ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

‘ಭಾರತರತ್ನ’ ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜನ್ಮದಿನಾಚರಣೆ

ಬೆಂಗಳೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ (ರಿ.) ವತಿಯಿಂದ ಆಧುನಿಕ ಭಾರತದ ನಿರ್ಮಾತೃ ಹಾಗೂ ಮಹಾನ್ ಅಭಿಯಂತರ ‘ಭಾರತರತ್ನ’ ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಕಾರ್ಯಕ್ರಮದ ವಿವರಗಳು:

​ದಿನಾಂಕ: 15-09-2026

​ಸಮಯ: ಸಂಜೆ 6:00 ಗಂಟೆಗೆ

​ಸ್ಥಳ: ಗಾಯತ್ರಿ ಭವನ, ನಂ. 3070, 9ನೇ ಮೈನ್, ಬನಶಂಕರಿ 2ನೇ ಹಂತ, ಬೆಂಗಳೂರು – 560070

​ಮುಖ್ಯ ಅತಿಥಿಗಳು: ಶ್ರೀಯುತ ವೈ.ವಿ. ಗುಂಡೂರಾವ್ (ನಿವೃತ್ತ ಬ್ಯಾಂಕ್ ಅಧಿಕಾರಿಗಳು, ಆಧ್ಯಾತ್ಮಿಕ ಚಿಂತಕರು, ಹಾಸ್ಯ ಸಾಹಿತಿಗಳು, ಶ್ರೇಷ್ಠ ವಾಗ್ಮಿಗಳು ಹಾಗೂ ರಂಗಭೂಮಿ ಕಲಾವಿದರು)

​ಅಧ್ಯಕ್ಷತೆ: ಶ್ರೀ ಎಸ್. ರಘುನಾಥ್,
​ಅಧ್ಯಕ್ಷ,ಅಖಿಲ ಕರ್ನಾಟಕ ಬ್ರಾಹ್ಮಣ
​ಮಹಾಸಭಾ

​ಆಯೋಜನೆ ಹಾಗೂ ಸ್ವಾಗತ: ಮಹಾಸಭಾದ ಪದಾಧಿಕಾರಿಗಳು, ಜಿಲ್ಲಾ ಪ್ರತಿನಿಧಿಗಳು ಹಾಗೂ ಕಾರ್ಯಕಾರಿಣಿ ಸಮಿತಿ ಸದಸ್ಯರು
“ಕಾಯಕವೇ ಪೂಜೆ, ಸಫಲತೆಯು ಶ್ರಮದಲ್ಲಿದೆ” ಎಂಬ ಸರ್ ಎಂ. ವಿಶ್ವೇಶ್ವರಯ್ಯನವರ ಆದರ್ಶ ಸಂದೇಶದೊಂದಿಗೆ ಈ ಸಮಾರಂಭವನ್ನು ಆಯೋಜಿಸಲಾಗಿದೆ. ದೇಶ ಕಂಡ ಅಪ್ರತಿಮ ತಂತ್ರಜ್ಞ ಹಾಗೂ ನವ ಭಾರತದ ಶಿಲ್ಪಿಯ ಕೊಡುಗೆಗಳನ್ನು ಸ್ಮರಿಸುವ ಉದ್ದೇಶದಿಂದ ನಡೆಯುತ್ತಿರುವ ಈ ಸಮಾರಂಭಕ್ಕೆ ಸಾರ್ವಜನಿಕರು ಮತ್ತು ಸಮುದಾಯದ ಬಾಂಧವರಿಗೆ ಮುಕ್ತ ಆಹ್ವಾನ ನೀಡಲಾಗಿದೆ ಹಾಗೂ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವ ಶ್ರೀಯುತ ವೈ.ವಿ. ಗುಂಡೂರಾವ್ ಅವರು ವಿಶ್ವೇಶ್ವರಯ್ಯನವರ ಜೀವನ-ಸಾಧನೆಗಳ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಮಹಾಸಭಾದ ಅಧ್ಯಕ್ಷ ಶ್ರೀ ಎಸ್. ರಘುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ: ಕೊಡಕ್ಕಲ್ ಶಿವಪ್ರಸಾದ್. ಶಿವಮೊಗ್ಗ/ ಬೆಂಗಳೂರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!