ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆ

ವಿರಾಜಪೇಟೆ : ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಕ್ಷೇತ್ರದ ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಇಂದು ಬೆಂಗಳೂರಿನ ವಿಕಾಸಸೌಧದ ಕೊಠಡಿ ಸಂಖ್ಯೆ 222ರಲ್ಲಿ ಇಲಾಖೆಯ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಸಭೆಯಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಂಡಿರುವ ರಸ್ತೆ ಹಾಗೂ ಸೇತುವೆ ಅಭಿವೃದ್ಧಿ ಕಾಮಗಾರಿಗಳ ವಿಳಂಬ ಹಾಗೂ ಕೆಲವು ಕಾಮಗಾರಿಗಳ ಗುಣಮಟ್ಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಅಧಿಕಾರಿಗಳು ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಂಡು, ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಗುಣಮಟ್ಟದೊಂದಿಗೆ ಶೀಘ್ರವಾಗಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಕಾವೇರಿ ನೀರಾವರಿ ನಿಗಮ ವತಿಯಿಂದ ಕೈಗೊಂಡಿರುವ ಕಾವೇರಿ ನದಿ ಸ್ವಚ್ಛತೆ ಹಾಗೂ ಪುನರ್ವಸತಿ ಕಾಮಗಾರಿಗಳ ಪ್ರಗತಿಯ ಕುರಿತು ಪರಿಶೀಲನೆ ನಡೆಸಿ, ಬಾಕಿ ಇರುವ ಕಾಮಗಾರಿಗಳನ್ನು ಯಾವುದೇ ವಿಳಂಬವಿಲ್ಲದೆ ಶೀಘ್ರವಾಗಿ ಪೂರ್ಣಗೊಳಿಸುವಂತೆ ನಿಗಮದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಆರ್.ಡಿ.ಪಿ.ಆರ್. ಇಲಾಖೆ ವ್ಯಾಪ್ತಿಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾಲೋನಿಗಳ ರಸ್ತೆ ಅಭಿವೃದ್ಧಿ ಹಾಗೂ ನಿವೇಶನ ಹಂಚಿಕೆ ಬಗ್ಗೆ ಹಾಗೂ ಕಾಲೋನಿಗಳ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೂಡಲೇ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕ್ಷೇತ್ರದ ಜನರಿಗೆ ಅಗತ್ಯವಿರುವ ಮೂಲಸೌಕರ್ಯ ಕಾಮಗಾರಿಗಳನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡದೆ, ಗುಣಮಟ್ಟ ಹಾಗೂ ಪಾರದರ್ಶಕತೆಗೆ ಆದ್ಯತೆ ನೀಡಿ ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಸಭೆಯಲ್ಲಿ ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಾನಂಡ ಪ್ರತ್ಯು ರವರು ಉಪಸ್ಥಿತರಿದ್ದರು.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!