ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಸಕ ಡಾ.ಮಂತರ್ ಗೌಡರಿಂದ ನವನಿರ್ಮಾಣ ಕಟ್ಟಡ ಕಟ್ಟುವವರು ಮತ್ತು ಕೂಲಿ ಕಾರ್ಮಿಕರ ಸಂಘ ಉದ್ಘಾಟನೆ

ಕುಶಾಲನಗರ: ಕೂಡುಮಂಗಳೂರಿನಲ್ಲಿ ನವ ನಿರ್ಮಾಣ ಕಟ್ಟಡ ಕಟ್ಟುವವರ ಮತ್ತು ಇತರೆ ನಿರ್ಮಾಣ, ಕೂಲಿ ಕಾರ್ಮಿಕರ ಕರ್ನಾಟಕ ಸ್ಟೇಟ್ ಫೆಡರೇಶನ್ ನ ಕುಶಾಲನಗರ ತಾಲೂಕು ಸಂಘ ಉದ್ಘಾಟಿಸಿ ಅವರು ಮಾತನಾಡಿದರು.
ಕೊಡ್ಲಿಪೇಟೆಯಲ್ಲಿ ಕಾರ್ಮಿಕರ ಮಕ್ಕಳಿಗೆ ಅನುಕೂಲವಾಗುವಂತೆ ವಸತಿ ಶಾಲೆ ನಿರ್ಮಾಣಕ್ಕೆ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.

ಕೂಲಿ ಕಾರ್ಮಿಕರು ದೇಶದ ಬೆನ್ನೆಲುಬು. ಸರಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಘಟನೆ ಅಗತ್ಯ. ಕಾರ್ಮಿಕರು ಕೆಲಸ ನಿರ್ವಹಣೆ ಸಂದರ್ಭ ಸುರಕ್ಷತೆ ಬಗ್ಗೆ ಗಮನ ಹರಿಸಬೇಕು. ಶ್ರಮಿಕರು ಕಡ್ಡಾಯವಾಗಿ ಇ ಶ್ರಮ್ ಕಾರ್ಡ್ ಹೊಂದುವುದು ಅಗತ್ಯ. ಕನಿಷ್ಠ ವೇತನ ತಾರತಮ್ಯದ ಬಗ್ಗೆ ಸೂಕ್ತ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.

ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ ಕಾರ್ಮಿಕರು ಸರಕಾರದ ಸೌಲಭ್ಯಗಳನ್ನು, ತಮ್ಮ ಹಕ್ಕುಗಳ ಬಗ್ಗೆ ಕನಿಷ್ಠ ಜ್ಞಾನ ಹೊಂದುವ ಅಗತ್ಯವಿದೆ ಎಂದರು.
ಕಾಂಗ್ರೆಸ್ ಮುಖಂಡ ನಾಪಂಡ ಮುತ್ತಪ್ಪ ಮಾತನಾಡಿ, ಕಾರ್ಮಿಕರ ಕಲ್ಯಾಣಕ್ಕಾಗಿಯೇ ಇರುವ ನಿಧಿಗಳನ್ನು ಬಳಸಿಕೊಳ್ಳಲು ಸಂಘಟನೆಗಳು ಸದಸ್ಯರಿಗೆ ಮಾರ್ಗದರ್ಶನ ನೀಡಬೇಕಿದೆ. ಹೆಚ್ಚು ಸಂಘಗಳ ಸ್ಥಾಪನೆ ಬದಲು ಒಂದೇ ವೇದಿಕೆಯಡಿ ಎಲ್ಲರೂ ಕಾರ್ಯನಿರ್ವಹಿಸಿದಾಗ ಹಾದಿ ಸುಗಮವಾಗಲಿದೆ ಎಂದರು.

ಲ್ಯಾಂಪ್ಸ್ ಮಹಾಮಂಡಳಿ ಅಧ್ಯಕ್ಷ ಅರುಣ್ ರಾವ್, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ತ್ರಿನೇಶ್, ಫೆಡರೇಷನ್ ತುಮಕೂರು ಜಿಲ್ಲಾಧ್ಯಕ್ಷ ಗೋವಿಂದರಾಜು ಕುಶಾಲನಗರ ತಾಲ್ಲೂಕು ಸಂಘದ ಕಾರ್ಯಾಧ್ಯಕ್ಷ ಮಂಜು, ಅಧ್ಯಕ್ಷ ರಂಜಿತ್, ಪ್ರಧಾನ ಕಾರ್ಯದರ್ಶಿ ಧರ್ಮೇಶ್, ಖಜಾಂಚಿ ಪ್ರಕಾಶ ಹಾಗೂ ಪದಾಧಿಕಾರಿಗಳು ಇದ್ದರು.

ವರದಿ : ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!