ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗ್ರಾಮ ಪಂಚಾಯಿತಿ ಕಚೇರಿಯ ರಸ್ತೆಯಲ್ಲಿ ಕಸದ ರಾಶಿ : ಚರಂಡಿ ನೀರಿನ ಗಬ್ಬು ವಾಸನೆ ಗ್ರಾ. ಪಂ. ಅಧಿಕಾರಿಗಳ ನಿರ್ಲಕ್ಷ್ಯ

ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಚಿನಕ ವಜ್ರ ಗ್ರಾಮ ಪಂಚಾಯಿತಿಯಲ್ಲಿರುವ ಚಿನಕವಜ್ರ ಗ್ರಾಮದ ರಸ್ತೆಯ ಎರಡು ಭಾಗಗಳಲ್ಲಿ ಕಸದ ರಾಶಿ ಮತ್ತು ಚರಂಡಿಯ ಗಬ್ಬು ವಾಸನೆ ಬರುವ ಅಧಿಕಾರಿಗಳಿಗೆ ಸ್ವಾಗತ ಕೋರುವ ಸ್ಥಿತಿಯಾಗಿದೆ.

ಗ್ರಾಮದಲ್ಲಿ 200 ಮನೆಗಳಿದ್ದರೂ ಇಲ್ಲಿಗೆ ಮೂಲ ಸೌಕರ್ಯವಾದ ನೀರು ಮತ್ತು ಚರಂಡಿಯ ಸ್ವಚ್ಛತೆಯು ಮರೀಚಿಕೆಯಾಗಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಕಚೇರಿಗೆ ಸೀಮಿತವಾಗಿದ್ದಾರೆ. ಗ್ರಾಮಸ್ಥರು ಮತ್ತು ಗ್ರಾಮಗಳ ಬಗ್ಗೆ ನಿರ್ಲಕ್ಷ್ಯ ಹೊಂದಿದ್ದಾರೆ.
ಎರಡು ತಿಂಗಳಿಗಳಿಂದ ಚರಂಡಿಯ ಕೊಳಚೆ ನೀರು ನಿಂತು ದುರ್ವಾಸನೆ ಬೀರುತ್ತಿದೆ ಆದರೆ ಪಕ್ಕದಲ್ಲಿ ಕುಡಿಯುವ ನೀರಿನ ಘಟಕ ಇದರಿಂದ ಗ್ರಾಮಸ್ಥರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಚರಂಡಿ ಬಂದ್ ಆಗಿರುವುದರಿಂದ ಕೊಳಚೆ ನೀರು, ಚರಂಡಿಯಲ್ಲಿ ನಿಂತು ಸೊಳ್ಳೆ ಮತ್ತು ನೊಣಗಳ ಕಾಟ ವಿಪರೀತವಾಗಿದೆ. ಮಳೆ ಬಂದಾಗ ಪರಿಸ್ಥಿತಿ ಮತ್ತಷ್ಟು ಹದಗಿಡುತ್ತದೆ. ಈ ಸಮಸ್ಯೆ ಬಗೆಹರಿಸಬೇಕಾಗಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಸಮಸ್ಯೆ ಕೇಳುವರು ಯಾರು?

ಸುಮಾರು ದಿನಗಳಿಂದ ಚರಂಡಿ ಇದ್ದರೂ ಸ್ವಚ್ಛತೆ ಇಲ್ಲದೆ ಗಬ್ಬು ವಾಸನೆ ಮತ್ತು ಸೊಳ್ಳೆಗಳ ವಾಸಸ್ಥಾನಕ್ಕೆ ನಮ್ಮ ಊರಿನ ಚರಂಡಿ ಮನೆಯಾಗಿದೆ. ಇದರಿಂದ ಗ್ರಾಮದಲ್ಲಿರುವ ಅಂಗನವಾಡಿಯ ಮಕ್ಕಳು ಹಾಗೂ ವೃದ್ಧರಿಗೆ ಆರೋಗ್ಯದಲ್ಲಿ ಏರುಪೇರು ಆಗುತ್ತಿದೆ ಚರಂಡಿಯ ಒಳಗೆ ಗಿಡ ಜಂಡು ಬೆಳೆದು ಚರಂಡಿಯು ಮಾಯವಾಗಿದೆ. ಚರಂಡಿ ಅಕ್ಕ ಪಕ್ಕದ ಮನೆಯವರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿಯಾಗಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ವರದಿ. ಪ್ರಸನ್ನ ಕುಮಾರ್. ಎಸ್. ಕೊರಟಗೆರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!