ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತೆಕ್ಕಲಕೋಟೆ ಡೆಂಕ್ಲಮ್ಮ ಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ, ಬೋನು ಇಟ್ಟ ಅರಣ್ಯ ಇಲಾಖೆ

ತೆಕ್ಕಲಕೋಟೆ: ಪಟ್ಟಣದ ಪ್ರಾಗೈತಿಹಾಸಿಕ ಕಾಲದ ಬೆಟ್ಟಸಾಲುಗಳ ಡೆಂಕ್ಲಮ್ಮ ಗುಡ್ಡದಲ್ಲಿ ಕೆಲದಿನಗಳಿಂದ ಚಿರತೆ ಕಾಣಿಸಿಕೊಂಡಿದೆ ಎಂದು ಕುರಿಗಾಹಿಗಳು ಮಾಹಿತಿ ನೀಡಿದ್ದು, ಅರಣ್ಯ ಇಲಾಖೆಯು ಚಿರತೆಯ ಸೆರೆಗೆ ಬೋನು ಇಟ್ಟಿದ್ದಾರೆ.

ಈ ಕುರಿತು ಚಿರತೆ ರಸ್ತೆ ಬಳಿ ಕಾಣಿಸಿಕೊಂಡ ಚಿತ್ರ ವ್ಯಾಪಕವಾಗಿ ಹರಡಿದೆ. ಅಲ್ಲದೆ ಯುವಕರು ಎಚ್ಚರಿಕೆ ಸಂದೇಶವನ್ನು ವ್ಯಾಟ್ಸ್‌ಅಪ್‌ನಲ್ಲಿ ಕಳುಹಿಸಿ ಸಂಜೆ ಅಥವಾ ರಾತ್ರಿ ವೇಳೆ ಈ ರಸ್ತೆಯಲ್ಲಿ ಸಂಚರಿಸಬಾರದು ಎಂದು ವಿನಂತಿಸಿದ್ದಾರೆ.

‘ಚಿರತೆ ಕಾಣಿಸಿಕೊಂಡ ಸ್ಥಳ ಪರಿಶೀಲಿಸಿದ್ದು, ಚಿರತೆಯ ಹೆಜ್ಜೆ ಗುರುತುಗಳು ಕಂಡುಬಂದಿವೆ. ಇದರಿಂದಾಗಿ ಬೋನು ಅಳವಡಿಸಿ, ಪ್ರಾಣಿಯ ಚಲನವಲನ ಕುರಿತು ಮಾಹಿತಿ ಸಂಗ್ರಹಿಸುತ್ತಿರುವುದಾಗಿ. ಇಲ್ಲಿ ಕತ್ತೆಕಿರುಬ (ಹೈನಾ) ಇರುವ ಸಾಧ್ಯತೆ ಹೆಚ್ಚಿದ್ದು, ಸ್ಥಳ ಪರಿಶೀಲಿಸಿದಾಗ ಹೆಜ್ಜೆ ಗುರುತು ಪತ್ತೆಯಾಗಿವೆ ಎಂದು ಸಿರುಗುಪ್ಪ ತಾಲ್ಲೂಕು ವಲಯ ಅರಣ್ಯಾಧಿಕಾರಿ ಕಾಂತರಾಜು ತಿಳಿಸಿದ್ದಾರೆ.

ವರದಿ : ಮಸೀದಿ ,ಅಬ್ದುಲ್ ಗೌಸ್, ಸಿರುಗುಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!