ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಾಂಗ್ರೆಸ್ ಪಕ್ಷದಿಂದ ಬೇಸತ್ತು ವಿದಾಯ ಹೇಳಿ ಜೆಡಿಎಸ್ ಪಕ್ಷದ ಹೊರೆ ಹೊತ್ತ ಪಿ.ಎನ್ ಕೃಷ್ಣಮೂರ್ತಿ

ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಮಹತ್ವದ ಬೆಳವಣಿಗೆ ಜೆಡಿಎಸ್ ಅಧಿಕಾರಕ್ಕೆ ತರುವುದೇ ಗುರಿ: ಪಿ. ಎನ್. ಕೃಷ್ಣಮೂರ್ತಿ.

ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಬಲಪಡಿಸಿ, ಮುಂಬರುವ ವಿಧಾನಸಭೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವುದೇ ತಮ್ಮ ಗುರಿ ಎಂದು ಜಿಪಂ ಮಾಜಿ ಸದಸ್ಯ ಪಿ.ಎನ್. ಕೃಷ್ಣಮೂರ್ತಿ ತಿಳಿಸಿದರು.

ಕೊರಟಗೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜೆಡಿಎಸ್ ಕಾರ್ಯಕರ್ತರು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರಟಗೆರೆ ಜೆಡಿಎಸ್ ಪಕ್ಷದ ಭದ್ರಕೋಟೆಯಾಗಿದ್ದು, ಮಾಜಿ ಸಚಿವ ದಿವಂಗತ ಚೆನ್ನಿಗಪ್ಪ ಅವರು ಮೂರು ಬಾರಿ ಹಾಗೂ ಪಿ.ಆರ್. ಸುಧಾಕರ್‌ಲಾಲ್ ಅವರು ಒಂದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು ಎಂದು ಹೇಳಿದರು.

ಸುಮಾರು 20 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದ ತಾವು, ಕಾಂಗ್ರೆಸ್ ಪಕ್ಷವನ್ನು ತೊರೆದು ಆಗಸ್ಟ್ 8ರಂದು ಬೆಂಗಳೂರಿನ ಜೆ.ಪಿ. ಭವನದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದಾಗಿ ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದ ಬಗ್ಗೆ ಜನರು ಬೇಸರಗೊಂಡಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಹೆಚ್ಚಿನ ಸ್ಥಾನಗಳನ್ನು ಗೆದ್ದು ಎಚ್.ಡಿ. ಕುಮಾರಸ್ವಾಮಿ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜೆಡಿಎಸ್ ತಾಲೂಕು ಅಧ್ಯಕ್ಷ ಕಾಮರಾಜು ಮಾತನಾಡಿ, ಕೊರಟಗೆರೆ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ನಾಯಕತ್ವದ ಕೊರತೆ ಇತ್ತು. ಇದೀಗ ಪಿ.ಎನ್. ಕೃಷ್ಣಮೂರ್ತಿ ಅವರು ಜೆಡಿಎಸ್ ಸೇರ್ಪಡೆಯಾಗಿರುವುದರಿಂದ ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ. ಅವರ ನೇತೃತ್ವದಲ್ಲಿ ಪಕ್ಷ ಸಂಘಟಿಸಿ, ಎಲ್ಲಾ ಸ್ಥಳೀಯ ಚುನಾವಣೆಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸುವುದೇ ಗುರಿ ಎಂದರು.

ಮಾಜಿ ಅಧ್ಯಕ್ಷ ಜೆ.ಎನ್. ನರಸಿಂಹರಾಜು ಮಾತನಾಡಿ, ಕೊರಟಗೆರೆ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಸದೃಢವಾಗಿದೆ. ತಾಲೂಕಿನ 24 ಗ್ರಾಮ ಪಂಚಾಯಿತಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಅಧ್ಯಕ್ಷರಾಗಿದ್ದಾರೆ. ಕೊರಟಗೆರೆ ಪಟ್ಟಣ ಪಂಚಾಯಿತಿಯಲ್ಲಿಯೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ .ಮುಂದೆ ಸಾಮಾನ್ಯ ಕ್ಷೇತ್ರವಾಗುವ ಹಿನ್ನೆಲೆಯಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಿಎನ್ ಕೃಷ್ಣಮೂರ್ತಿಯವರು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಕುರಿತು ಚರ್ಚೆ ಇದೀಗ ರಾಜಕೀಯ ಆವರಣದಲ್ಲಿ ಆರಂಭವಾಗಿದೆ ಆದರೆ ಅವರು ಅಭ್ಯರ್ಥಿಯ ಬಗ್ಗೆ ಪಕ್ಷದ ಅಧಿಕೃತ ಘೋಷಣೆ ಇನ್ನು ಮಾಡಿಲ್ಲ. ಕೃಷ್ಣಮೂರ್ತಿ ಅವರ ಸೇರ್ಪಡೆ ಕೇವಲ ಪಕ್ಷ ಸೇರ್ಪಡೆಯಾಗಿದೆ ಕ್ಷೇತ್ರದಲ್ಲಿ ಜೆಡಿಎಸ್ ಸಂಘಟನೆಯ ಬಲಪಡಿಸುವ ಮತ್ತು ಒಬ್ಬ ಮುಖಂಡನ ಅವಶ್ಯಕತೆಗೆ ಬದ್ಧರಾಗಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಪಕ್ಷದ ಕಾರ್ಯಾಧ್ಯಕ್ಷ ಲಕ್ಷ್ಮೀಶ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಚಿಕ್ಕರಂಗಯ್ಯ, ರಮೇಶ್, ಮಾವತ್ತೂರು ಮಂಜುನಾಥ್, ರಂಗಯ್ಯ, ಅಶ್ವತ್ಥನಾರಾಯಣರಾಜು, ಕೆ.ಎನ್. ಲಕ್ಷ್ಮೀನಾರಾಯಣ್, ರಂಗನಾಥ್ ವಜ್ಜನಕುರಿಕೆ, ನರಸಿಂಹರಾಜು ಎಲ್ ಕರವೇ, ಪುಟ್ಟನರಸಪ್ಪ, ವಿದ್ಯಾರ್ಥಿ ಘಟಕದ ಅಧ್ಯಕ್ಷ ಸಂತೋಷ್ ಸೇರಿದಂತೆ ಪಕ್ಷದ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರಸನ್ನ ಕುಮಾರ. ಎಸ್ ಕೊರಟಗೆರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!