ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪತ್ರಿಕಾ ಪ್ರಕಟಣೆ

ಬಿ.ಇಡಿ. ಪರೀಕ್ಷೆಯಲ್ಲಿ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದ ಸಾಧನೆ
ಪ್ರಥಮ ಹಾಗೂ ತೃತೀಯ ಸೆಮಿಸ್ಟರ್‌ಗಳಲ್ಲಿ ಶೇ.100 ಫಲಿತಾಂಶ; ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

ಬೀದರ: ನಗರದ ಹೈ.ಕ.ಶಿ. ಸಂಸ್ಥೆಯ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯ, ಬೀದರ ಜುಲೈ 2026ರಲ್ಲಿ ನಡೆದ ಬೀದರ್ ವಿಶ್ವವಿದ್ಯಾಲಯ, ಬೀದರನ ಬಿ.ಇಡಿ. ಪ್ರಥಮ ಹಾಗೂ ತೃತೀಯ ಸೆಮಿಸ್ಟರ್ ಪರೀಕ್ಷೆಗಳಲ್ಲಿ ಶೇ.100ರಷ್ಟು ಫಲಿತಾಂಶ ಬಂದಿದ್ದು ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಮಲ್ಲಿಕಾರ್ಜುನ ಚ. ಕನಕಟ್ಟೆ ತಿಳಿಸಿದ್ದಾರೆ.

ಪ್ರಥಮ ಸೆಮಿಸ್ಟರ್‌ನಲ್ಲಿ ಸೈದಾ ಉಜ್ಮಾ ಶೇ.89.7 ಅಂಕಗಳೊಂದಿಗೆ ಪ್ರಥಮ,
ಪ್ರತೀಕ್ಷಾ ಶೇ.85.5 ಅಂಕಗಳೊಂದಿಗೆ ದ್ವಿತೀಯ, ನಂದಿನಿ ಶೇ.84.7 ಅಂಕಗಳೊಂದಿಗೆ ತೃತೀಯ ಸ್ಥಾನ, ನವೀತಾ ನರಸಿಮ್ಲು ಶೇ.83.8 ಅಂಕಗಳೊಂದಿಗೆ ನಾಲ್ಕನೇ ಹಾಗೂ ರೇಷ್ಮಾ ಶೇ.83.7 ಅಂಕಗಳೊಂದಿಗೆ ಐದನೇ ಸ್ಥಾನ ಗಳಿಸಿದ್ದಾರೆ.

ತೃತೀಯ ಸೆಮಿಸ್ಟರ್‌ನಲ್ಲಿ ಪ್ರೀಯಾಂಕಾ ಶೇ.88 ಅಂಕಗಳೊಂದಿಗೆ ಪ್ರಥಮ, ರಾಜಕುಮಾರ ಶೇ.87.5 ದ್ವಿತೀಯ, ಬಸವರತ್ನ ಶೇ.87 ಅಂಕಗಳೊಂದಿಗೆ ತೃತೀಯ, ಗುರುಕಿರಣ ಹಾಗೂ ಅನುಪಮಾ ತಲಾ ಶೇ.86.8 ಅಂಕಗಳೊಂದಿಗೆ ನಾಲ್ಕನೇ ಸ್ಥಾನ ಮತ್ತು ವಿಜಯಲಕ್ಷ್ಮೀ ಶೇ.86.5 ಅಂಕಗಳೊಂದಿಗೆ ಐದನೇ ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿಗಳ ಉತ್ತಮ ಸಾಧನೆಗೆ ಹೈ.ಕ.ಶಿ. ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಆಡಳಿತ ಮಂಡಳಿ ಸದಸ್ಯರು ಹಾಗೂ ಬಿವಿಬಿ ಆವರಣದ ಸಂಚಾಲಕರಾದ ಡಾ. ರಜನೀಶ ವಾಲಿ ಅಭಿನಂದಿಸಿ ಶುಭ ಹಾರೈಸಿದ್ದಾರೆ. ಪ್ರಾಚಾರ್ಯರು, ಪ್ರಾಧ್ಯಾಪಕರು ಹಾಗೂ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!