ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹುಲಸಗುಡ್ ಗ್ರಾಮದಲ್ಲಿ ರೈತರ ಹಾಗೂ ರೈತನ ಮುಖಂಡರ ಘೇರಾವ್–ಪ್ರತಿಭಟನೆ.

ಕ್ರಾಪ್ ಕಟಿಂಗ್‌ನಲ್ಲಿ ಲೋಪ: ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ಹಾರ್ಟಿಕಲ್ಚರ್ ಅಧಿಕಾರಿಗಳು, ಬೆಳೆ ವಿಮಾ ಕಂಪನಿಯ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ್ ಅಧಿಕಾರಿಗಳ ವಿರುದ್ಧ ಹುಲಸಗುಡ್ ಗ್ರಾಮದ ರೈತರು ಹಾಗೂ ರೈತ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಸುಮಾರು ನಾಲ್ಕೈದು ಗಂಟೆಗಳ ಕಾಲ ಘೇರಾವ್ ಹಾಕಿ ಪ್ರತಿಭಟನೆ ನಡೆಸಿದರು.
ರೈತರ ಬೆಳೆಗಳಿಗೆ ಸಂಬಂಧಿಸಿದಂತೆ ಸರಿಯಾದ ಕ್ರಾಪ್ ಕಟಿಂಗ್ ಮಾಡದೆ ಇರುವುದರಿಂದ ಬೆಳೆ ವಿಮೆ ಹಾಗೂ ಪರಿಹಾರ ಪಡೆಯುವಲ್ಲಿ ರೈತರಿಗೆ ಅನ್ಯಾಯವಾಗುವ ಆತಂಕ ಎದುರಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ರೈತರ ಸಮಸ್ಯೆಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ರೈತರು, ಹೋದ ವರ್ಷ ಅತಿವೃಷ್ಟಿಯಾಗಿ ಹಾಳಾಗಿರ್ತಕ್ಕಂತ ಬೆಳೆ ಇನ್ಸೂರೆನ್ಸ್ ಸರಿಯಾಗಿ ಬರದೇ ರೈತ ಸಂಕಷ್ಟದಲ್ಲಿದ್ದಾನೆ. ಈ ವರ್ಷ ಮಳೆ ಇಲ್ಲದೆ ಬೆಳೆದೆ ಬೆಳೆ ಇಲ್ಲದೆ ರೈತ ಕಷ್ಟದಲ್ಲಿದ್ದಾನೆ ಬರದ ಛಾಯೆ ಮೂಡಿದೆ. ಹೀಗಿರುವಾಗ ಮತ್ತೆ ಇನ್ಸೂರೆನ್ಸ್ ಕಂಪನಿದವರು ಅದೇ ರಾಗ ಅದೇ ಹಾಡು ಹಾಡುತ್ತಿದ್ದಾರೆ. ಸ್ಥಳದಲ್ಲಿದ್ದ ಸಂಬಂಧಿಸಿದ ಅಧಿಕಾರಿಗಳನ್ನು ಪ್ರಶ್ನಿಸಿ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು.
ಪ್ರತಿಭಟನೆಯ ವಿಷಯ ತಿಳಿದು ಸ್ಥಳಕ್ಕೆ ತಾಲೂಕು ತಹಸೀಲ್ದಾರ್ ಆಗಮಿಸಿ ರೈತರ ಸಮಸ್ಯೆಗಳನ್ನು ಖುದ್ದಾಗಿ ಆಲಿಸಿ, ಸಮಸ್ಯೆಯ ಕುರಿತು ಸಂಪೂರ್ಣ ಮಾಹಿತಿ ಕಲೆ ಹಾಕಿದರು. ಸರಿಯಾದ ರೀತಿಯಲ್ಲಿ ಕ್ರಾಪ್ ಕಟಿಂಗ್ ಮಾಡದಿರುವ ಕುರಿತು ಸಂಬಂಧಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ತಹಸೀಲ್ದಾರ್ ಅವರ ಭರವಸೆ ಹಾಗೂ ಅಧಿಕಾರಿಗಳಿಂದ ಸಮಸ್ಯೆ ಪರಿಶೀಲಿಸುವ ಭರವಸೆ ದೊರೆತ ಹಿನ್ನೆಲೆಯಲ್ಲಿ ರೈತರು ತಮ್ಮ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ತಿಳಿಗೊಳಿಸಿದರು.
