ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಳ್ಳಾರಿ ಚಲೋ ಪಾದಯಾತ್ರೆ : ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್

ಬಳ್ಳಾರಿ : ರಾಜ್ಯ ಸರ್ಕಾರದ ವಿರುದ್ಧ ಹಮ್ಮಿಕೊಳ್ಳಲಾಗಿದ್ದ ‘ಬಳ್ಳಾರಿ ಚಲೋ’ ಪಾದಯಾತ್ರೆ ವೇಳೆ ನಿಯಮ ಮೀರಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಮಾಜಿ ಶಾಸಕರಾದ ಜಿ. ಸೋಮಶೇಖರ ರೆಡ್ಡಿ, ಎಂ.ಪಿ. ರೇಣುಕಾಚಾರ್ಯ ಸೇರಿದಂತೆ 22 ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಬ್ಯಾನರ್ ತೆರವುಗೊಳಿಸಿದ್ದನ್ನು ಖಂಡಿಸಿ ಸೆಪ್ಟೆಂಬರ್ 9ರಂದು ಬಳ್ಳಾರಿ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ರಸ್ತೆ ಸಂಚಾರ ತಡೆದು ಸಾರ್ವಜನಿಕರಿಗೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಬಳ್ಳಾರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಬಿಜೆಪಿ ಬಾವುಟ ಮತ್ತು ಬ್ಯಾನರ್‌ಗಳ ಅಳವಡಿಕೆ
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕಮ್ಮರಚೇಡು ಗ್ರಾಮದಿಂದ ಬಳ್ಳಾರಿ ನಗರದವರೆಗೆ ಹಮ್ಮಿಕೊಂಡಿದ್ದ ‘ಬಳ್ಳಾರಿ ಚಲೋ’ ಪಾದಯಾತ್ರೆಯು ಸೆಪ್ಟೆಂಬರ್ 9 ರಂದು ಬಳ್ಳಾರಿ ನಗರವನ್ನು ತಲುಪಿ ಸಮಾರೋಪ ಗೊಂಡಿತ್ತು. ಪಾದಯಾತ್ರೆಯ ಮಾರ್ಗದುದ್ದಕ್ಕೂ ಪೂರ್ವಾನುಮತಿಯಿಲ್ಲದೆ ಬಿಜೆಪಿ ಬಾವುಟ ಮತ್ತು ಬ್ಯಾನರ್‌ಗಳನ್ನು ಅಳವಡಿಸಲಾಗಿತ್ತು. ಬಿಐಟಿಎಂ ಕಾಲೇಜುವರೆಗೆ ಮಾತ್ರ ಬಾವುಟ ಅಳವಡಿಕೆಗೆ ಅವಕಾಶ ನೀಡಿದ್ದ ಜಿಲ್ಲಾಧಿಕಾರಿಗಳು, ಪಾಲಿಕೆ ವ್ಯಾಪ್ತಿಯಲ್ಲಿ ಬ್ಯಾನರ್ ಅಳವಡಿಸದಂತೆ ನಿಷೇಧಾಜ್ಞೆ ಹೊರಡಿಸಿದ್ದರು.

ಸಮಾರೋಪ ಕಾರ್ಯಕ್ರಮದ ಒಂದು ದಿನ ಮುಂಚಿತವಾಗಿಯೇ ನಿಯಮ ಮೀರಿ ಅಳವಡಿಸಲಾಗಿದ್ದ ಬ್ಯಾನರ್ ಮತ್ತು ಬಾವುಟಗಳನ್ನು ಬಳ್ಳಾರಿ ಮಹಾನಗರ ಪಾಲಿಕೆ ಸಿಬ್ಬಂದಿ ತೆರವುಗೊಳಿಸಿದ್ದರು. ಇದು ಬಿಜೆಪಿ ನಾಯಕರ ಮತ್ತು ಆಡಳಿತ ಯಂತ್ರದ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿತ್ತು.

ಹೆದ್ದಾರಿ ತಡೆದು ಪ್ರತಿಭಟನೆ :

ಪಾಲಿಕೆ ಸಿಬ್ಬಂದಿ ಬ್ಯಾನರ್ ತೆರವುಗೊಳಿಸಿದ್ದನ್ನು ಖಂಡಿಸಿ ಆಕ್ರೋಶಗೊಂಡ ಬಿಜೆಪಿ ನಾಯಕರು, ಸೆಪ್ಟೆಂಬರ್ 9 ರಂದು ಬಳ್ಳಾರಿ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿ 67 ರಲ್ಲಿ ರಸ್ತೆ ಸಂಚಾರ ತಡೆದು ಧರಣಿ ನಡೆಸಿದ್ದರು. ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸಿ, ಪೂರ್ವಾನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಇದೀಗ ಪೊಲೀಸರು 22 ನಾಯಕರ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!