ಅಧಿಕಾರಿಗಳು ಸಮಸ್ಯೆ ಪರಿಹರಿಸುವಂತೆ ರೈತರ ಮನವಿ
ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ನಿಟ್ಟೂರ (ಬಿ.) ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವುದರಿಂದ ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಮಳೆಯ ಅಭಾವದಿಂದ ಈಗಾಗಲೇ ಬೆಳೆಗಳಿಗೆ ನೀರಿನ ಕೊರತೆ ಎದುರಾಗಿದ್ದು, ಕೃಷಿ ಪಂಪ್ಸೆಟ್ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಇಲ್ಲದಿರುವುದು ರೈತರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. ಬೆಳೆಗಳಿಗೆ ಸಮಯಕ್ಕೆ ಸರಿಯಾಗಿ ನೀರುಣಿಸಲು ಸಾಧ್ಯವಾಗದೆ ರೈತರು ಪರದಾಡುವಂತಾಗಿದೆ.
ಈ ಕುರಿತು ಸಂಬಂಧಪಟ್ಟ ವಿದ್ಯುತ್ ಇಲಾಖೆಯ ಅಧಿಕಾರಿಗಳು ತಕ್ಷಣ ಗಮನಹರಿಸಿ, ನಿಟ್ಟೂರ (ಬಿ) ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಸಮರ್ಪಕ ಹಾಗೂ ನಿರಂತರ ವಿದ್ಯುತ್ ಪೂರೈಕೆ ಮಾಡುವಂತೆ ಗ್ರಾಮಸ್ಥರು ಮತ್ತು ರೈತರಾದ ಶಾಲಿವನ ಪಾಟೀಲ, ವಸಂತ ಮನಕಾರಿ, ಕಾಡಾಜಿರಾವ ವೈಜೆ, ಮಲ್ಲಾರಿ ಕಡಾಳೆ ಚಂದ್ರಕಾಂತ ಪಾಟೀಲ,ಅಂಕೋಶ ಕಾಮಯನೋರ,ಉಮೇಶ ಜಿತಪ್ಪ, ವಿಶ್ವನಾಥ ಖಜಾಪುರೆ, ಸಿದ್ದಪ್ಪ ಚಿಮಕೋಡೆ,ಬಸವರಾಜ ಜೋನೇಕೆರೆ ಸೇರಿದಂತೆ ಅನೇಕ ರೈತರು ಮನವಿ ಮಾಡಿದ್ದಾರೆ.
ವರದಿಗಾರರು ಗಜಾನoದ ಪಾಟೀಲ




















