ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹಾಸನ ಜಿಲ್ಲೆ ಅರಕಲಗೂಡಿನಲ್ಲಿ SIR ಕಾರ್ಯ ಚುರುಕು

ಮತದಾರರ ಪಟ್ಟಿಯಲ್ಲಿ ಹೆಸರು ಉಳಿಸಿಕೊಳ್ಳಲು ತಹಶೀಲ್ದಾರ್ ಮನವಿ

ಅರಕಲಗೂಡು: ಕೇಂದ್ರ ಚುನಾವಣಾ ಆಯೋಗದ ನಿರ್ದೇಶನ ಮತ್ತು ಜಿಲ್ಲಾಧಿಕಾರಿಗಳ ಮಾರ್ಗದರ್ಶನದಂತೆ ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ – SIR ನಡೆಯುತ್ತಿದ್ದು, ಅರಕಲಗೂಡು ತಾಲೂಕಿನಲ್ಲೂ ಕಾರ್ಯ ಚಾಲನೆಯಲ್ಲಿದೆ.

ಈ ಕುರಿತು ಮನವಿ ಮಾಡಿರುವ ಅರಕಲಗೂಡು ತಹಶೀಲ್ದಾರ್ ಅವರು, ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,36,667 ಮತದಾರರಿದ್ದಾರೆ. ಈ ಪೈಕಿ ಈಗಾಗಲೇ 2,09,195 ಮತದಾರರು ತಮ್ಮ ಎನ್ಯೂಮರೇಷನ್ ಫಾರ್ಮ್‌ಗಳನ್ನು BLO ಗಳಿಗೆ ನೀಡಿದ್ದು, ಡಿಜಿಟಲೀಕರಣಗೊಂಡಿದೆ. ಆದರೂ ಇನ್ನೂ 7,384 ಎನ್ಯೂಮರೇಷನ್ ಫಾರ್ಮ್‌ಗಳು ಮತದಾರರ ಬಳಿಯೇ ಉಳಿದಿವೆ.

“ದಯವಿಟ್ಟು ಕೊನೆ ದಿನದವರೆಗೆ ಕಾಯದೆ, ಕೂಡಲೇ ತಮ್ಮ ಎನ್ಯೂಮರೇಷನ್ ಫಾರ್ಮ್‌ಗಳನ್ನು ತಮ್ಮ ಬೂತ್ ಮಟ್ಟದ ಅಧಿಕಾರಿಗಳಿಗೆ (BLO) ನೀಡಿ, ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇರುವುದನ್ನು ಖಾತ್ರಿಪಡಿಸಿಕೊಳ್ಳಿ. ಮತದಾರರ ಪಟ್ಟಿಯಲ್ಲಿದ್ದರೆ ಮಾತ್ರ ಎಲ್ಲಾ ಸರ್ಕಾರಿ ಸೌಲಭ್ಯಗಳು ದೊರೆಯಲಿವೆ” ಎಂದು ತಹಶೀಲ್ದಾರ್ ಅವರು SIR 2025 ಕ್ಕೆ ಎಲ್ಲರೂ ಸಹಕರಿಸಬೇಕೆಂದು ಕೋರಿದ್ದಾರೆ.

ವರದಿ ಸುಧೀಂದ್ರ ಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!