ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪ್ರಜಾಸೇವಾ ಆಂದೋಲನಕ್ಕೆ ಚಾಲನೆಜನಸೇವೆಯಲ್ಲಿ ವಿಳಂಬ ಬೇಡ: ಕಾಶಪ್ಪನವರ

ಗುಳೇದಗುಡ್ಡ: ಜನರು ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಪದೇ ಪದೇ ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿಯನ್ನು ತಪ್ಪಿಸಿ, ಆಡಳಿತ ವ್ಯವಸ್ಥೆಯನ್ನೇ ಜನರ ಬಳಿಗೆ ಕೊಂಡೊಯ್ಯುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮ ಆರಂಭಿಸಲಾಗಿದೆ ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿಜಯಾನಂದ ಎಸ್. ಕಾಶಪ್ಪನವರ ಹೇಳಿದರು.
ಪಟ್ಟಣದ ಗುಳೇದಗುಡ್ಡದ ಕರನಂದಿ ಕಲ್ಯಾಣ ಮಂಟಪದಲ್ಲಿ ಶನಿವಾರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಎಂಬ ಆಶಯದೊಂದಿಗೆ ಆಂದೋಲನ ಆರಂಭಿಸಲಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅವರಿಗೆ ನ್ಯಾಯ ಒದಗಿಸುವುದು ಸರ್ಕಾರದ ಪ್ರಮುಖ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಜನರ ಬಳಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. ಜನರು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು, ಸರ್ಕಾರದ ಸೇವೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ಬಡವರಿಗೆ ಸ್ವಂತ ಸೂರು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಪ್ರತಿ ಜಿಲ್ಲೆಗೆ 50 ಸಾವಿರ ನಿವೇಶನಗಳನ್ನು ಒದಗಿಸುವ ಮೂಲಕ ಬಡವರಿಗೆ ವಸತಿ ಕಲ್ಪಿಸುವ ಗುರಿ ಹೊಂದಿದ್ದು, ಇದಕ್ಕಾಗಿ ಆಯಾ ಜಿಲ್ಲೆಗಳ ಕಂದಾಯ ಇಲಾಖೆಯ ಮೂಲಕ ಸರ್ಕಾರಿ ಜಾಗವನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ ಎಂದರು.
ಸರ್ಕಾರಿ ಯೋಜನೆಗಳು ಹಾಗೂ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಕಾಲಕ್ಕೆ ತಲುಪುವಂತೆ ಮಾಡುವುದು ಪ್ರಜಾಸೇವಾ ಆಂದೋಲನದ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.
ಪ್ರಜಾಸೇವಾ ಆಂದೋಲನ ಹಿನ್ನಲೆಯಲ್ಲಿ ವಿವಿಧ ಇಲಾಖೆಯ ಮಳಿಗೆಗಳನ್ನು ತೆರೆಯಲಾಗಿತ್ತು.
ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ, ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ದಿ ನಿಗಮದ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅನೀಲಕುಮಾರ ದಡ್ಡಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ ಮೊಹಸೀನ್, ಜಿಲ್ಲಾಧಿಕಾರಿ ಸಂಗಪ್ಪ, ಜಿ.ಪಂ. ಸಿಇಓ ಗಜಾನನ ಬಾಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ತಹಶೀಲ್ದಾರ ಅಮರೇಶ ಪಮ್ಮಾರ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರಾದ ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರು ಆದಂತಹ  ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

error: Content is protected !!