ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ
ಮಂಗಳವಾರ ಹುಂಡಿಗಳ ಎಣಿಕೆ ಕಾರ್ಯಕ್ರಮ

ಚಾಮರಾಜನಗರ: ಜಿಲ್ಲೆಯ ಪ್ರಮಖ ಧಾರ್ಮಿಕ ಸ್ಥಳವಾದ ಹನೂರು
ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ
ಮಂಗಳವಾರ ಹುಂಡಿಗಳ ಎಣಿಕೆ ಕಾರ್ಯಕ್ರಮ ನಡೆಯಿತು. ಈ ವೇಳೆ
ಹುಂಡಿಗಳಲ್ಲಿ 2.86 ಕೋಟಿ ರೂಪಾಯಿ ಹಣ ಸಂಗ್ರಹವಾಗಿದೆ. ಮಲೆ
ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ
ಸಂಕೀರ್ಣದಲ್ಲಿ ಮಂಗಳವಾರ ಸಿಸಿ ಕ್ಯಾಮರಾ ಕಣ್ಗಾವಲು ಹಾಗೂ
ಪೊಲೀಸ್ ಬಂದೋಬಸ್ತ್ನಲ್ಲಿ ಎಣಿಕೆ ಕಾರ್ಯ ಪ್ರಾರಂಭ
ಮಾಡಲಾಯಿತು. ಹುಂಡಿ ಎಣಿಕೆ ಕಾರ್ಯ ರಾತ್ರಿ 10.30
ಗಂಟೆಯವರೆಗೂ ನಡೆಯಿತು.
ಹುಂಡಿ ಎಣಿಕೆ ಕಾರ್ಯದಲ್ಲಿ ದೇವಸ್ಥಾನದ ಸಿಬ್ಬಂದಿ ಭಾಗವಹಿಸಿದ್ದರು.
ಈ ಬಾರಿ ಅಮಾವಾಸ್ಯೆ, ಶಿವರಾತ್ರಿ ಜಾತ್ರಾ ಮಹೋತ್ಸವ, ಸರ್ಕಾರಿ
ರಜಾ ದಿನಗಳಂದು ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಭಕ್ತರು ಮಲೆ
ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಗೆ ಆಗಮಿಸಿದ್ದರಿಂದ 26
ದಿನಗಳ ಅವಧಿಯಲ್ಲಿ 2,86,17,698 ರೂಪಾಯಿ ಹಣ ಹಾಗೂ 90
ಗ್ರಾಂ ಚಿನ್ನ ಹಾಗೂ 2.825 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.

ವರದಿ :ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