ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಂಭ್ರಮ ಸಡಗರದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

ಕಲಬುರಗಿ/ ಕಾಳಗಿ : ಪಟ್ಟಣದ ತಹಸೀಲ್ದಾರ್ ಕಛೇರಿ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅದ್ದೂರಿಯಾಗಿ ಸಂಭ್ರಮದಿಂದ ಆಚರಿಸಲಾಯಿತು.
ನಮ್ಮ ಭಾರತ ದೇಶದ ಸ್ವಾತಂತ್ರ್ಯಕ್ಕಾಗಿ ಮಹಾ ನಾಯಕರು ತಮ್ಮ ಪ್ರಾಣವನ್ನು ಮುಡಿಪಾಗಿಟ್ಟಿದರು. ಸ್ವಾತಂತ್ರ್ಯ ದಿನ ಆಚರಣೆ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾ ನಾಯಕರ ಧೈರ್ಯ ಸಾಹಸ ಹಾಗೂ ಅವರ ಆದರ್ಶಗಳನ್ನು ಯುವ ಪೀಳಿಗೆಗೆ ತಿಳಿಸಿಕೊಡುವುದಾಗಿದೆ ಎಂದು ತಹಸೀಲ್ದಾರ್ ಪೃಥ್ವಿರಾಜ್ ಪಾಟೀಲ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಬ್ರಿಟಿಷರು ನಮ್ಮನ್ನು 200 ವರ್ಷಗಳ ಕಾಲ ಆಳ್ವಿಕೆ ಮಾಡಿದರು. ಸ್ವಾತಂತ್ರ್ಯದ ಪೂರ್ವದ ಇತಿಹಾಸವನ್ನು ಪುನ ಮತ್ತೆ ಸ್ಮರಿಸಿ, ಮಹಾತ್ಮ ಗಾಂಧಿ,ಸುಭಾಷ್ ಚಂದ್ರ ಬೋಸ್, ಡಾಕ್ಟರ್ ಬಿ ಆರ್ ಅಂಬೇಡ್ಕರ್, ಜವಾಹರ್ ಲಾಲ್ ನೆಹರು ಸರ್ದಾರ ವಲ್ಲಬಾಯ್ ಪಟೇಲ್ ಮುಂತಾದ ನಾಯಕರ ಹೋರಾಟದ ಫಲವಾಗಿ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಈ ಸಂದರ್ಭದಲ್ಲಿ ತಾ ಪಂ ಇಓ ಬಸಲಿಂಗಪ್ಪ ಡಿಗ್ಗಿ ಮಾತಾಡಿದರು.
ಈ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಪೃಥ್ವಿರಾಜ್ ಪಾಟೀಲ್, ಗ್ರೇಡ್ -2 ತಹಸೀಲ್ದಾರ್ ರಾಜೇಶ್ವರಿ, ತಾ ಪಂ ಇಓ ಬಸಲಿಂಗಪ್ಪ ಡಿಗ್ಗಿ, ಸಿಪಿಐ ಜಗದೇವಪ್ಪ ಪಾಳಾ, ಜೆಸ್ಕಾಂ ಎಇಇ ಇಲಿಯಾಸ್ ಅಹಮ್ಮದ, ಪಿಎಸ್ಐ ತಿಮ್ಮಯ್ಯ ಬಿ ಕೆ, ಶಿವ ಶರಣಪ್ಪ ಉಕ್ಕಲಿ, ರೇವಣಸಿದ್ಧ ಸ್ವಾಮಿ, ರವಿ ಮುತ್ತಂಗಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ಶಾಲೆಯ ಮುದ್ದು ಮಕ್ಕಳು ಕಾಳಗಿ ಪಟ್ಟಣದ ಹಿರಿಯರು ಯುವಕರು ರಾಜಕೀಯ ಮುಖಂಡರು ಉಪಸ್ಥಿತರಿದ್ದರು.

ವರದಿ ಚಂದ್ರಶೇಖರ ಆರ್. ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!