ಸಿರುಗುಪ್ಪ : ಮನೆಮನೆಗಳಿಗೆ ನಳ ಸಂಪರ್ಕವಿದ್ದರೂ ಬಾರದ ಕುಡಿಯುವ ನೀರು, ಮಳೆ ಬಂದರೆ ಕೆಸರುಗದ್ದೆಯಾಗಿ ಮಾರ್ಪಡುವ ರಸ್ತೆಗಳು, ಹೀಗೆ ಹಲವು ಸೌಲಭ್ಯಗಳಿಂದ ವಂಚಿತವಾಗಿರುವ ತಾಲೂಕಿನ ಬಲಕುಂದಿ ಗ್ರಾ. ಪಂ. ವ್ಯಾಪ್ತಿಯ ವರಮಯ್ಯ ಕಾಲೋನಿ ನಿವಾಸಿಗಳು ನಿತ್ಯವೂ ಮೂಲಸೌಕರ್ಯಗಳಿಗಾಗಿ ಪರದಾಡುವಂತಾಗಿದೆ.
ಈ ಗ್ರಾಮದಲ್ಲಿ ಸುಮಾರು 50ಕ್ಕೂ ಹೆಚ್ಚು ಮನೆಗಳಿದ್ದು, 250ರಿಂದ 300 ಜನ ವಾಸಿಸುತ್ತಿದ್ದಾರೆ ಈಗಾಗಲೇ ಕ್ಯಾಂಪ್‌ನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಮನೆಮನೆಗೆ ನಳ ಸಂಪರ್ಕ ಕಲ್ಪಿಸಲಾಗಿದೆ. ಆದರೆ ನಳ ಸಂಪರ್ಕ ಕಲ್ಪಿಸಿದರೂ ಇಲ್ಲಿಯವರೆಗೂ ಶುದ್ಧ ಕುಡಿಯುವ ನೀರನ್ನೇ ಕಾಣದ ನಿವಾಸಿಗಳಿಗೆ ಕೆರೆಯ ನೀರೇ ಆಸರೆಯಾಗಿದೆ.
ಇಲ್ಲಿಯ ಎಲ್‌ಎಲ್‌ಸಿ ಕಾಲುವೆಯಿಂದ ನೀರನ್ನು ಕೆರೆಗೆ ತುಂಬಿಸಿ, ಅಲ್ಲಿಂದ ನೇರವಾಗಿ ಮೇಲ್ಮಟ್ಟದ ನೀರಿನ ತೊಟ್ಟಿಗೆ ಹರಿಸಿ ಮನೆಗಳಿಗೆ ಪೂರೈಸಲಾಗುತ್ತಿದೆ. ನೀರಿನ ಶುದ್ದೀಕರಣಕ್ಕೆ ಸಮರ್ಪಕ ವ್ಯವಸ್ಥೆ ಇಲ್ಲದಿರುವುದರಿಂದ ಮಳೆಗಾಲದಲ್ಲಿ ಕೆಸರು ಮಿಶ್ರಿತ ನೀರು ನಲ್ಲಿಗಳಲ್ಲಿ ಹರಿಯುತ್ತಿದೆ ಎಂದು ಸ್ಥಳೀಯ ನಿವಾಸಿ ಮಂಗಮ್ಮ ಆರೋಪಿಸಿದ್ದಾರೆ.
ಕೆರೆಯ ಸುತ್ತಲೂ ರಕ್ಷಣಾಗೋಡೆಯೂ ಇಲ್ಲ. ಕೆರೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವ ಹಾಗೂ ನೀರನ್ನು ಕಲುಷಿತಗೊಳ್ಳದಂತೆ ಕಾಪಾಡುವ ವ್ಯವಸ್ಥೆಯೂ ಸಮರ್ಪಕವಾಗಿಲ್ಲ. ಹೀಗಾಗಿ ಜನರ ಕುಡಿಯುವ ನೀರಿನ ಮೂಲವಾಗಿರುವ ಕೆರೆಯ ಸ್ಥಿತಿ ಆತಂಕಕ್ಕೆ ಕಾರಣವಾಗಿದೆ.
ಶುದ್ದೀಕರಿಸದ ನೀರನ್ನೇ ಕುಡಿಯುವ ಅನಿವಾರ್ಯತೆ ಎದುರಾಗಿರುವುದು ನಿವಾಸಿಗಳಲ್ಲಿ ಕಳವಳ ಮೂಡಿಸಿದೆ. ಅದರಲ್ಲೂ ಮಕ್ಕಳು ಹಾಗೂ ವಯೋವೃದ್ಧರ ಆರೋಗ್ಯದ ಕುರಿತು ಕುಟುಂಬಗಳು ಆತಂಕಗೊಂಡಿವೆ. ನೀರಿನ ಗುಣಮಟ್ಟ ಪರಿಶೀಲಿಸಿ, ಕೆರೆಗೆ ಕಾಯಕಲ್ಪ ನೀಡಿ, NE’ ರಕ್ಷಣಾಗೋಡೆ ನಿರ್ಮಿಸುವುದರ ಜತೆಗೆ ತ್ಯವಿದ್ದಲ್ಲಿ ಶುದ್ದೀಕರಣ ಘಟಕ ಅಳವಡಿಸಬೇಕು ಎಂಬುದು ನಿವಾಸಿಗಳ ಆಗ್ರಹವಾಗಿದೆ.
