ವಿರಾಜಪೇಟೆ : ಇದೇ ಮೊದಲ ಬಾರಿಗೆ ಕೊಡಗು ಜಿಲ್ಲೆಯ ಶಾಸಕರೊಬ್ಬರಿಗೆ ಸಿ. ಎಂ. ರಾಜಕೀಯ ಕಾರ್ಯದರ್ಶಿ ಹುದ್ದೆ ದೊರೆತಿದೆ.
ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಸಂಪುಟ ದರ್ಜೆ ಸಚಿವರ ಸ್ಥಾನವನ್ನುನೀಡಲಾಗಿದೆ.
ಕೊಡಗು ಜಿಲ್ಲೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಯಾವುದೇ ಶಾಸಕರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ ಸಿಕ್ಕಿದೆ.
ಡೆಪ್ಯೂಟಿ ಸ್ಪೀಕರ್ ಬದಲು : ಆಗಸ್ಟ್ 3, 2026 ರಂದು ಪೊನ್ನಣ್ಣ ಅವರನ್ನು ವಿಧಾನಸಭೆ ಉಪಸಭಾಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಆದರೆ ಆ ಹುದ್ದೆಯನ್ನು ಬಿಟ್ಟು ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಅವರು ಒಲವು ತೋರಿಸಿದ್ದಾರೆ ಎನ್ನಲಾಗುತ್ತಿದೆ. ಹಾಗೂ ಅವರ ನಾಯಕತ್ವ ಮತ್ತು ಸಂಘಟನಾ ಚತುರತೆಯಿಂದ ಕೊಡಗು ಜಿಲ್ಲೆಯ ಅಭಿವೃದ್ಧಿ ಮತ್ತು ಸಮಗ್ರ ಬೆಳವಣಿಗೆ ಹಾಗೂ ರಾಜ್ಯಾದ್ಯಂತ ಶ್ರೀ ಸಿದ್ದರಾಮಯ್ಯನವರ ಕಾನೂನು ಸಲಹೆಗಾರರಾಗಿಯೂ ಹೆಸರಾಗಿದ್ದರು. ಈ ಕಾರಣಗಳಿಂದ ಅವರಿಗೆ ಈ ಹುದ್ದೆ ನೀಡಲಾಗಿದೆ.
ವರದಿ : ಪ್ರಿತುನ್ ಪೂವಣ್ಣ ಅಯ್ಯನೆರವಂಡ



















