ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಧರ್ಮಸ್ಥಳ ಯೋಜನೆಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಕೋಟಿ ಸಂಪತ್ತುಗಿಂತ ಆರೋಗ್ಯ ಸಂಪತ್ತು ಮುಖ್ಯ : ಶರಣಬಸಪ್ಪ ದಾನಕೈ

ಯಲಬುರ್ಗಾ: ಬೀಡಿ, ಸಿಗರೇಟ್, ಡ್ರಗ್ಸ್ ಇತರ ಮಾದಕ ವಸ್ತುಗಳ ದುಶ್ಚಟಗಳಿಗೆ ಯುವ ಸಮುದಾಯ ಸೇವನೆಗೆ ಅಂಟಿಕೊಂಡು ದಾಸರಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಂಡಿದ್ದಾರೆ, ದುಶ್ಚಟಗಳಿಂದ ದೂರವಿದ್ದು ಉತ್ತಮ ಆರೋಗ್ಯ, ಭವಿಷ್ಯವನ್ನು ರೂಪಿಸಿಕೊಳ್ಳಿ ,ಕೋಟಿ ಸಂಪತ್ತಿಗಿಂತ ಆರೋಗ್ಯ ಸಂಪತ್ತು ಮುಖ್ಯವಾದದು ಎಂದು ಅಖಿಲ ಕರ್ನಾಟಕ ಕೊಪ್ಪಳ ಜಿಲ್ಲಾ ಜನಜಾಗೃತಿ ಸಮಿತಿ ಸದಸ್ಯ ಶರಣಬಸಪ್ಪ . ಕೆ.ದಾನಕೈ ಅವರು ಯಲಬುರ್ಗಾದ ಮೌಲಾನ ಆಜಾದ ಶಾಲೆಯಲ್ಲಿ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ ಅಂಗವಾಗಿ ದೀಪ ಬೆಳಗಿಸಿ ಚಾಲನೆ ನೀಡಿ ಮಾತನಾಡಿದರು.
ಅಮುಲು ಬರುವಂತಹ ಮಾದಕ ಸೇವನೆ ಮಾಡುವುದರಿಂದ ದೈಹಿಕವಾಗಿ, ಮಾನಸಿಕವಾಗಿ ಅನೇಕ ಕಾಯಿಲೆಗಳಿಗೆ ಒಳಗಾಗಿ ತಮ್ಮ ಜೀವನವನ್ನು ಕಳೆದುಕೊಳ್ಳುವುದು ಬೇಡ ಉತ್ತಮರ ಸಂಘ ಮಾಡಿ ಸರಿ ದಾರಿಯಲ್ಲಿ ಸಾಗಬೇಕು ಡಾ.ಶೇಖರ ಭಜಂತ್ರಿ ಅವರು ಹೇಳಿದರು. ಯುವಕರ ಭವಿಷ್ಯ ಮತ್ತು ಜೀವನ ಹಾಳಾಗುತ್ತಿದೆ ಮತ್ತು ಕುಟುಂಬಗಳು ಬೀದಿಗೆ ಬಂದಿರುವ ಘಟನೆಗಳನ್ನು ಕಾಣಬಹುದು, ಉತ್ತಮ ವಿದ್ಯಾಭ್ಯಾಸದ ಜೊತೆಗೆ ಮೂಲಕ ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಮೌಲಾನ ಆಜಾದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಗುರು ಶಿಲ್ಪಾ ಕೆ. ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮೇಲ್ವಿಚಾರಕಿ ಕಾವ್ಯ ಸಿರಿಗೇರಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಸೇವಾ ಪ್ರತಿನಿಧಿ ಶಿಲ್ಪಾ ಮತ್ತು ಶಾಲೆಯ ಶಿಕ್ಷಕರಾದ ಬಾಳಪ್ಪ ಹಡಪದ ,ಶಿವಪ್ಪ ದಿವಟರ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!