ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹಣದ ಗಲಾಟೆ: ಕುರುಗೋಡು ನರ್ಸರಿ ಮಾಲೀಕನ ಭೀಕರ ಕೊಲೆ ಪ್ರಕರಣದ ಇಬ್ಬರು ಆರೋಪಿಗಳ ಬಂಧನ

ಬಳ್ಳಾರಿ / ಕುರುಗೋಡು: ಸೆಪ್ಟೆಂಬರ್ 6 ರಂದು ಬಳ್ಳಾರಿ ಜಿಲ್ಲೆಯ ಕುರುಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ಯಲ್ಲಾಪುರ ಕ್ರಾಸ್ ಬಳಿ ನಡೆದಿದ್ದ ನರ್ಸರಿ ಮಾಲೀಕ ಎನ್. ಉಮಾಶಂಕರ್ (38) ಅವರ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಕುರುಗೋಡು ಪೊಲೀಸರು ಯಶಸ್ವಿಯಾಗಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮುಖ್ಯ ಆರೋಪಿಗಾಗಿ ತೀವ್ರ ಹುಡುಕಾಟ ಮುಂದುವರಿದಿದೆ.

ಬಂಧಿತರು ಯಾರು ?

ಕೊಲೆ ಕೃತ್ಯಕ್ಕೆ ಸಹಕರಿಸಿದ ಕುರುಗೋಡಿನ ಯಲ್ಲಾಪುರ ಕ್ರಾಸ್ ನಿವಾಸಿಗಳಾದ ಅಂಡಿ ಜೋಗಿ ಹನುಮಂತಪ್ಪ (30) ಹಾಗೂ ಬಣಗಾರ ಮಂಜುನಾಥ (26) ಬಂಧಿತ ಆರೋಪಿಗಳಾಗಿದ್ದು, ಇವರನ್ನು ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆಂಧ್ರಪ್ರದೇಶದ ಕಡಪ ಜಿಲ್ಲೆಯ ಮುಖ್ಯ ಆರೋಪಿ ಪೋಲೇಪಲ್ಲಿ ಅರುಣ್ ಕುಮಾರ್ (25) ಸದ್ಯ ತಲೆಮರೆಸಿಕೊಂಡಿದ್ದಾನೆ.
ಬಂಧಿತರಿಂದ ಪೊಲೀಸರು ಕೊಲೆಗೆ ಬಳಸಿದ 1 ಮಾರಕಾಸ್ತ್ರ, 4 ಮೋಟಾರ್ ಸೈಕಲ್‌ಗಳು, 1 ಕಾರು ಹಾಗೂ 5 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಉಮಾಶಂಕರ್ ಹಾಗೂ ಮುಖ್ಯ ಆರೋಪಿ ಅರುಣ್ ಕುಮಾರ್ ನಡುವೆ ಕೋಕೋಪಿಟ್ (ನರ್ಸರಿ ಗೊಬ್ಬರ) ವ್ಯವಹಾರ ನಡೆದಿತ್ತು. ಉಮಾಶಂಕರ್‌ನಿಂದ 60 ಸಾವಿರ ರೂ. ಮೌಲ್ಯದ ಗೊಬ್ಬರ ಖರೀದಿಸಿದ್ದ ಅರುಣ್ ಕುಮಾರ್, 50 ಸಾವಿರ ರೂ. ನೀಡಿ ಇನ್ನುಳಿದ 10 ಸಾವಿರ ರೂ. ಬಾಕಿ ಉಳಿಸಿಕೊಂಡಿದ್ದ. ಈ ಹಣವನ್ನು ಉಮಾಶಂಕರ್ ಪದೇ ಪದೇ ವಾಪಸ್ ಕೇಳುತ್ತಿದ್ದರು. ಇದೇ ದ್ವೇಷವನ್ನು ಮನಸ್ಸಿನಲ್ಲಿಟ್ಟುಕೊಂಡ ಅರುಣ್ ಕುಮಾರ್, ಉಳಿದ ಆರೋಪಿಗಳೊಂದಿಗೆ ಸಂಚು ರೂಪಿಸಿ ಉಮಾಶಂಕರ್‌ನನ್ನು ಸ್ಥಳಕ್ಕೆ ಕರೆಯಿಸಿಕೊಂಡು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (SP) ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!