ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗುರುರತ್ನ ಪ್ರಶಸ್ತಿ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ಶಿಕ್ಷಕರಿಗೆ ತಂದ ಗೌರವ : ಹನುಮಂತಪ್ಪ

ಬಳ್ಳಾರಿ / ಕಂಪ್ಲಿ: ಗುರುರತ್ನ ಪ್ರಶಸ್ತಿಯು ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ಮತ್ತು ಸಾಧನೆ ಮಾಡಿದ ಶಿಕ್ಷಕರಿಗೆ ನೀಡಲಾಗುವ ವಿಶೇಷ ಗೌರವವಾಗಿದ್ದು, ಶಿಕ್ಷಕರ ಪರಿಶ್ರಮ ಗುರುತಿಸಿ, ಪ್ರಶಸ್ತಿ ನೀಡಿರುವುದು ಶಿಕ್ಷಕರ ಕಾರ್ಯವೈಖರಿಗೆ ಮತ್ತಷ್ಟು ಪುಷ್ಠಿ ನೀಡಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಂಪ್ಲಿ ತಾಲೂಕು ಅಧ್ಯಕ್ಷ ಹನುಮಂತಪ್ಪ ಹೇಳಿದರು.
ಇತ್ತೀಚೆಗೆ ಬಳ್ಳಾರಿ ನಗರದ ಜೋಳದ ರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ನಡೆದ ಗುರುರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕಂಪ್ಲಿ ತಾಲೂಕಿನ ನಾಲ್ಕು ಜನ ಶಿಕ್ಷಕರಿಗೆ ಗುರುರತ್ನ ಪ್ರಶಸ್ತಿ ನೀಡಿ ಗೌರವಿಸಿದ ನಂತರ ಮಾತನಾಡಿ, ಸರಕಾರಿ ಶಾಲೆಗಳಲ್ಲಿ ಕೆಲಸ ನಿರ್ವಹಿಸುವ ಶಿಕ್ಷಕರು ಯಾವುದೇ ರೀತಿಯ ಫಲಾಪೇಕ್ಷೆ ಇಲ್ಲದೆ ತಮ್ಮ ಕೆಲಸವನ್ನು ನಿಷ್ಟೆ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿದಾಗ ಪ್ರಶಸ್ತಿಗಳು ತಮ್ಮನ್ನು ಹುಡುಕಿಕೊಂಡು ಬರುತ್ತವೆ. ಈ ನಿಟ್ಟಿನಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ವತಿಯಿಂದ ಶಿಕ್ಷಣ ಕ್ಷೇತ್ರ‍್ರದಲ್ಲಿ ಸಾಧನೆ ಮಾಡಿದ ಶಿಕ್ಷಕರಿಗೆ ಗುರುರತ್ನ ಪ್ರಶಸ್ತಿ ಪ್ರದಾನ ಮಾಡುವ ಮೂಲಕ ಶಿಕ್ಷಕರನ್ನು ಗೌರವಿಸಿರುವುದು ಹೆಮ್ಮೆಯ ಸಂಗತಿ ಎಂದರು.
ಇಲ್ಲಿನ ಸಮಾರಂಭದಲ್ಲಿ ಕಂಪ್ಲಿ ತಾಲೂಕಿನ ನಂ.10 ಮುದ್ದಾಪುರ ಗ್ರಾಪಂಯ ಪ್ರಭುಕ್ಯಾಂಪಿನ ಸರ್ಕಾರಿ ಶಾಲೆಯ ಪ್ರಭಾರಿ ಮುಖ್ಯಗುರು ಪಿ.ವೀರಕುಮಾರ, ಮೆಟ್ರಿ ಶಿವಪುರ ಶಾಲೆಯ ಬಡ್ತಿ ಮುಖ್ಯಗುರು ರಾಮಚಂದ್ರಪ್ಪ, ಕಂಪ್ಲಿ ಪಟ್ಟಣದ ಎಂ.ಡಿ.ಕ್ಯಾAಪ್ ಶಾಲೆಯ ಬಡ್ತಿ ಮುಖ್ಯಶಿಕ್ಷಕಿ ಅಗಳಿ ನಾಗರತ್ನ, ಹಂಪಾದೇವನಹಳ್ಳಿ ಗ್ರಾ. ಪಂ. ಯ ಜೀರಿಗನೂರು ಶಾಲೆಯ ಸಹ ಶಿಕ್ಷಕ ಕೆ.ವಿರೇಶ ಇವರು ಗುರುರತ್ನ ಪ್ರಶಸ್ತಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ವೆಂಕಟೇಶ ಪ್ರಸಾದ್, ಮೇಯರ್ ಪಿ.ಗಾದೆಪ್ಪ, ಉಪ ಮೇಯರ್ ಮುಬಿನಾಬೀ, ಮಾಜಿ ಬುಡಾ ಅಧ್ಯಕ್ಷ ಉಮಯಾನ್‌ಖಾನ್, ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಲಿ, ಉಪಾಧ್ಯಕ್ಷ ಮಾರುತೇಶ, ಪ್ರಧಾನ ಕಾರ್ಯದರ್ಶಿ ಚೇತನ್ , ಸಂಘಟನಾ ಕಾರ್ಯದರ್ಶಿ ಸುಂದರೇಶ, ಬಳ್ಳಾರಿ ಜಿಲ್ಲಾಧ್ಯಕ್ಷ ಸಿ.ನಿಂಗಪ್ಪ, ಪ್ರಧಾನ ಕಾರ್ಯದರ್ಶಿ ಗುಂಡಪ್ಪನವರ್ ನಾಗರಾಜ, ಸರ್ಕಾರಿ ನೌಕರರ ಸಂಘದ ಕಂಪ್ಲಿ ತಾಲೂಕು ಅಧ್ಯಕ್ಷ ಹೆಚ್.ದೊಡ್ಡಬಸಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಂಪ್ಲಿ ಪ್ರಧಾನ ಕಾರ್ಯದರ್ಶಿ ಹೆಚ್.ಜಡೆಪ್ಪ, ಖಜಾಂಚಿ ಐ.ಗಂಗಮ್ಮ, ಕುರುಗೋಡು ಅಧ್ಯಕ್ಷ ತುಕಾರಾಂ ಗೊರವ, ಖಜಾಂಚಿ ಪಿ.ಶೇಕ್ಷಾವಲಿ, ಸೇರಿದಂತೆ ಗಣ್ಯರು, ಶಿಕ್ಷಕರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!