ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಿಜೆಪಿ ಕುತಂತ್ರವೇ ಸತೀಶ್ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ : ಬಿ.ನಬೀಸಾಬ್ ಆರೋಪ

ವರದಿ : ಜಿಲಾನಸಾಬ್ ಬಡಿಗೇರ್

ಬಳ್ಳಾರಿ / ಕಂಪ್ಲಿ : ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸತೀಶ ಜಾರಕಿ ಹೊಳಿ ಅವರ ವರ್ಚಸ್ಸು ಹೆಚ್ಚಿದ್ದು, ಮತ್ತು ಮುಂದಿನ ಮುಖ್ಯಮಂತ್ರಿ ಆಕಾಂಕ್ಷಿಯಾಗಿರುವ ಹಿನ್ನಲೆ ಬಿಜೆಪಿ ಕುತಂತ್ರದ ಇಡಿ ದಾಳಿಯಾಗಿದ್ದು, ಇದನ್ನು ತೀವ್ರವಾಗಿ ಮಾನವ ಬಂದುತ್ವ ವೇದಿಕೆ ಖಂಡಿಸುವ ಜೊತೆಗೆ ಮುಂಬರುವ ದಿನದಲ್ಲಿ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ತಕ್ಕಪಾಠ ಕಲಿಸುತ್ತೇವೆ ಎಂದು ಮಾನವ ಬಂದುತ್ವ ವೇದಿಕೆಯ ಕಂಪ್ಲಿ ತಾಲೂಕು ಸಂಚಾಲಕ ಬಿ.ನಬಿಸಾಬ್ ಹೇಳಿದರು. ಪಟ್ಟಣದ ಅತಿಥಿ ಗೃಹದಲ್ಲಿ ಶನಿವಾರ ನಡೆದ ಸಂಘಟನಾ ಸಭೆಯಲ್ಲಿ ಮಾನವ ಬಂದುತ್ವ ವೇದಿಕೆ ಸಂಸ್ಥಾಪಕ ಮತ್ತು ಸಚಿವ ಸತೀಶ ಜಾರಕಿಹೊಳಿ ಅವರ ಮನೆ ಮೇಲಿನ ದಾಳಿ ಖಂಡಿಸಿ ಮಾತನಾಡಿ, ಸತೀಶ್ ಜಾರಕಿಹೊಳಿ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ ಎಂಬ ಭೀತಿಯಿಂದ ಹಾಗೂ ಅವರ ರಾಜಕೀಯ ಉದ್ದೇಶಪೂರ್ವಕವಾಗಿ ಇಡಿ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಂಡು ದಾಳಿ ಮಾಡಿಸಿದೆ. ಇದು ರಾಜಕೀಯ ಪ್ರೇರಿತ ದಾಳಿಯಾಗಿದೆ. ರಾಜ್ಯದ ಬಿಜೆಪಿವರ ಮಾತನ್ನು ಕೇಳಿಕೊಂಡು ಕೇಂದ್ರದ ಸರ್ಕಾರವು ವಿರೋಧ ಪಕ್ಷದ ನಾಯಕರನ್ನು, ಮುಖಂಡರನ್ನು ಗುರಿಯಾಗಿಸಿಕೊಂಡು ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ. ಸತೀಶ್ ಜಾರಕಿಹೊಳಿ ಅವರ ಜನಪ್ರಿಯತೆ ಸಹಿಸದೇ ಈ ರೀತಿ ದಾಳಿ ನಡೆಸಲಾಗಿದೆ. ಆದರೆ, ಜಾರಕಿಹೊಳಿ ಅವರು ಈ ದಾಳಿಗೆ ಕಾನೂನಾತ್ಮಕವಾಗಿಯೇ ಸೂಕ್ತ ಉತ್ತರ ನೀಡಲಿದ್ದಾರೆ. ಮತ್ತು ಅವರ ಜೊತೆಗೆ ಇಡೀ ರಾಜ್ಯದಲ್ಲಿ ಅಭಿಮಾನಿಗಳು, ಕಾರ್ಯಕರ್ತರಿದ್ದೇವೆ. ಇದೇ ತರನಾಗಿ ದಾಳಿ ಮುಂದುವರೆಸಿದರೆ, ರಸ್ತೆಗೆ ಇಳಿದು ಹೋರಾಟದ ಮೂಲಕ ಬಿಜೆಪಿ ಚಳಿ ಬಿಡಿಸಲಾಗುವುದು ಎಂದು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಅಂಜುಮನ್ ಕಮಿಟಿ ಅಧ್ಯಕ್ಷ ಅಬ್ದುಲ್ ಕರೀಂ ಲಡ್ಡು, ಮುಖಂಡರಾದ ಸಣಾಪುರ ಮರಿಸ್ವಾಮಿ, ವಸಂತರಾಜ ಕಹಳೆ, ವರದಿ ಜಾಫರ್, ರವಿ ಮಣ್ಣೂರು, ವಾಸು, ರಾಜಾಭಕ್ಷಿ, ಶಿವರಾಮ ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!