ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನಾಗರಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ

ನಾಗರಾಳ: ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಹೆಮ್ಮೆಯಿಂದ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಆಕಾಶ್ ಸಿಂಧೆ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅನೇಕ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ಹೋರಾಟದ ಫಲವಾಗಿ ನಮಗೆ ಸ್ವಾತಂತ್ರ್ಯ ದೊರೆತಿದೆ. ಮಹಾತ್ಮ ಗಾಂಧೀಜಿ, ಡಾ. ಬಿ.ಆರ್. ಅಂಬೇಡ್ಕರ್, ಭಗತ್ ಸಿಂಗ್, ನೇತಾಜಿ ಸುಭಾಷ್ ಚಂದ್ರ ಬೋಸ್ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೇರಿದಂತೆ ಅನೇಕ ಮಹನೀಯರ ತ್ಯಾಗವನ್ನು ಪ್ರತಿಯೊಬ್ಬರೂ ಸದಾ ಸ್ಮರಿಸಬೇಕು ಎಂದು ಹೇಳಿದರು.

ಶಾಲೆಯ ಮುಖ್ಯಗುರು ವಿಲಾಸ್ ರಾವ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ದೇವೇಂದ್ರ ಹಾಗೂ ಆಕಾಶ್ ಸಿಂಧೆ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಶಿಕ್ಷಕರಾದ ಸಂತೋಷ್, ಅರ್ಚನಾ, ಮಲ್ಲಿಕಾರ್ಜುನ ಗುಂಗೆ, ಕಲ್ಲಪ್ಪ ಬಿರಾದಾರ್ ಸೇರಿದಂತೆ ಗ್ರಾಮದ ಮುಖಂಡರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ತ್ಯಾಗ ಮಾಡಿದ ಮಹನೀಯರನ್ನು ಸ್ಮರಿಸುವ ಮೂಲಕ ದೇಶಭಕ್ತಿ, ಏಕತೆ ಹಾಗೂ ಸಹೋದರತ್ವದ ಸಂದೇಶ ಸಾರಲಾಯಿತು. ವಿದ್ಯಾರ್ಥಿಗಳಲ್ಲಿ ದೇಶಪ್ರೇಮದ ಭಾವನೆ ಬೆಳೆಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವು ದೇಶಭಕ್ತಿ ಹಾಗೂ ಸಂಭ್ರಮದ ವಾತಾವರಣದಲ್ಲಿ ಯಶಸ್ವಿಯಾಗಿ ನೆರವೇರಿತು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!