ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತುಂಗಭದ್ರಾ ಒಡಲಿಗೆ ಮರಳು ಗಣಿಗಾರಿಕೆ ಕಂಟಕ, ಗಣಿಗಾರಿಕೆಗೆ ತೀವ್ರ ಆಕ್ಷೇಪಣೆ

ಬಳ್ಳಾರಿ / ಕಂಪ್ಲಿ : ಸಮೀಪದ ಮಣ್ಣೂರು ಮತ್ತು ಎಂ. ಸೂಗೂರು ಗ್ರಾಮಗಳ ತುಂಗಭದ್ರಾ ನದಿ ಪಾತ್ರದಲ್ಲಿ ಪ್ರಸ್ತಾಪಿಸಲಾಗಿರುವ 65 ಎಕರೆ ಮರಳು ಗಣಿಗಾರಿಕೆ ಬ್ಲಾಕ್‌ಗಳಿಗೆ ಪರಿಸರ ಅನುಮತಿ ನೀಡಬಾರದು ಎಂದು ಸಾರ್ವಜನಿಕ ಆಲಿಕೆ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಿಗೆ ಲಿಖಿತ ಆಕ್ಷೇಪಣೆ ಸಲ್ಲಿಸಲಾಯಿತು.ಡಾ. ಭೀಮರಾವ್ ಅಂಬೇಡ್ಕರ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ.) ಸಂಸ್ಥಾಪಕ ಅಧ್ಯಕ್ಷ ಹಾಗೂ ಸಾಮಾಜಿಕ ಕಾರ್ಯಕರ್ತ ರವಿ ಮಣ್ಣೂರು ಅವರು ಅಪಾರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್ ಅವರಿಗೆ ಅನುಮತಿ ನೀಡಬಾರದು ಎಂದು ಲಿಖಿತ ಆಕ್ಷೇಪಣೆ ಸಲ್ಲಿಸಿದರು.

“ಗಣಿಗಾರಿಕೆಯಿಂದ ಕುಡಿಯುವ ನೀರಿನ ಬಾವಿಗಳು ಬತ್ತಲಿವೆ ಮತ್ತು ನೂರಾರು ಲಾರಿಗಳ ಸಂಚಾರದಿಂದ ವಿಪರೀತ ವಾಯು ಮಾಲಿನ್ಯ ಉಂಟಾಗಿ ಸಾರ್ವಜನಿಕರ ಆರೋಗ್ಯ ಹದಗೆಡಲಿದೆ.
ಇದು ಪರಿಸರ ಹಾಗೂ ಪೆಸಾ (PESA) ಕಾಯ್ದೆಗಳ ಉಲ್ಲಂಘನೆಯಾಗಿದೆ” ಎಂದು ತಿಳಿಸಿದರು. ಮನವಿ ಸ್ವೀಕರಿಸಿದ ಅಧಿಕಾರಿಗಳು ಇದನ್ನು ಕಡತಕ್ಕೆ ಸೇರಿಸುವುದಾಗಿ ಭರವಸೆ ನೀಡಿದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!