ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರಾವಣಮಾಸದ ಭಾದ್ರಪದ ಅಮಾವಾಸ್ಯೆದಂದು ನಡೆದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

ಬಳ್ಳಾರಿ / ಕಂಪ್ಲಿ : ಭಾದ್ರಪದ ಅಮಾವಾಸ್ಯೆ ಪ್ರಯುಕ್ತ ತಾಲೂಕಿನ ದೇವಸ್ಥಾನಗಳಲ್ಲಿ ಭಜನೆ, ವಿಶೇಷ ಪೂಜೆ ಸೇರಿದಂತೆ ನಾನಾ ಧಾರ್ಮಿಕ ಕಾರ್ಯಕ್ರಮಗಳು ಅತ್ಯಂತ ಶ್ರದ್ದಾಭಕ್ತಿಯಿಂದ ಶುಕ್ರವಾರ ನೆರವೇರಿದವು.
ಸ್ಥಳೀಯ ಐತಿಹಾಸಿಕ ಸೋಮಪ್ಪ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅಲಂಕಾರ, ಮಹಾಮಂಗಳಾರತಿ ಹಾಗೂ ವಿವಿಧ ಧಾರ್ಮಿಕ ಕಾರ್ಯಗಳು ಶಾಶ್ತೋತ್ರವಾಗಿ ನಡೆದವು. ಇಲ್ಲಿನ ಸೋಮಪ್ಪ ದೇವಸ್ಥಾನದಲ್ಲಿ ನೂರಾರು ಸಂಖ್ಯೆಯಲ್ಲಿ ಆಗಮಿಸಿ, ಭಕ್ತರು ಕಾಯಿ, ಕರ್ಪೂರ ಅರ್ಪಿಸಿ, ದೇವರ ದರ್ಶನ ಪಡೆದು ಪುನೀರಾದರು. ಮತ್ತು ಇಷ್ಟಾರ್ಥ ಸಿದ್ಧಿಗಾಗಿ ಬೇಡಿದರು. ನಂತರ ಪ್ರಸಾದ ಸ್ವೀಕರಿಸಿದರು.
ಇಲ್ಲಿನ ಪೇಟೆ ಬಸವೇಶ್ವರ, ಗ್ರಾಮ ದೇವತೆ ಮಾರೆಮ್ಮ, ಆಂಜನೇಯ, ಕಂಪ್ಲಿ-ಕೋಟೆಯ ಐತಿಹಾಸಿಕ ಪಂಪಾಪತಿ ದೇವಸ್ಥಾನ, ಸಕ್ಕರೆ ಕಾರ್ಖಾನೆಯ ಕಾಳಿಕಾ ದೇವಸ್ಥಾನ ಸೇರಿದಂತೆ ನಾನಾ ಭಾಗದಲ್ಲಿರುವ ದೇವಸ್ಥಾನದಲ್ಲಿ ಶ್ರಾವಣಮಾಸದ ಭಾದ್ರಪದ ಅಮಾವಾಸ್ಯೆಯ ದಿನದಂದಯ ಧಾರ್ಮಿಕ ಕೈಂಕರ್ಯಗಳನ್ನು ಶ್ರದ್ಧೆಯಿಂದ ಪೂರೈಯಿಸಿದರು. ಪಟ್ಟಣದ ಸತ್ಯನಾರಾಯಣ ಪೇಟೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಶಾಖಾ ಮಠದಲ್ಲಿ ರಾಯತ ಮೃತ್ತಿಕಾ ಬೃಂದಾವನವನ್ನು ವಿಶೇಷವಾಗಿ ಅಲಂಕರಿಸಿ ಪೂಜಿಸಿದರು. ತಾಲೂಕಿನ ಸಣಾಪುರದ ಉದ್ಭವ ವೀರಭದ್ರೇಶ್ವರ ದೇವಸ್ಥಾನದಲ್ಲಿ ಅಲಂಕಾರ, ಅಭಿಷೇಕ, ಮಹಾಮಂಗಳಾರತಿ ಸೇರಿದಂತೆ ಪೂಜಾ ಪುನಸ್ಕಾರಗಳು ಭಕ್ತರು ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿದವು. ತದನಂತರ ಅನ್ನ ಸಂತಾರ್ಪಣೆ ಏರ್ಪಡಿಸಲಾಗಿತ್ತು. ಸಮೀಪದ ಬುಕ್ಕಸಾಗರದ ಏಳು ಹೆಡೆ ನಾಗಪ್ಪ ದೇವಸ್ಥಾನದಲ್ಲಿ ಅಮಾವಾಸ್ಯೆ ನಿಮಿತ್ಯ ನಾಗಪ್ಪ ದೇವರಿಗೆ ಹೂವಿನ ಅಲಂಕಾರ ಮಾಡಲಾಗಿತ್ತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ದೇವರ ದರ್ಶನ ಪಡೆದುಕೊಂಡರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!