ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನಗರೀಕರಣಕ್ಕೆ ಬ್ರೇಕ್: ಕುರುಗೋಡು, ತೆಕ್ಕಲಕೋಟೆಗೆ 100 ಅಡಿ ಅಗಲದ ರಿಂಗ್ ರೋಡ್ ಭಾಗ್ಯ!

ವರದಿ: ಜಿಲಾನಸಾಬ್ ಬಡಿಗೇರ್

ಬಳ್ಳಾರಿ / ಕುರುಗೋಡು : ರಾಜ್ಯದ ಸಣ್ಣ ಮತ್ತು ಮಧ್ಯಮ ಪಟ್ಟಣಗಳ ಅಭಿವೃದ್ಧಿಗೆ ಸರ್ಕಾರ ಮುಂದಾಗಿದ್ದು, ಜಿಲ್ಲೆಯ ಪ್ರಮುಖ ತಾಲೂಕು ಕೇಂದ್ರಗಳಾದ ಕುರುಗೋಡು ಮತ್ತು ತೆಕ್ಕಲಕೋಟೆ ಪಟ್ಟಣಗಳಿಗೆ ಹೊಸದಾಗಿ ರಿಂಗ್ ರೋಡ್ (ವರ್ತುಲ ರಸ್ತೆ) ನಿರ್ಮಾಣವಾಗಲಿದೆ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ರೋಡ್ ನೆಟ್ವರ್ಕ್ ಗ್ರಿಡ್ ಪ್ಲಾನ್’ (Road Network Grid Plan) ಯೋಜನೆಯಡಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯಾದ್ಯಂತ ಗುರುತಿಸಲಾದ 108 ಪಟ್ಟಣಗಳ ಪಟ್ಟಿಯಲ್ಲಿ ಬಳ್ಳಾರಿ ಜಿಲ್ಲೆಯ ಈ ಎರಡು ಪಟ್ಟಣಗಳು ಸ್ಥಾನ ಪಡೆದಿವೆ.
ಪ್ರತಿಯೊಂದು ಪಟ್ಟಣಕ್ಕೂ ತಲಾ 100 ಅಡಿ ಅಗಲದ ಸುಸಜ್ಜಿತ ವರ್ತುಲ ರಸ್ತೆ ನಿರ್ಮಿಸಲಾಗುತ್ತದೆ. ನಗರೀಕರಣದಿಂದ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ನೀಡಲು ಜಿಐಎಸ್ (GIS) ತಂತ್ರಜ್ಞಾನ ಆಧಾರಿತ ನಕ್ಷೆ ಸಿದ್ಧಪಡಿಸಲಾಗಿದೆ.

2 ಕಿ.ಮೀ ಇಂಪ್ಯಾಕ್ಟ್ ಜೋನ್:
ವರ್ತುಲ ರಸ್ತೆಯ ಸುತ್ತಲೂ 2 ಕಿಲೋಮೀಟರ್ ವ್ಯಾಪ್ತಿಯನ್ನು ಪ್ರಭಾವ ವಲಯ (Impact Zone) ಎಂದು ಘೋಷಿಸಲಾಗುತ್ತದೆ.

ಹಸಿರು ವಲಯಕ್ಕೆ ಆದ್ಯತೆ:
ರಸ್ತೆ ಸಂಚಾರ ದಟ್ಟಣೆ ನಿಯಂತ್ರಿಸುವುದರ ಜೊತೆಗೆ ಪರಿಸರ ಸಂರಕ್ಷಣೆಗೂ ಈ ಯೋಜನೆಯಲ್ಲಿ ಆದ್ಯತೆ ನೀಡಲಾಗಿದೆ. ನಿಗದಿಪಡಿಸಲಾದ ಇಂಪ್ಯಾಕ್ಟ್ ಜೋನ್‌ನಲ್ಲಿ ಯಾವುದೇ ರೀತಿಯ ಮನೆ ಅಥವಾ ವಾಣಿಜ್ಯ ಕಟ್ಟಡಗಳನ್ನು ಕಟ್ಟಲು ಅವಕಾಶವಿರುವುದಿಲ್ಲ. ಬದಲಿಗೆ, ಈ ವಲಯದಲ್ಲಿ ಕಡ್ಡಾಯವಾಗಿ ಮರಗಳನ್ನು ಬೆಳೆಸಿ ಹಸಿರು ವಲಯವನ್ನಾಗಿ ಪರಿವರ್ತಿಸಲು ಸಂಪುಟ ಸಭೆ ಅನುಮೋದನೆ ನೀಡಿದೆ. ಇದರಿಂದಾಗಿ 2ನೇ ಮತ್ತು 3ನೇ ಹಂತದ ನಗರಗಳು ವ್ಯವಸ್ಥಿತವಾಗಿ ಅಭಿವೃದ್ಧಿ ಹೊಂದಲು ಹಾದಿ ಸುಗಮವಾಗಲಿದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!