ರೈತರ ಬೆಳೆ ವಿಮೆ ಮತ್ತು ಬೆಳೆ ಪರಿಹಾರದಲ್ಲಿ ಯಾವುದೇ ರೀತಿಯ ತಾರತಮ್ಯವಾಗಬಾರದು. ಸರಿಯಾದ ಕ್ರಾಪ್ ಕಟಿಂಗ್ ನಡೆಸಿ ಅರ್ಹ ಪ್ರತಿಯೊಬ್ಬ ರೈತನಿಗೂ ನ್ಯಾಯ ಒದಗಿಸಬೇಕು ಎಂದು ಹುಲಸಗುಡ್ ಗ್ರಾಮದ ರೈತರು ಹಾಗೂ ಸುಂಟಾಣ್ಣ ಗ್ರಾಮದ ರೈತರು, ರೈತ ಸೇನೆ ಮುಖಂಡರು ಆಗ್ರಹಿಸಿದ್ದಾರೆ.
“ರೈತರ ಬೆವರಿಗೆ ನ್ಯಾಯ ಸಿಗುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ” ಎಂದು ರೈತ ನಾಯಕ ವೀರಣ್ಣ ಗಂಗಾಣಿ ಎಚ್ಚರಿಕೆ ನೀಡಿದ್ದಾರೆ. ತಾಲೂಕ ದಂಡಾಧಿಕಾರಿಗಳಾದ ಪೃಥ್ವಿರಾಜ್ ಪಾಟೀಲ್ ರವರು ಎರಡು ಮೂರು ದಿವಸಗಳಲ್ಲಿ ಮುಖಂಡರನ್ನು ಕರೆದು ಸಭೆ ಮಾಡಿ ನಂತರ ಖುದ್ದಾಗಿ ನಾವೇ ಬಂದು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಹೊಲಗಳಿಗೆ ಭೇಟಿ ನೀಡುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕ ಪಂಚಾಯತಿ ಇಒ ಬಸಲಿಂಗಪ್ಪ ಡಿಗ್ಗಿ, ಹಾರ್ಟಿಕಲ್ಚರ್ ಅಧಿಕಾರಿ ನಸ್ಸೀರ್ ಹೊಸಳ್ಳಿ, ಇನ್ಸೂರೆನ್ಸ್ ಕಂಪನಿ ಅಧಿಕಾರಿ ಯುವರಾಜ್, ರೈತರದ ಸಂತೋಷ್ ನಾಯ್ಕೋಡಿ, ಶಿವಶರಣಪ್ಪ ನಿಗದಳಿ, ವಿಠಲ ಸನದಿ,
ಪಾಂಡುರಂಗ ರುಮ್ಮನಗೂಡ.
ಸೈದಪ್ಪ ಕೊಡಡೂರ,
ಸಜೀದಾಪಟೇಲ್ ಬಿರಾದಾರ್,
ಸಿದಪ್ಪ ಕಂದಗುಳ,
ಶಿವಪ್ಪ ಸನದಿ,
ನಾಮದೇವ ರಾಠೋಡ್,
ಉದಯ ಸನದಿ,
ನಾಗೇಶ್ ಸನದಿ,
ವಿಠ್ಠಲ್ ರೂಮನಗುಡ,
ಸಂತೋಷ ಮಠಪತಿ,
ಪೀರಪ್ಪ ಯಾದವ,
ನಾಗಪ್ಪ ಜಡಗಿ ಅನೇಕ ರೈತರು ಉಪಸ್ಥಿತರಿದ್ದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!