ಹುನಗುಂದ : ರಾಜ್ಯದ ಆಯ್ದ ಎರಡು ನೂರು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಇಂಟಿಗ್ರೇಟೆಡ್ ತರಬೇತಿಗಳು ದಿನಾಂಕ 9- 9 -2026 ರಿಂದ ಪಟ್ಟಣದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾರಂಭವಾಗುತ್ತವೆ ಅದರ ಪೂರ್ವಭಾವಿಯಾಗಿ ವಿದ್ಯಾರ್ಥಿಗಳ ಹಾಗೂ ಪಾಲಕರ ಸಭೆಯನ್ನು ಏರ್ಪಡಿಸಲಾಗಿತ್ತು.
ಸಭೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಹಿರಿಯ ಸದಸ್ಯರಾದ ಶ್ರೀಯುತ ಚಂದ್ರಶೇಖರ ಚಟ್ನಹಾಳ ಭಾಗವಹಿಸಿ ವಿದ್ಯಾರ್ಥಿಗಳಿಗೆ ಹಾಗೂ ಪಾಲಕರಿಗೆ ಇಲಾಖೆಯು ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ವಿಶೇಷ ತರಬೇತಿಯನ್ನು ನೀಡುತ್ತಿದ್ದು ಮುಂಬರುವ ಸಿಇಟಿ ಪರೀಕ್ಷೆ ಬರೆಯಲು ಈ ತರಬೇತಿಯು ಸಹಾಯಕವಾಗುತ್ತದೆ. ಸರ್ಕಾರದ ಮತ್ತು ಇಲಾಖೆಯ ಈ ಕಾರ್ಯ ಶ್ಲಾಘನೀಯ ಎಂದರು. ಕಾಲೇಜಿನ ಪ್ರಭಾರಿ ಪ್ರಾಚಾರ್ಯ ಶರಣಪ್ಪ , ಹೂಲಗೇರಿ ಸವಿಸ್ತಾರವಾದ ಮಾಹಿತಿಯನ್ನು ನೀಡಿದರು. ವಿಜ್ಞಾನ ವಿಭಾಗದ ಉಪನ್ಯಾಸಕ ಪೂರ್ವ ಭಾವಿಯಾಗಿ ವಿದ್ಯಾರ್ಥಿಗಳು ಅನುಸರಿಸಬೇಕಾದ ಕ್ರಮಗಳನ್ನು ತಿಳಿಸಿದರು.
- ಕರುನಾಡ ಕಂದ ಸುದ್ದಿ




















