ಕೊಟ್ಟೂರು :ಪಟ್ಟಣದ ಪ್ರವಾಸ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವಿಜಯನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುಡಿಯಾರ್ ಮಲ್ಲಿಕಾರ್ಜುನ ಸುದ್ದಿಗಾರರೊಂದಿಗೆ ಅವರು ಮಾತನಾಡಿ
ನವದೆಹಲಿ ಜಂತರ ಮಂತರದಲ್ಲಿ ಸೋನಮ್ ವಾಂಗ್ಚುಕ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತದೆ.
ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಮರು ಮರು ನಡೆಯುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ, ವಿದ್ಯಾರ್ಥಿಗಳ ಭವಿಷ್ಯದ ಮೇಲಿನ ಅನಿಶ್ಚಿತತೆ, ನಿರುದ್ಯೋಗ, ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಹಾಗೂ ವಿದ್ಯಾರ್ಥಿಗಳ ನ್ಯಾಯಸಮ್ಮತ ಬೇಡಿಕೆಗಳನ್ನು ಕಡೆಗಣಿಸಿರುವುದು ಅತ್ಯಂತ ಖಂಡನೀಯವಾಗಿದೆ.
ಕಳೆದ 19 ದಿನಗಳಿಂದ ನಿರಂತರ ಉಪವಾಸದಲ್ಲಿರುವ ಸೋನಮ್ ವಾಂಗ್ಚುಕ್ ಅವರ ಆರೋಗ್ಯ ಹದಗೆಟ್ಟಿದ್ದರೂ ಕೇಂದ್ರ ಬಿಜೆಪಿ ಸರ್ಕಾರ ಮೌನ ವಹಿಸಿರುವುದು ಅತ್ಯಂತ ಖಂಡನೀಯ. ಇದು ವಿದ್ಯಾರ್ಥಿಗಳು, ಯುವಜನತೆ ಹಾಗೂ ಪ್ರಜಾಸತ್ತಾತ್ಮಕ ಹಕ್ಕುಗಳ ಬಗ್ಗೆ ಕೇಂದ್ರ ಬಿಜೆಪಿ ಸರ್ಕಾರದ ನಿರ್ಲಕ್ಷ್ಯವನ್ನು ತೋರಿಸುತ್ತದೆ.
ಕೇಂದ್ರ ಬಿಜೆಪಿ ಸರ್ಕಾರ ಕೂಡಲೇ ಸೋನಮ್ ವಾಂಗ್ಚುಕ್ ಹಾಗೂ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿ ಅವರ ನ್ಯಾಯಸಮ್ಮತ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು. ವಿಳಂಬವಾದರೆ ಅದರ ಸಂಪೂರ್ಣ ಹೊಣೆ ಕೇಂದ್ರ ಬಿಜೆಪಿ ಸರ್ಕಾರವೇ ಹೊರಬೇಕಾಗುತ್ತದೆ ಎಂದು ಕಠೋರವಾಗಿ ಎಚ್ಚರಿಸಿದರು.
ವರದಿ: ಕೆ. ಗೋಣೆಪ್ಪ




















