ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಡಿಕೇರಿ :ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಬರ ಪರಿಸ್ಥಿತಿ ಕುರಿತು ನಡೆದ ಪರಿಶೀಲನಾ ಸಭೆಯಲ್ಲಿ ಮಾಹಿತಿ ಪಡೆದು ನೂತನ ಉಸ್ತುವಾರಿ ಸಚಿವರು ಮಾತನಾಡಿದರು.

ಹವಾಮಾನ ವೈಪರೀತ್ಯದಿಂದ ಈ ಬಾರಿ ಮುಂಗಾರು ಆರಂಭವಾಗುವುದು ತಡವಾಗಿದೆ. ಜಿಲ್ಲೆಯ ಅಲ್ಲಲ್ಲಿ ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗೆ ಹಿನ್ನಡೆಯಾಗಿದೆ. ಆದರೂ ಸಹ ಆಗಸ್ಟ್ ತಿಂಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು ಭತ್ತ ನಾಟಿ ಕಾರ್ಯ ಹಾಗೂ ಇತರೆ ಕೃಷಿ ಚಟುವಟಿಕೆ ನಡೆಯಲಿದೆ ಎಂದು ಸಚಿವರು ಹೇಳಿದರು.
ಜಿಲ್ಲೆಯಲ್ಲಿ ಮಳೆಯಿಂದಾಗಿ ಸ್ಥಳೀಯ ಸಂಸ್ಥೆ ಲೋಕೋಪಯೋಗಿ, ಪಂಚಾಯತ್ ರಾಜ್ ಇಲಾಖೆಯ ವ್ಯಾಪ್ತಿಯ ರಸ್ತೆಗಳು ಗುಂಡಿ ಬಿದ್ದಿದ್ದು ಇವುಗಳನ್ನು ಮುಚ್ಚಲು ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಮನವಿ ಮಾಡಲಾಗುವುದೆಂದು ಇದೇ ಸಂದರ್ಭದಲ್ಲಿ ಸಚಿವರು ತಿಳಿಸಿದರು.

ರಸ್ತೆ ಸರಿಪಡಿಸುವ ಸಂಬಂಧ ಟೆಂಡರ್ ಆಹ್ವಾನಿಸಬೇಕು. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಕರ್ತವ್ಯ ನಿರ್ವಹಿಸಬೇಕು. ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸುವಂತಾಗಬೇಕು ಎಂದು ತಿಳಿಸಿದರು.
ಅತಿವೃಷ್ಟಿ ಮತ್ತು ಅನಾವೃಷ್ಟಿ ಸಂಬಂಧ ಸರಕಾರದಿಂದ ಅಗತ್ಯ ನೆರವು ನೀಡಲಾಗುವುದು ಎಂದರು. ಇದೇ ಆಶಯದಂತೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಿರ್ದೇಶನದಂತೆ ಅತಿವೃಷ್ಟಿ ಮತ್ತು ಬರ ಪರಿಸ್ಥಿತಿ ಕುರಿತು ಜಿಲ್ಲೆಯ ಹಾರಂಗಿ ಜಲಾಶಯ ಹಾಗೂ ಕೃಷಿ ಮತ್ತು ತೋಟಗಾರಿಕ ಬೆಳೆಗಳ ವೀಕ್ಷಣೆ, ಗೋಶಾಲಾ ವೀಕ್ಷಣೆ ನಡೆಸಿ, ಸಭೆ ನಡೆಸಲಾಗಿದೆ ಎಂದು ಸಚಿವರು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು, ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು ಇದರಿಂದಾಗಿ ರಸ್ತೆ ಹಾಳಾಗಿದ್ದು ಗುಂಡಿಗಳನ್ನು ಮುಚ್ಚುವ ಕೆಲಸ ಆಗಬೇಕೆಂದು ಎಂಜಿನಿಯರ್‌ಗಳಿಗೆ ತಾಕೀತು ಮಾಡಿದರು.
ಈಗಾಗಲೇ ಟೆಂಡರ್ ಕರೆದು ಕಾಮಗಾರಿ ಆರಂಭಿಸಬೇಕಿತ್ತು. ಆದರೆ ಇನ್ನೂ ಟೆಂಡರ್ ಆಹ್ವಾನಿಸದೆ ಗುಂಡಿಮುಚ್ಚುವ ಕೆಲಸ ಆರಂಭವಾಗಿಲ್ಲ. ಹೀಗಾದರೆ ಸಾರ್ವಜನಿಕರ ಓಡಾಟ ಹೇಗೆ ಎಂದು ಮಂತರ್ ಗೌಡ ಅವರು ಪ್ರಶ್ನಿಸಿದರು.
ಕುಶಾಲನಗರದಲ್ಲಿ ಒಳಚರಂಡಿ ಕಾಮಗಾರಿ ಆರಂಭಿಸಿ ದಶಕಗಳೇ ಕಳೆದಿದ್ದರೂ ಸಹ ಕಾಮಗಾರಿ ಪೂರ್ಣಗೊಳಿಸದೇ ಇರುವುದಕ್ಕೆ ಶಾಸಕರು ತೀವ್ರ ಅತೃಪ್ತಿ ವ್ಯಕ್ತಪಡಿಸಿದರು.
ಒಳಚರಂಡಿ ಕಾಮಗಾರಿ ಅಪೂರ್ಣವಾಗಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಆದ್ದರಿಂದ ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಸಚಿವರಲ್ಲಿ ಮನವಿ ಮಾಡಿದರು.

ವರದಿ : ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!