
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮೆಣಸಗೇರಿ ಗ್ರಾಮದ ಮಹರ್ಷಿ ವಾಲ್ಮೀಕಿ ಗ್ರಾಮೀಣ ವಿದ್ಯಾವರ್ಧಕ ಸಂಸ್ಥೆಯ ಮಾನಸ ