ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಮಾನತೆಗೆ ಹೋರಾಡಿದವರು ಶರಣರು : ಶಿಕ್ಷಕಿ ಜ್ಯೋತಿ ಇಟಗಿ ಅಭಿಪ್ರಾಯ

ಬಳ್ಳಾರಿ / ಕಂಪ್ಲಿ: ‘ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಮತ್ತು ಶಿವಶರಣರು ಜಾತಿ, ವರ್ಣ ಹಾಗೂ ಲಿಂಗಬೇಧವಿಲ್ಲದೆ ಎಲ್ಲರಿಗೂ ಸಮಾನತೆಯನ್ನು ದಯಪಾಲಿಸಿದರು. ಅನುಭವ ಮಂಟಪದಲ್ಲಿ ಪುರುಷರಂತೆ ಮಹಿಳೆಯರಿಗೂ ಆಧ್ಯಾತ್ಮಿಕ ಮತ್ತು ಧಾರ್ಮಿಕ ಚರ್ಚೆಗಳಲ್ಲಿ ಸಮಾನ ಅವಕಾಶ ನೀಡಲಾಯಿತು. ಶರಣರ ಚಿಂತನೆಗಳು, ಲಿಂಗ ತಾರತಮ್ಯವಿಲ್ಲದೆ ಎಲ್ಲರಿಗೂ ಸಮಾನ ವೇದಿಕೆ, ಸ್ತ್ರೀ ಸ್ವಾತಂತ್ರ್ಯ ಮತ್ತು ಸಮಾನತೆಯ ಸಾರವನ್ನು ತಿಳಿಸಿ ಮಹಿಳೆಯರಿಗೂ ಧಾರ್ಮಿಕ ಹಕ್ಕುಗಳನ್ನು ಅನುಗ್ರಹಿಸಿದ್ದರು’ ಎಂದು ಇಲ್ಲಿನ 4ನೇ ವಾರ್ಡ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಜ್ಯೋತಿ ಇಟಗಿ ಅಭಿಪ್ರಾಯಪಟ್ಟರು.

ಪಟ್ಟಣದ ಹೊಸ ಬಸ್ ನಿಲ್ದಾಣ ಹತ್ತಿರದ ಮಡಿವಾಳ ಮಾಚಿದೇವ ಸಮುದಾಯ ಭವನದಲ್ಲಿ ತಾಲ್ಲೂಕು ಶರಣ ಸಾಹಿತ್ಯ ಪರಿಷತ್‌ ಹಮ್ಮಿಕೊಂಡಿದ್ದ 192ನೇ ಮಹಾಮನೆ ಕಾರ್ಯಕ್ರಮದಲ್ಲಿ ‘ಶರಣರ ಸಮಾನತೆ’ ಕುರಿತು ಉಪನ್ಯಾಸ ನೀಡಿ, ಶಿವಶರಣರ ವಚನ ಸಾಹಿತ್ಯವು ಕನ್ನಡ ಸಾಹಿತ್ಯಕ್ಕೆ ನೀಡಿದ ಶ್ರೇಷ್ಠ ಕೊಡುಗೆಯಾಗಿದೆ ಎಂದರು.

ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಜಿ. ಪ್ರಕಾಶ್‌ ಅಧ್ಯಕ್ಷತೆ ವಹಿಸಿದ್ದರು. ಅಕ್ಕನ ಬಳಗದ ಸಹ ಕಾರ್ಯದರ್ಶಿ ಬಿ.ಎಂ. ಪುಷ್ಪಾ ರುದ್ರಯ್ಯ, ಶಿಕ್ಷಕಿ ಗುರುಬಸಮ್ಮ ಸೊಪ್ಪಿನ ಮಠ, ಮಡಿವಾಳ ಸಮುದಾಯದ ತಾಲ್ಲೂಕು ಅಧ್ಯಕ್ಷ ಮಡಿವಾಳ ಹುಲುಗಪ್ಪ, ಪರಿಷತ್ ಕಾರ್ಯಾಧ್ಯಕ್ಷ ಬಂಗಿ ದೊಡ್ಡ ಮಂಜುನಾಥ, ಪದಾಧಿಕಾರಿಗಳಾದ ಎಸ್.ಡಿ. ಬಸವರಾಜ, ಎಚ್. ನಾಗರಾಜ, ಅಶೋಕ ಕುಕನೂರು, ಎಲಿಗಾರ ವೆಂಕಟರೆಡ್ಡಿ, ಕೆ. ಚಂದ್ರಶೇಖರ್, ಶಂಕ್ರಪ್ಪ, ಡಿ. ಬಸವರಾಜ, ಯು.ಎಂ. ವಿದ್ಯಾಶಂಕರ, ವಿರುಪಾಕ್ಷಿ, ಹನುಮಂತ್, ಚಂದ್ರಯ್ಯ ಸೊಪ್ಪಿನ ಮಠ, ಬುಸಾರೆ ನಾರಾಯಣಪ್ಪ, ರಾಜೇಶ್, ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!