ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿವೇಕ ಸ್ಮಾರಕ ಮಾನ್ಯ ಪ್ರಧಾನ ಮಂತ್ರಿಗಳಿಂದ ಅನಾವರಣ

ಮೈಸೂರು: ಶ್ರೀ ರಾಮಕೃಷ್ಣ ಆಶ್ರಮದ ವತಿಯಿಂದ ಆಯೋಜಿಸಿದ ‘ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವಜನ ಕೇಂದ್ರ – ವಿವೇಕ ಸ್ಮಾರಕ’ ದ ಉದ್ಘಾಟನೆ ಹಾಗೂ ಸಾರ್ವಜನಿಕ ಸಮಾರಂಭದಲ್ಲಿ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರೊಂದಿಗೆ‌ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್‌ ಅವರು ಭಾಗವಹಿಸಿದರು.

ಸ್ವಾಮಿ ವಿವೇಕಾನಂದರು 1892ರಲ್ಲಿ ಮೈಸೂರಿಗೆ ಆಗಮಿಸಿದ ಐತಿಹಾಸಿಕ ಕ್ಷಣದ ಸ್ಮರಣಾರ್ಥ ಈ ಭವ್ಯ ಸ್ಮಾರಕವನ್ನು ನಿರ್ಮಿಸಲಾಗಿದೆ.
ಈ ಕೇಂದ್ರದಲ್ಲಿ ಸುಸಜ್ಜಿತ ಗ್ರಂಥಾಲಯ, ತರಗತಿ ಕೊಠಡಿಗಳು, ಯೋಗ ಹಾಗೂ ಧ್ಯಾನ ಮಂದಿರಗಳ ಸೌಲಭ್ಯವಿದೆ. ಸ್ವಾಮೀಜಿಯವರ ಶ್ರೇಷ್ಠ ತತ್ವಗಳು ಹಾಗೂ ಆದರ್ಶಗಳನ್ನು ಪಸರಿಸುವ ಜೊತೆಗೆ, ಯುವಜನತೆಯನ್ನು ಸಬಲರನ್ನಾಗಿಸಿ ಅವರಿಗೆ ಸದಾ ಪ್ರೇರಣೆ ನೀಡುವ ನಿಟ್ಟಿನಲ್ಲಿ ಈ ತಾಣವು ಪ್ರಮುಖ ಪಾತ್ರ ವಹಿಸಲಿದೆ.

ಈ ಸಂದರ್ಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್‌, ಪರಮ ಪೂಜ್ಯ ಶ್ರೀ ಗೌತಮಾನಂದಜಿ ಮಹಾರಾಜ್‌, ಪೂಜ್ಯ ಸ್ವಾಮಿ ಮುಕ್ತಿದಾನಂದಜಿ ಮಹಾರಾಜ್, ಸಂಸದರಾದ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಶ್ರೀ ಹರೀಶ್ ಗೌಡ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ. ವಿಜಯೇಂದ್ರ ಅವರು ಉಪಸ್ಥಿತರಿದ್ದರು.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ/ಬೆಂಗಳೂರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!