ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಡಾ. ರಾಧಾಕೃಷ್ಣರ ಆದರ್ಶಗಳನ್ನು ಅಳವಡಿಸಿಕೊಳ್ಳೋಣ : ಡಾ. ಶಿವರಾಜ ಗುರಿಕಾರ

ಗಂಗಾವತಿ : ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಆದರ್ಶಗಳನ್ನು ಜೀವನದಲ್ಲಿ ನಾವೆಲ್ಲರೂ ಅಳವಡಿಸಿಕೊಳ್ಳೋಣ ಎಂದು ಪ್ರಾಚಾರ್ಯ ಡಾ. ಶಿವರಾಜ ಗುರಿಕಾರ ಹೇಳಿದರು.

ನಗರದ ಶ್ರೀ ಕೊಲ್ಲಿ ನಾಗೇಶ್ವರ ರಾವ್ ಗಂಗಯ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಡಾ. ರಾಧಾಕೃಷ್ಣ ಅವರು ಭಾರತದ ಎರಡನೇ ರಾಷ್ಟ್ರಪತಿ, ಪ್ರಸಿದ್ಧ ತತ್ವಜ್ಞಾನಿ ಮತ್ತು ಶಿಕ್ಷಣ ತಜ್ಞರಾಗಿದ್ದರು. ಗುರು ಎಂದರೆ ಅಜ್ಞಾನವನ್ನು ಹೋಗಲಾಡಿಸಿ ಜ್ಞಾನದ ಬೆಳಕನ್ನು ಮೂಡಿಸುವುದು ಎಂದರ್ಥ ಎಂದು ತಿಳಿಸಿದರು.

ಇಂಗ್ಲಿಷ್ ವಿಭಾಗದ ಸಹ ಪ್ರಾಧ್ಯಾಪಕ ಡಾ. ಉಮಾಕಾಂತ್ ಅವರೆಡ್ಡಿ ಅವರು ಮಾತನಾಡುತ್ತಾ ರಾಧಾಕೃಷ್ಣ ಅವರು ಸೆಪ್ಟೆಂಬರ್ 5, 1888 ತಮಿಳುನಾಡಿನ ತಿರುಟ್ಟಣಿಯಲ್ಲಿ ಜನಿಸಿದರು.
ಏಪ್ರಿಲ್ 17, 1975 ರಂದು ಮರಣ ಹೊಂದಿದರು.
ಇವರು ಶಿಕ್ಷಕರಾಗಿ, ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ಉಪಕುಲಪತಿ, ಹಾಗೂ ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ ಎಂದು ತಿಳಿಸಿದರು.

ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಕೃಷ್ಣ ಅವರು ಮಾತನಾಡುತ್ತ ಹರ ಮುನಿದರೂ ಗುರು ಕಾಯುವನು, ಗುರು ಮುನಿದರೂ ಯಾರೂ ಕಾಯಲಾರರು. ತಂದೆ, ತಾಯಿ ನಂತರದ ಸ್ಥಾನ ಗುರುವಿಗೆ ಮಾತ್ರ.ಶಿಕ್ಷಕ ಭೌತಿಕವಾಗಿ ಏನನ್ನೂ ತಯಾರಿಸದಿರಬಹುದು, ಆದರೆ ವಿದ್ಯಾರ್ಥಿಗಳ ಜೀವನದ ಗುರಿ ತೋರಿಸುತ್ತಾನೆ ಎಂದು ತಿಳಿಸಿದರು.

ಇತಿಹಾಸ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಇಬ್ರಾಹೀಮ್ ಅವರು ಮಾತನಾಡುತ್ತಾ ಅಜ್ಞಾನವೆಂಬ ಕತ್ತಲನ್ನು ಹೊಡೆದು, ಜ್ಞಾನವೆಂಬ ಬೆಳಕನ್ನು ಮೂಡಿಸುವ ಶಕ್ತಿ ಗುರುವಿನ ವಾಣಿಗೆ ಮಾತ್ರ ಇದೆ. ಕಲ್ಲನ್ನು ಸುಂದರ ಮೂರ್ತಿಯನ್ನಾಗಿ ಕೆತ್ತುವ ಶಿಲ್ಪಿಯಂತೆ, ಮಗುವಿನ ವ್ಯಕ್ತಿತ್ವವನ್ನು ರೂಪಿಸುವವನೇ ನಿಜವಾದ ಗುರು ಎಂದರು.