ಇಲ್ಲಿ ಒಂದರಿಂದ ಐದನೇ ತರಗತಿಯವರೆಗೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಾರ್ಯ ನಿರ್ವಹಿಸುತ್ತಿದೆ. ಆದರೆ ಮಳೆ ಸುರಿದ ಕೂಡಲೇ ಕ್ಯಾಂಪ್‌ಗೆ ಸಂಪರ್ಕ ಕಲ್ಪಿಸುವ ರಸ್ತೆ ಕೆಸರುಮಯವಾಗಿ ಸಂಚಾರಕ್ಕೆ ಅಡ್ಡಿಯಾಗುತ್ತದೆ. ಇದರಿಂದ ಶಾಲೆಗೆ ತೆರಳುವ ಮಕ್ಕಳು, ಶಿಕ್ಷಕರು ಸೇರಿದಂತೆ ಸ್ಥಳೀಯರು ನಿತ್ಯವೂ ಸಂಕಷ್ಟ ಎದುರಿಸುವಂತಾಗಿದೆ.
ಕುಡಿಯುವ ನೀರಿನ ಸಮಸ್ಯೆ ಹಾಗೂ ರಸ್ತೆ ದುರಸ್ತಿಗೆ ಸಂಬಂಧಿಸಿದಂತೆ ಗ್ರಾಪಂ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ನಿವಾಸಿ ಸಿದ್ದಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜನರ ಮೂಲಭೂತ ಅವಶ್ಯಕತೆಗಳಾದ ಶುದ್ಧ ಕುಡಿಯುವ ನೀರು ಹಾಗೂ ಸುಗಮ ಸಂಚಾರಕ್ಕೆ ಅಗತ್ಯವಾದ ರಸ್ತೆ ಕಲ್ಪಿಸುವಲ್ಲಿ ಆಡಳಿತದ ವಿಳಂಬ ( ಜನರ ಆಕ್ರೋಶಕ್ಕೆ ಕಾರಣವಾಗಿದೆ. ಯಾವುದೇ ಬಹುತ ಸಂಭವಿಸುವ ಮುನ್ನವೇ ಅಧಿಕಾರಿಗಳು ಎಚ್ಚೆತ್ತುಕೊಂಡು ನೀರಿನ ಗುಣಮಟ್ಟ ಪರಿಶೀಲಿಸಿ, ಕೆರೆಗೆ ಕಾಯಕಲ್ಪ ನೀಡುವುದರೊಂದಿಗೆ ರಕ್ಷಣಾಗೋಡೆ ನಿರ್ಮಿಸಬೇಕು.
ಜನರ ಮೂಲಭೂತ ಅವಶ್ಯಕತೆಗಳಾದ ಶುದ್ಧ ಕುಡಿಯುವ ನೀರು ಹಾಗೂ ಸುಗಮ ಸಂಚಾರಕ್ಕೆ ಅಗತ್ಯವಾದ ರಸ್ತೆ ಕಲ್ಪಿಸುವಲ್ಲಿ ಆಡಳಿತದ ವಿಳಂಬ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಯಾವುದೇ ಅನಾಹುತ ಸಂಭವಿಸುವ ಮುನ್ನವೇ ಅಧಿಕಾರಿಗಳು ಎಚ್ಚೆತ್ತುಕೊಂಡು ನೀರಿನ ಗುಣಮಟ್ಟ ಪರಿಶೀಲಿಸಿ, ಕೆರೆಗೆ ಕಾಯಕಲ್ಪ ನೀಡುವುದರೊಂದಿಗೆ ರಕ್ಷಣಾಗೋಡೆ ನಿರ್ಮಿಸಬೇಕು. ಜತೆಗೆ ರಸ್ತೆ ದುರಸ್ತಿಗೂ ತುರ್ತು ಕ್ರಮ ಕೈಗೊಳ್ಳಬೇಕಿದೆ.
” ವರಮಯ್ಯ ಕಾಲನಿಗೆ ಶುದ್ದೀಕರಣ ಘಟಕ ಅಳವಡಿಸುವ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು “.
- ಶಶಿಕಾಂತ್ ಶಿವಪುರೆ ಉಪಕಾರ್ಯದರ್ಶಿ, ಬಳ್ಳಾರಿ ಜಿ. ಪಂ.
ವರದಿ : ಮಸೀದಿ,ಅಬ್ದುಲ್ ಗೌಸ್, ಸಿರುಗುಪ್ಪ




















