬೆಲೆ ಹತ್ತಿ ಹಾಗೂ ಇನ್ನಿತರ ವಾಣಿಜ್ಯ ಬೆಳೆಗಳನು ಬಿತ್ತನೆ ಮಾಡಿದ್ದಾರೆ ಸರಿಯಾದ ಸಮಯಕ್ಕೆ ಮಳೆ ಬಾರದ ಕಾರಣ ರೈತರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ ಆದರೆ ರಾಜ್ಯ ಸರ್ಕಾರ ರೈತರ ವಿಷಯದಲ್ಲಿ ದಿವ್ಯ ನಿರ್ಲಕ್ಷ ವಹಿಸುತ್ತಿರುವುದು ಸರಿಯಲ್ಲ ಇತ್ತೀಚಿನ ದಿನಗಳಲ್ಲಿ ರೈತರ ಆತ್ಮಹತ್ಯೆಯಂತಹ ಪ್ರಕರಣಗಳು ಹೆಚ್ಚಾಗುತ್ತಿವೆ ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಿದೆ ವಿಳಂಬ ಧೋರಣೆ ಅನುಸರಿಸದೆ ಕೂಡಲೆ ರಾಜ್ಯದಲ್ಲಿ ಬರಗಾಲ ಘೋಷಣೆಯನ್ನು ಮಾಡಿ ರೈತರಿಗೆ ಉಚಿತ ವಿದ್ಯುತ್ ಹಾಗೂ ಬೆಳೆ ಪರಿಹಾರ ಧನ ವಿತರಿಸುವ ಕೆಲಸ ಮಾಡಲಿ ಮತ್ತು ರಾಜ್ಯದ ಎಲ್ಲಾ ರೈತರ ಸಾಲವನ್ನು ಮನ್ನಾ ಮಾಡಬೇಕೆಂದು ಮಹಬೂಬ್ ಸಾಬ್ ಚೌದರಿ ವಕೀಲರು ಸರ್ಕಾರಕ್ಕೆ ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!