ಮಡಿಕೇರಿ : ಲಯನ್ಸ್ ಕ್ಲಬ್ ಮಡಿಕೇರಿ ವತಿಯಿಂದ ಮಡಿಕೇರಿಯ ಯುದ್ಧ ಸ್ಮಾರಕದಲ್ಲಿ ದೇಶದ ಸೇವೆಗಾಗಿ ತಮ್ಮ ಅತ್ಯುನ್ನತ ಬಲಿದಾನ ನೀಡಿದ ವೀರ ಯೋಧರಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಗಿಲ್ ವಿಜಯ್ ದಿವಸ್ ಅನ್ನು ಶ್ರದ್ಧಾಭಕ್ತಿಗಳಿಂದ ಆಚರಿಸಲಾಯಿತು.
ಮಡಿಕೇರಿ ಲಯನ್ಸ್ ಕ್ಲಬ್ ಅಧ್ಯಕ್ಷ ಮೋಹನ್ ಕುಮಾರ್ ಎಲ್.ಮಾತನಾಡಿ, ಭಾರತೀಯ ಸಶಸ್ತ್ರ ಪಡೆಗಳ ಅಪ್ರತಿಮ ಧೈರ್ಯ, ಶೌರ್ಯ ಮತ್ತು ದೇಶಭಕ್ತಿ ಸದಾ ಸ್ಮರಣೀಯ, ಕಾರ್ಗಿಲ್ ವೀರರ ತ್ಯಾಗವು ಮುಂದಿನ ಪೀಳಿಗೆಗೂ ರಾಷ್ಟ್ರೀಯ ಏಕತೆ ಮತ್ತು ಸೇವೆಯ ಮೌಲ್ಯಗಳನ್ನು ಎತ್ತಿಹಿಡಿಯಲು ಸದಾ ಸ್ಪೂರ್ತಿಯಾಗಿರುತ್ತದೆ ಎಂದು ಹೇಳಿದರು.
ವರದಿ: ಪ್ರಿತುನ್ ಪೂವಣ್ಣ




















