ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತರಬೇತಿ ಮೂಲಕ ಕೌಶಲ ಗಳಿಸುವಲ್ಲಿ ಮುಂದಾಗಬೇಕು : ನಾಗಭೂಷಣ ಶಿವಾಚಾರ್ಯರು

ಬಳ್ಳಾರಿ / ಕಂಪ್ಲಿ : ಮಹಿಳೆಯರು ಆರ್ಥಿಕ ಸ್ವಾವಲಂಬನೆಗೊಳ್ಳಲು ಕೌಶಲ ಅಗತ್ಯವಿದ್ದು ತರಬೇತಿ ಮೂಲಕ ಕೌಶಲ ಗಳಿಸುವಲ್ಲಿ ಮುಂದಾಗಬೇಕು ಎಂದು ಹೆಬ್ಬಾಳ ಬೃಹನ್ಮಠದ ನಾಗಭೂಷಣ ಶಿವಾಚಾರ್ಯರು ಹೇಳಿದರು.
ಇಲ್ಲಿನ ಸಾಂಗತ್ರಯ ಸಂಸ್ಕೃತ ಪಾಠಶಾಲೆಯಲ್ಲಿ ಶ್ರೀ ಅಕ್ಕಮಹಾದೇವಿ ಮಹಿಳಾ ಮಂಡಳಿ ಆಯೋಜಿಸಿದ ಮಹಿಳಾ ಸ್ವ ಉದ್ಯೋಗ ಕೌಶಲ ವಸ್ತುಗಳ ಪ್ರದರ್ಶನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿ, ಪ್ರಸ್ತುತ ದಿನಮಾನಗಳಲ್ಲಿ ಸ್ವ ಉದ್ಯೋಗಕ್ಕೆ ಕೌಶಲ ಅಗತ್ಯವಿದೆ. ಪ್ರತಿಯೊಬ್ಬರಲ್ಲೂ ಸುಪ್ತವಾಗಿರುವ ಕೌಶಲವನ್ನು ಬಳಸಿಕೊಂಡು ವಸ್ತುಗಳನ್ನು ಉತ್ಪಾದಿಸಿ ಮಾರಾಟ ಮಾಡುವ ಮೂಲಕ ಆದಾಯ ಗಳಿಸಬೇಕಿದೆ ಎಂದರು.

ಅಕ್ಕನ ಬಳಗದ ಸದಸ್ಯೆಯರು ಉತ್ಪಾದಿಸಿದ ಸಾವಯವ ವಸ್ತು, ಆಹಾರ ಪದಾರ್ಥ ಸೇರಿ ನಾನಾ ವಸ್ತುಗಳ ಪ್ರದರ್ಶನಗೊಂಡವು. ಸಾಂಗತ್ರಯ ಸಂಸ್ಕೃತ ಪಾಠಶಾಲೆ ಅಧ್ಯಕ್ಷ ಇಟಗಿ ಬಸವರಾಜಗೌಡ ಕಾರ್ಯಕ್ರಮಕ್ಕೆ ಚಾಲನೆ
ನೀಡಿದರು.
ಅಕ್ಕಮಹಾದೇವಿ ಮಹಿಳಾ ಮಂಡಳಿ ಅಧ್ಯಕ್ಷೆ ಡಾ.ಶಾರದಾ ಜಗನ್ನಾಥ ಹಿರೇಮಠ, ಪಾಠಶಾಲೆ ಮಾಜಿ ಅಧ್ಯಕ್ಷ ಎಸ್.ಎಸ್. ಎಂ.ಚನ್ನಬಸವರಾಜ ಸೇರಿ ಅಕ್ಕನ ಬಳಗದ ಪದಾಧಿಕಾರಿಗಳು, ಸದಸ್ಯೆಯರು ಸೇರಿದಂತೆ ಇತರರು ಹಾಜರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!