ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗಂಗಾಮತ ಸಮುದಾಯದ ಸಮಗ್ರ ಅಭಿವೃದ್ಧಿಗೆ ಅಗತ್ಯವಾದ ಸಹಕಾರ ನೀಡುತ್ತೇನೆ : ಜೆ.ಎನ್.ಗಣೇಶ್

ಬಳ್ಳಾರಿ / ಕಂಪ್ಲಿ : ತಾಲ್ಲೂಕಿನಲ್ಲಿ ಗಂಗಾಮತ ಸಮುದಾಯದ ಸಮಗ್ರವಾದ ಅಭಿವೃದ್ಧಿಗೆ ಅಗತ್ಯವಾದ ಸಹಕಾರ ನೀಡುವುದಾಗಿ ಶಾಸಕ ಜೆ.ಎನ್.ಗಣೇಶ್ ತಿಳಿಸಿದರು.
ಅವರು ಪಟ್ಟಣದ ಗಂಗಾಮತಸ್ಥರ ಸಮುದಾಯ ಹಮ್ಮಿಕೊಂಡಿದ್ದ ಜಾಗೃತಿ ರ್ಯಾಲಿ,ಗಂಗಾಮತ ಕಲ್ಯಾಣ ಮಂಟಪಕ್ಕೆ ಭೂಮಿ ಪೂಜೆ ಹಾಗೂ ಧಾರ್ಮಿಕ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದರು. ಸಮುದಾಯದ ಕಲ್ಯಾಣ ಮಂಟಪ ನಿರ್ಮಾಣಕ್ಕೆ ಸದ್ಯ 1 ಕೋಟಿ ರೂ ಅನುದಾನ ನೀಡಿದ್ದು, ಅಗತ್ಯವಿದ್ದಲ್ಲಿ ಇನ್ನು ಹೆಚ್ಚಿನ ಅನುದಾನ ಒದಗಿಸುವುದಾಗಿ ಭರವಸೆಯನ್ನು ನೀಡಿದರು.
ತಾಲ್ಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ಗಂಗಾಮತ ಸಮುದಾಯ ಭವನಕ್ಕೆ 1 ಕೋಟಿ ರೂ. ಅನುದಾನ, ಅಂಬಿಗರ ಚೌಡಯ್ಯ ವೃತ್ತ ನಿರ್ಮಾಣಕ್ಕೆ,ಅಂಬಿಗರ ಚೌಡಯ್ಯನವರ ಪುತ್ತಳಿ ಸ್ಥಾಪನೆಗೆ ತಲಾ 50 ಲಕ್ಷರೂಗಳ ಅನುದಾನ ಒದಗಿಸುವುದಾಗಿ ಭರವಸೆಯನ್ನು ನೀಡಿದರು.
ಪುರಸಭೆ ಮಾಜಿ ಅಧ್ಯಕ್ಷ ಬಿ.ಸಿದ್ದಪ್ಪ, ಸಮಾಜದ ಮುಖಂಡರಾದ ಕೆ.ಮನೋಹರ್ ಮಾತನಾಡಿ ಮುಂಬರುವ ಚುನಾವಣೆಗಳಲ್ಲಿ ಗಂಗಾಮತಸ್ಥರಿಗೆ ಹೆಚ್ಚಿನ ರಾಜಕೀಯ ಸ್ಥಾನಮಾನ ನೀಡಬೇಕು. ಗಂಗಾಮತಸ್ಥರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಕೇಂದ್ರವನ್ನು ಒತ್ತಾಯಿಸಬೇಕು. ಪಟ್ಟಣದಲ್ಲಿ ನಿರ್ಮಿಸಲಿರುವ ಕಲ್ಯಾಣ ಮಂಟಪಕ್ಕೆ ಸುಮಾರು 4 ಕೋಟಿ ರೂಗಳ ಕ್ರಿಯಾ ಯೋಜನೆಯನ್ನು ತಯಾರಿಸಲಾಗಿದ್ದು, ಇನ್ನೂ ಹೆಚ್ಚಿನ ಅನುದಾನವನ್ನು ನೀಡಬೇಕೆಂದು ಮನವಿ ಮಾಡಿದರು.
ಇದಕ್ಕು ಮುನ್ನ ಕಂಪ್ಲಿ ಕೋಟೆಯ ತುಂಗಭದ್ರಾ ನದಿಯಲ್ಲಿ ಗಂಗಾ ಪೂಜೆಯನ್ನು ನೆರವೇರಿಸಿದ ನಂತರ ಸಮುದಾಯದ ಮಹಿಳೆಯರು ಪೂರ್ಣಕುಂಭ, ಕಳಸ ಕನ್ನಡಿಗಳೊಂದಿಗೆ ಪಟ್ಟಣದಲ್ಲಿ ಬೃಹತ್ ಮೆರವಣಿಗೆ ನಡೆಸಿ ಸಮುದಾಯ ಭವನ ನಿರ್ಮಾಣ ಸ್ಥಳಕ್ಕೆ ಆಗಮಿಸಿದರೆ, ಸಮುದಾಯದ ಪುರುಷರು, ಯುವಕರು ನೂರಾರು ಮೋಟಾರು ಸೈಕಲ್ ರ್ಯಾಲಿ ಮೂಲಕ ಜಯಘೋಷಗಳನ್ನು ಮೊಳಗಿಸುತ್ತಾ ಆಗಮಿಸಿದರು.
ಗಂಗಾಮತಸ್ಥರ ಸಂಘದ ತಾಲ್ಲೂಕು ಅಧ್ಯಕ್ಷ ಎಲಿಗಾರ ನಾಗರಾಜ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಕನಕಪ್ಪ ಸುಣಗಾರ, ನಾಗರಾಜ, ನೇಣಕಿ ಗಿರೀಶ್, ಆಯ್ಯೋದಿ ವೆಂಕಟೇಶ್, ಬಿ.ರಮೇಶ್, ಕೆ.ಪ್ರಕಾಶ್, ನಡವಿ ಮಲ್ಲಿಕಾರ್ಜುನ, ಬಿ.ಈರಪ್ಪ, ಜೆ.ಯಲ್ಲಪ್ಪ, ಕಟ್ಟೆ ವೆಂಕಟೇಶ್, ಕಾಗಿ ಈರಣ್ಣ, ಇಟಗಿ ಫಕ್ಕೀರಪ್ಪ, ಬಸವರಾಜ, ವೈ.ಲೋಕೇಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಅಧ್ಯಕ್ಷ ಕೆ.ಶ್ರೀನಿವಾಸರಾವ್, ಎಪಿಎಂಸಿ ಅಧ್ಯಕ್ಷ ಎನ್.ಹಬೀಬ್ ರೆಹಮಾನ್, ಪುರಸಭೆ ಮಾಜಿ ಅಧ್ಯಕ್ಷ ಬಟ್ಟ ಪ್ರಸಾದ್, ಪುರಸಭೆ ಮಾಜಿ ಸದಸ್ಯ ಕೆ.ಎಸ್.ಚಾಂದ್ ಬಾಷಾ, ಕುರಗೋಡು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಚನ್ನಬಸವನಗೌಡ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!