ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಟಿ 55 ಯುದ್ಧ ಟ್ಯಾಂಕರ್ ಲೋಕಾರ್ಪಣೆಯೊಂದಿಗೆ ಕಾರ್ಗಿಲ್ ವಿಜಯ ದಿನದ ಆಚರಣೆ.

ಮಂಗಳೂರು ನಗರದ ಕದ್ರಿ ಪಾರ್ಕ್ ನ ಯುದ್ಧ ಸ್ಮಾರಕದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ಸೈನಿಕರ ಸಂಘ ಪ್ರತಿ ವರ್ಷದಂತೆ ಈ ದಿನವೂ ಕಾರ್ಗಿಲ್ ವಿಜಯ ದಿನವನ್ನು ವಿಜೃಂಭಣೆಯಿಂದ ಆಚರಿಸಿದರು. ಟಿ 55 ಯುದ್ಧ ಟ್ಯಾಂಕರ್ ನ ಲೋಕಾರ್ಪಣೆಯು ಇವತ್ತಿನ ಆಕರ್ಷಣೆ ಆಗಿತ್ತು.

ಬೆಳಿಗ್ಗೆ 9:15ಕ್ಕೆ ವಿದ್ಯುಕ್ತವಾಗಿ ಕಾರ್ಯಕ್ರಮ ಆರಂಭಗೊಂಡು ಟಿ 55 ಟ್ಯಾಂಕರನ್ನು ನಿವೃತ್ತ ಸೈನಿಕರ ಸಂಘದ ಹಿರಿಯ ಕರ್ನಲ್ ನಿಟ್ಟೆ ಗುತ್ತು ಶ್ರೀ ಶರತ್ ಭಂಡಾರಿ, ಬಿಗೇಡಿಯರ್ ಐ. ಎನ್. ರೈ, ಕಾಪ್ಟನ್ ಗಣೇಶ್ ಕಾರ್ಣೀಕ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್ ಮತ್ತು ನೂರಾರು ನಿವೃತ್ತ ಸೈನಿಕರ ಹಾಗೂ ದೇಶಾಭಿಮಾನಿ ನಾಗರಿಕರ ಉಪಸ್ಥಿತಿಯಲ್ಲಿ ಲೋಕಾರ್ಪಣೆ ಕಾರ್ಯಕ್ರಮ ಜರುಗಿತು.
ನಂತರ ಜರುಗಿದ ಸಭಾ ಕಾರ್ಯಕ್ರಮದಲ್ಲಿ ಗಣ್ಯರು ಕಾರ್ಗಿಲ್ ಯದ್ಧದ ಬಗ್ಗೆ ತಮ್ಮ ಅನುಭವ ಮತ್ತು ಅಭಿಪ್ರಾಯವನ್ನು ಹಂಚಿಕೊಂಡರು.
ಅಗಲಿದ ಸೖನಿಕರಿಗೆ ಒಂದು ನಿಮಿಷ ದ ಮೌನ ಪ್ರಾರ್ಥನೆ, ನೆರೆದ ದೇಶಾಭಿಮಾನಿಗಳಿಂದ ಯುದ್ಧ ಸ್ಮಾರಕಕ್ಕೆ ಪುಷ್ಪಾರ್ಚನೆ ಗೈಯಲಾಯಿತು.
ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

ವರದಿ: ಚಂದ್ರಶೇಖರ ಹೆಬ್ಬಾರ್ ಕೊಲ್ಯ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!