ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗುರುವಾರ ಹೆಚ್.ವೀರಾಪುರದಲ್ಲಿ ಪತ್ರಕರ್ತರ ದಿನಾಚರಣೆ ಸಮಾರಂಭ

ಬಳ್ಳಾರಿ / ಕಂಪ್ಲಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕುರುಗೋಡು ತಾಲೂಕು ಘಟಕದ ನೇತೃತ್ವದಲ್ಲಿ ಇದೇ ಜು.30ರ ಗುರುವಾರ ಬೆಳಿಗ್ಗೆ 10:30ಕ್ಕೆ ತಾಲೂಕಿನ ಹೆಚ್.ವೀರಾಪುರದ ಜ್ಞಾನಜ್ಯೋತಿ ಶಿವಲಿಂಗ ಮಂದಿರದಲ್ಲಿ ಪತ್ರಿಕಾ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ, ಸಾಧಕರ ಸನ್ಮಾನ ಸಮಾರಂಭ ಆಯೋಜಿಸಲಾಗಿದ್ದು, ಪತ್ರಕರ್ತರು, ಜನಪ್ರತಿನಿಧಿಗಳು, ಸಂಘ-ಸಂಸ್ಥೆಯವರು ಹಾಗೂ ಜನರು ಆಗಮಿಸಿ, ಯಶಸ್ವಿಗೊಳಿಸಬೇಕೆಂದು ಕಾನಿಪ ಕುರುಗೋಡು ತಾಲೂಕು ಅಧ್ಯಕ್ಷ ಜಿ.ಎಂ.ಬಸಯ್ಯಸ್ವಾಮಿ ಕೋರಿದರು.
ಅವರು ಬುಧವಾರ ಪಟ್ಟಣದಲ್ಲಿ ಪತ್ರಿಕಾ ಪ್ರಕಟಣೆ ನೀಡಿ ಮಾತನಾಡಿ, ಎಮ್ಮಿಗನೂರಿನ ಹಂಪಿ ಸಾವಿರ ದೇವರ ಮಹಾಂತ ಮಠದ ಶ್ರೀ ಪರಮಪೂಜ್ಯ ವಾಮದೇವ ಮಹಾಂತ ಶಿವಾಚಾರ್ಯ ಮಹಾಸ್ವಾಮಿಗಳು, ಹೆಚ್.ವೀರಾಪುರದ ಜ್ಞಾನಜ್ಯೋತಿ, ಶಿವಲಿಂಗ ಮಂದಿರದ ಶ್ರೀ ಪರಮಪೂಜ್ಯ ಜಡಿತಾತ ಇವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಶಾಸಕ ಜೆ.ಎನ್.ಗಣೇಶ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ವಿಜಯ ಕರ್ನಾಟಕ ಪತ್ರಿಕೆಯ ಉಪ ಸಂಪಾದಕ ರವೀಂದ್ರ ತಳಗಡೆ ಇವರು ಪತ್ರಿಕೆಯ ಮಹತ್ವದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕಾನಿಪ ಬಳ್ಳಾರಿ ಜಿಲ್ಲಾಧ್ಯಕ್ಷ ಎನ್.ವೀರಭದ್ರಗೌಡ, ರಾಜ್ಯ ಸಮಿತಿ ಸದಸ್ಯ ಹೆಚ್.ಬಸವರಾಜ, ತಹಶೀಲ್ದಾರ್ ನರಸಪ್ಪ, ತಾಪಂ ಇಒ ಪಂಪಾಪತಿ ಹಿರೇಮಠ, ಪಿಎಸ್‌ಐ ಸುಪ್ರೀತ್ ವಿರುಪಾಕ್ಷಪ್ಪ, ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ, ಉಪ ನೋಂದಣಾಧಿಕಾರಿ ಸಂತೋಷ್ ಪಾಟೀಲ್. ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಲಿಂಗಮೂರ್ತಿ, ಹಿರಿಯ ಕೃಷಿ ಅಧಿಕಾರಿ ಡಿ.ದೇವರಾಜ, ಕಾನಿಪ ಜಿಲ್ಲಾ ಉಪಾಧ್ಯಕ್ಷ ವಾಗೀಶ್, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಸತೀಶ್ ಕುಮಾರ ಆಗಮಿಸಲಿದ್ದಾರೆ. ಆದ್ದರಿಂದ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು, ಸಂಘ-ಸಂಸ್ಥೆಯವರು, ಮುಖಂಡರು, ಜನರು ಪಾಲ್ಗೊಂಡು, ಯಶಸ್ವಿಗೊಳಿಸಬೇಕೆಂದು ತಿಳಿಸಿದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!