ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಸಕ ಡಾ. ಮಂತರ್ ಗೌಡ ಅವರಿಂದ ೫೦ಲಕ್ಷ ವೆಚ್ಚದ ತಡೆಗೋಡೆ ಲೋಕಾರ್ಪಣೆ

ಮಡಿಕೇರಿ: ನಗರದ ಜಲಾಶಯ ಬಡಾವಣೆಯ ನಾಗರಿಕರ ಬಹುಕಾಲದ ಕೋರಿಕೆಯಾಗಿದ್ದ ೫೦ ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾದ ತಡೆಗೋಡೆ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ನಿರ್ಮಿಸಿದ ಕಾಮಗಾರಿಗಳನ್ನು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡರವರು ಲೋಕಾರ್ಪಣೆ ಮಾಡಿದರು.
ಗೌಳಿಬೀದಿ ನೂತನ ಕಾಂಕ್ರೀಟ್ ರಸ್ತೆ ಭಗವತಿ ನಗರದ ಮೂಲಕ ಅಬ್ಬಿಫಾಲ್ಸ್ ಗೆ ಹೋಗುವ ಕಾಂಕ್ರೀಟ್ ರಸ್ತೆ ಕಾಮಗಾರಿಗಳನ್ನು ನಾಗರಿಕರ ಸಮ್ಮುಖದಲ್ಲಿ ಉದ್ಘಾಟನೆ ಮಾಡಿದರು.

ಮಾನ್ಯ ಮುಖ್ಯಮಂತ್ರಿಗಳು ನೀಡಿದ ವಿಶೇಷ ಅನುದಾನದಲ್ಲಿ 3.5 ಕೋಟಿ ರೂಗಳನ್ನು ಮಡಿಕೇರಿ ನಗರದ ಬಡಾವಣೆಗಳ ಅಭಿವೃದ್ಧಿಗೆ ನೀಡಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಅನುದಾನ ಒದಗಿಸಿ ಮಡಿಕೇರಿ ನಗರವನ್ನು ರಾಜ್ಯದಲ್ಲಿಯೇ ಮಾದರಿ ನಗರವನ್ನಾಗಿಸಲು ಪ್ರಯತ್ನ ಪಡುವುದಾಗಿ ಈ ಸಂದರ್ಭದಲ್ಲಿ ಡಾ. ಮಂತರ್ ಗೌಡ ಭರವಸೆ ನೀಡಿದರು.

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾರವರು ಮಾತನಾಡಿ 2018ರ ಪ್ರಕೃತಿ ವಿಕೋಪ ಆದಲ್ಲಿಂದ ಜಲಾಶಯ ಬಡಾವಣೆಯ ನಿವಾಸಿಗಳು ಭೂ ಕುಸಿತದ ಆತಂಕದಿಂದಲೇ ಇದ್ದು ತಮ್ಮ ಬಡಾವಣೆ ರಕ್ಷಣೆಗೆ ಮನವಿ ಸಲ್ಲಿಸುತ್ತಲೇ ಬಂದಿದ್ದರು. ದೊಡ್ಡ ಮೊತ್ತದ ಕಾಮಗಾರಿಯಾದ್ದರಿಂದ ಸಮಸ್ಯೆಗೆ ಪರಿಹಾರ ಸಿಕ್ಕಿರಲಿಲ್ಲ.ಕಳೆದ ವರ್ಷ ಮಳೆಗಾಲದಲ್ಲಿ ಸದರಿ ಅಪಾಯಕಾರಿ ಪ್ರದೇಶವನ್ನು ವೀಕ್ಷಿಸಿದ ಶಾಸಕರು ಅನುದಾನದ ಭರವಸೆ ನೀಡಿದ್ದರು. ಈಗ ೫೦ ಲಕ್ಷ ರೂ ವೆಚ್ಚದಲ್ಲಿ ತಡೆಗೋಡೆ ಕಾಮಗಾರಿ ಪೂರ್ಣಗೊಳಿಸಿ ಬಡಾವಣೆ ನಿವಾಸಿಗಳು ನಿರಾಳರಾಗಿರುವಂತೆ ಮಾಡಿದ್ದಾರೆ. ಹಾಗಾಗಿ ಬಡಾವಣೆಯ ಎಲ್ಲಾ ನಿವಾಸಿಗಳ ಪರವಾಗಿ ಶಾಸಕರಿಗೆ ಧನ್ಯವಾದಗಳನ್ನು ಅರ್ಪಿಸುವುದಾಗಿ ಹೇಳಿದರು.

ವರದಿ : ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!