ದೈಹಿಕ ಶಿಕ್ಷಣ ವಿಭಾಗದ ಡಾ. ಅನಿಲ್ ಎಡ್ವಾರ್ಡ್ ಅವರು ಮಾತನಾಡುತ್ತ ಶಿಕ್ಷಕರು ನಿರಂತರವಾಗಿ ಕಲಿಕೆಯಲ್ಲಿ ಇರಬೇಕು. ಶಿಕ್ಷಕರು ಮೊದಲು ವಿದ್ಯಾರ್ಥಿಗಳು ಆಗಿದ್ದರು.
ಈ ಜಯಂತಿಯನ್ನು ಆಚರಿಸುವ ಜವಾಬ್ದಾರಿ ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಮೇಲಿದೆ ಎಂದರು.

ವಾಣಿಜ್ಯ ಶಾಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಅಕ್ಕಿ ಮಾರುತಿ ಅವರು ಮಾತನಾಡುತ್ತ ನಮ್ಮ ಸ್ಕಂದ ಪುರಾಣದಲ್ಲಿ ಗುರುಗಳಿಗೆ ಪರಮ ಪವಿತ್ರ ದೇವರ ಸ್ಥಾನವಿದೆ. ಗುರು ಬದುಕಿಗೆ ದಾರಿ, ಜೀವನಕ್ಕೆ ಜ್ಯೋತಿ. ಪ್ರತಿಯೊಬ್ಬರ ವ್ಯಕ್ತಿತ್ವವನ್ನು ರೂಪಿಸುವ ಮಹಾನ್ ಶಕ್ತಿ ಎಂದರೆ ಗುರುಗಳು.
ನಮಗೆ ಉತ್ತಮವಾದ ವಿದ್ಯೆಯನ್ನು ನೀಡಿದ ಸಕಲ ಗುರುಗಳಿಗೂ ನನ್ನ ಗೌರವಪೂರ್ಣ ನಮನಗಳು‌. ನಮ್ಮ ದೇಶದಲ್ಲಿ ಗುರು ಶಿಷ್ಯ ಪರಂಪರೆಗೆ ವಿಶೇಷವಾದ ಸ್ಥಾನವಿದೆ ಎಂದರು.

ಪ್ರಾಣಿ ಶಾಸ್ತ್ರ ವಿಭಾಗದ ಸಹಾಯಕ ಪ್ರಾದ್ಯಾಪಕ ಸಲಿಮ್ ಅವರು ಮಾತನಾಡುತ್ತ ಡಾ. ರಾಧಾಕೃಷ್ಣ ಇವರು ಭಾರತದ ಮೊದಲ ಉಪರಾಷ್ಟ್ರಪತಿ ಮತ್ತು ಎರಡನೇ ರಾಷ್ಟ್ರಪತಿ ಆಗಿ 1962-1967 ರಲ್ಲಿ ಆಗಿದ್ದರು.
ಇವರ ಜನ್ಮದಿನವಾದ ಸೆಪ್ಟೆಂಬರ್ 5 ಅನ್ನು ಭಾರತದಲ್ಲಿ ಶಿಕ್ಷಕರ ದಿನಾಚರಣೆಯಾಗಿ ಆಚರಿಸಲಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಡಾ.ಮುಮತಾಜ್ ಬೇಗಂ, ಶೋಭಾ ರಾಣಿ, ಐಕ್ಯೂಎಸಿ ಸಂಚಾಲಕ ಪ್ರೊ. ಮಂಜುನಾಥ ಕೆ ಎಚ್, ಡಾ. ನರಸಿಂಹ, ಹುಸೇನ್ ಭಾಷ, ಬಸವರಾಜ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸರ್ವ ಗ್ರಾಮ ಬ್ಯಾಂಕ್ ವ್ಯವಸ್ಥಾಪಕರು, ಬ್ಯಾಂಕ್ ಸಿಬ್ಬಂದಿಗಳು ಮತ್ತು ಕಾಲೇಜಿನ ಸಹಾಯಕ ಪ್ರಾಧ್ಯಪಕರಾದ ಡಾ. ಅನಿಲ್ ಕುಮಾರ, ಮಲ್ಲಿಕಾರ್ಜುನ, ಡಾ. ಅಶೋಕ, ಭೂಮಿಕಾ, ತಬಸಮ್ ಅಂಜುಮ್, ಪ್ರತಿಭಾ, ಡಾ. ಸೃಷ್ಟಿ ಜವಾಳಕರ, ಡಾ. ಪವನ್ ಕುಮಾರ ಹಾಗೂ ಕಾಲೇಜಿನ ಎಲ್ಲ ವಿಭಾಗದ ಅತಿಥಿ ಉಪನ್ಯಾಸಕರು ಮತ್ತು ಭೋದಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು..

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರಾದ ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರು ಆದಂತಹ  ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

error: Content is protected !!