ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಸಡಗರ

ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಶಕ್ತಿ ಪೀಠ ಸನ್ನಿಧಾನಕ್ಕೆ ಹರಿದು ಬಂದ ಭಕ್ತ ಸಾಗರ.

ಕೊರಟಗೆರೆ : ತಾಲ್ಲೂಕಿನ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಅಮ್ಮನವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಹಬ್ಬಕ್ಕೆ ದೂರದ ಊರುಗಳಿಂದ ಸಾವಿರಾರು ಭಕ್ತರು ಆಗಮಿಸಿ ಅಮ್ಮನವರ ದರ್ಶನ ಪಡೆದರು.

ಇತಿಹಾಸ ಪ್ರಸಿದ್ದ ಪುಣ್ಯಕ್ಷೇತ್ರವಾದ ಗೊರವನಹಳ್ಳಿಯಲ್ಲಿ ನೆಲೆಸಿರುವ ತಾಯಿ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಬೆಳಗ್ಗೆ 5 ಗಂಟೆಯಿಂದಲೇ ದೇವಾಲಯಕ್ಕೆ ವಿಶೇಷ ಹೂವಿನ ಅಲಂಕಾರ, ವಿಶೇಷ ಪೂಜೆ ಹಾಗೂ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆದವು.
ತಾಯಿ ಮಹಾಲಕ್ಷ್ಮಿಗೆ ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ ವಿಶೇಷ ಪೂಜೆ, ಹೋಮ-ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ದೇವಾಲಯದ ಆಡಳಿತ ಮಂಡಳಿ ವತಿಯಿಂದ ಏರ್ಪಡಿಸಲಾಗಿತ್ತು.

ಮಹಾಲಕ್ಷ್ಮಿ ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷರಾದ ವಾಸುದೇವ್ ಮಾತನಾಡಿ ವೈಭವದ ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಗೊರವನಹಳ್ಳಿ ಮಹಾಲಕ್ಷ್ಮಿ ಸನ್ನಿಧಾನಕ್ಕೆ ಸಾವಿರಾರು ಭಕ್ತರು ಆಗಮಿಸುವ ಅಂಗವಾಗಿ ಭಕ್ತರಿಗೆ ಕುಡಿಯವ ನೀರು, ಪ್ರಸಾದ, ಪಾರ್ಕಿಂಗ್ ವ್ಯವಸ್ಥೆ, ಅಗತ್ಯ ವ್ಯವಸ್ಥೆಗಳನ್ನು ಆಂಬ್ಯುಲೆನ್ಸ್, ಪೊಲೀಸ್ ಅಧಿಕಾರಿಗಳಿಂದ ಬಂದೋಬಸ್ತ್ ಸೇರಿದಂತೆ ಯಾವುದೇ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
ವಿಶೇಷ ಪೂಜೆ, ಅಭಿಷೇಕ, ಮಹಾಮಂಗಳಾರತಿ ಜೊತೆಗೆ ದಾಸೋಹದ ವ್ಯವಸ್ಥೆಯನ್ನೂ ಕಲ್ಪಿಸಲಾಗಿತ್ತು. ನೂತನ ತೇರಿನಲ್ಲಿ ಬೆಳ್ಳಿ ಉತ್ಸವ ಮೂರ್ತಿಯ ಮೆರವಣಿಗೆ ಈ ಬಾರಿಯ ವಿಶೇಷ ಆಕರ್ಷಣೆಯಾಗಿದೆ. ತಾಯಿ ಮಹಾಲಕ್ಷ್ಮಿಯ ಕೃಪೆ ನಾಡಿನ ಸಮಸ್ತ ಭಕ್ತರ ಮೇಲಿರಲಿ ” ಎಂದು ಹೇಳಿದರು.

ತಹಶೀಲ್ದಾರ್ ಕೆ. ಮಂಜುನಾಥ್ ಮಾತನಾಡಿ, ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವುದರಿಂದ ಭಕ್ತರ ಸುರಕ್ಷತೆ ಹಾಗೂ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಲಾಗಿದೆ. ಪೊಲೀಸ್, ಕಂದಾಯ ಇಲಾಖೆ ಗ್ರಾಪಂ ಹಾಗೂ ದೇವಾಲಯದ ಆಡಳಿತ ಮಂಡಳಿ ಸಮನ್ವಯದಿಂದ ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗಿದೆ. ಭಕ್ತರು ಶಾಂತಿಯಿಂದ ತಾಯಿ ಮಹಾಲಕ್ಷ್ಮಿಯ ದರ್ಶನ ಪಡೆದು ಸಹಕರಿಸಬೇಕು ಎಂದು ಮನವಿ ಮಾಡಿದರು.

ಮರದ ಕೆತ್ತನೆಯ ನೂತನ ತೇರು ಹಾಗೂ ಬೆಳ್ಳಿ ಉತ್ಸವ ಮೂರ್ತಿ ಪ್ರಮುಖ ಆಕರ್ಷಣೆ.

ಈ ಬಾರಿಯ ವರಮಹಾಲಕ್ಷ್ಮಿ ಹಬ್ಬದ ಪ್ರಮುಖ ಆಕರ್ಷಣೆಯಾಗಿದ್ದು, ಸುಮಾರು 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಮರದ ಕೆತ್ತನೆಯ ನೂತನ ತೇರು, ತೇರಿನಲ್ಲಿ ಸುಮಾರು 24 ಕೆ.ಜಿ. ತೂಕದ ಬೆಳ್ಳಿಯ ಮಹಾಲಕ್ಷ್ಮಿ ತಾಯಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ವೈಭವದ ಮೆರವಣಿಗೆ ನಡೆಸಲಾಯಿತು. ಉತ್ಸವ ಮೂರ್ತಿಯ ಮೆರವಣಿಗೆ ಭಕ್ತರ ಕಣ್ಮನ ಸೆಳೆಯಿತು.
ಇದೆ ಸಂದರ್ಭದಲ್ಲಿ ಟ್ರಸ್ಟ್ ಆಡಳಿತ ಮಂಡಳಿ ಸೇರಿದಂತೆ ಇತರರು ಇದ್ದರು.

ವರದಿ .ಪ್ರಸನ್ನ ಕುಮಾರ್ .ಎಸ್. ಕೊರಟಗೆರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!