ಕೊಪ್ಪಳ: ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಶನಿವಾರ 80ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಪ್ರಾಚಾರ್ಯ ಡಾ.ಗಣಪತಿ ಲಮಾಣಿ ನೆರವೇರಿಸಿದರು. ಭಾರತ ಪುರುಷ ಪ್ರಧಾನ ಸಮಾಜ ಹೊಂದಿದೆ ಎನ್ನುವುದಾದರೂ ಈಗ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಮಾನತೆ ಸಾಧಿಸುತ್ತಿರುವುದು ಸಂತಸದ ಸಂಗತಿ. ಸ್ವಾತಂತ್ರ್ಯ, ಸಮಾನತೆಗಾಗಿ ಹೋರಾಡಿದ ಮಹನೀಯರ ಶ್ರಮವನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ವಾಣಿಜ್ಯ ಶಾಸ್ತ್ರದ ಮುಖ್ಯಸ್ಥರಾದ ಡಾ. ವಿಠೋಬ ಅವರು ನಮಗೆ ಸ್ವಾತಂತ್ರ್ಯವು ಹಲವು ಮಹನೀಯರ ತ್ಯಾಗ ಬಲಿದಾನಗಳಿಂದ ಸಿಕ್ಕಿದೆ. ಎಲ್ಲರೂ ಶಿಕ್ಷಣ ಪಡೆದು ದೇಶದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.
ಕನ್ನಡ ವಿಭಾಗದ ಮುಖ್ಯಸ್ಥರಾದ ಲಲಿತ ಅವರು ಮಾತನಾಡುತ್ತ ಸ್ವಾತಂತ್ರ್ಯ ಎಂದರೆ ಸಮಗ್ರ ವಿಮೋಚನೆ ಎಂದರ್ಥ. ನಾವೆಲ್ಲರೂ ಸ್ವತಂತ್ರ ಹೋರಾಟಗಾರರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಗಂಗಾವತಿಯ ಎಸ್ಕೆಎನ್ಜಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಡಾ.ನರಸಿಂಹ ಅತಿಥಿಗಳಾಗಿ ಭಾಗವಹಿಸಿದ್ದರು.
ಈ ವೇಳೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ರಾಜಮಾ, ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ವಿಠೋಬಾ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶುಭ, ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ಸುಮಯ್ಯ, ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಲಲಿತಾ, ಕಾಲೇಜಿನ ಅಧೀಕ್ಷಕ ಅಲ್ಲಾಭಕ್ಷಿ, ಗ್ರಂಥಪಾಲಕ ಮಲ್ಲಿಕಾರ್ಜುನ, ಹನುಮಪ್ಪ, ದೈಹಿಕ ಶಿಕ್ಷಕ ಶಂಕರ ನಾಯಕ ಹಾಗೂ ವಿವಿಧ ವಿಭಾಗಗಳ ಅತಿಥಿ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಇದ್ದರು.
ಕಾರ್ಯಕ್ರಮವನ್ನು ಉಪನ್ಯಾಸಕರಾದ ಶುಭ ಟಿ. ಈ ನಿರೂಪಿಸಿ, ಸ್ವಾಗತಿಸಿ ಮತ್ತು ವಂದಿಸಿದರು.
- ಕರುನಾಡ ಕಂದ ಸುದ್ದಿ



















