ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

೪೮ನೇ ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಕೊಡಗಿನ ಮಕ್ಕಳ ಅಮೋಘ ಸಾಧನೆ

ಮಡಿಕೇರಿ :”ಬ್ರೈನೋಬ್ರೈನ್” ಇಂಟರ್ ನ್ಯಾಷನಲ್ ಸಂಸ್ಥೆಯ ವತಿಯಿಂದ ಇತ್ತೀಚೆಗೆ ಚೆನ್ನೈನ ಚೆನ್ನೈ ಟ್ರೇಡ್ ಸೆಂಟರ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ “48ನೇ ರಾಷ್ಟ್ರ ಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ-2026ರಲ್ಲಿ ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದ 34 ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳು 21 ಚಾಂಪಿಯನ್ ಟ್ರೋಫಿ, 9 ಚಿನ್ನದ ಪದಕ ಮತ್ತು 4 ಬೆಳ್ಳಿಯ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ವಿದ್ಯಾರ್ಥಿಗಳ ಕಠಿಣ ಪರಿಶ್ರಮದ ಸಾಧನೆಯ ಹೆಗ್ಗಳಿಕೆಯು ತಮ್ಮ ತರಗತಿಯ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಸಲ್ಲಬೇಕು. ಕೇವಲ 3 ನಿಮಿಷದಲ್ಲಿ ವಿವಿಧ ರೀತಿಯ ಲೆಕ್ಕಗಳನ್ನು ಅತೀ ಚುರುಕಾಗಿ ಮಾಡುವ ಮೂಲಕ ಈ ಅದ್ಭುತ ಯಶಸ್ಸಿಗೆ ಕಾರಣಕರ್ತರಾದ ಮಕ್ಕಳಿಗೆ ಹಾಗೂ ಮುತುವರ್ಜಿ ವಹಿಸಿ ಚೆನ್ನೈಗೆ ಕರೆತಂದ ಪೋಷಕರಿಗೆ ತರಬೇತುದಾರರಾದ ಮಾಪಂಗಡ ಕವಿತಾ ಕರುಂಬಯ್ಯ ಅವರು ಅಭಿನಂದನೆ ಸಲ್ಲಿಸಿದರು.

“ಬೈಯೋಬೈನ್ ಸಂಸ್ಥೆಯ ವ್ಯವಸ್ಥಾಪಕ ಶ್ರೀ ಆನಂದ್ ಸುಬ್ರಮಣಿ (ಸುಬ್ಬು) ತಾಂತ್ರಿಕ ನಿರ್ದೇಶಕ ಅರುಲ್ ಸುಬ್ರಮಣ್ಯಂ ಉಪಸ್ಥಿತರಿದ್ದು, ಮಡಿಕೇರಿ “ಬೈಯೋಬೈನ್” ಕೇಂದ್ರದ ಮಕ್ಕಳ ಅತ್ಯುತ್ತಮ ಸಾಧನೆಯನ್ನು ಶ್ಲಾಘಿಸಿದರು.ಒಟ್ಟು 34 ಮಕ್ಕಳು ಮಾಪಂಗಡ ಕವಿತಾ ಕರುಂಬಯ್ಯ ಅವರ ನೇತೃತ್ವದಲ್ಲಿ ವಿವಿಧ ವಿಭಾಗಗಳಲ್ಲಿ ಭಾಗವಹಿಸಿದ್ದರು.

ಇದೇ ಸಂದರ್ಭ ಬೈಯೋಬೈನ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶ್ರೀ ಆನಂದ್ ಸುಬ್ರಮಣಿ ರವರಿಗೆ ಎಜುಕೇಷನ್ ಎಕ್ಸಲೆನ್ಸ್ ಅವಾರ್ಡ್ ಇನ್ ಚೈಲ್ಡ್ ಸ್ಕಿಲ್ ಡೆವಲಪ್‌ಮೆಂಟ್ ಮತ್ತು ತಾಂತ್ರಿಕ ನಿರ್ದೇಶಕ ಶ್ರೀ ಅರುಲ್ ಸುಬ್ರಮಣ್ಯಂ ರವರಿಗೆ ಜಿಟ್ ಸ್ಟ್ಯಾಂಡಿಂಗ್ ಕಾಂಟ್ರಿಬ್ಯೂಷನ್ ಟು ಚೈಲ್ಡ್ ಡೆವಲಪ್‌ಮೆಂಟ್ ಅಂಡ್ ಎಜುಕೇಷನ್ ಅವಾರ್ಡ್ ಲಭಿಸಿತು.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!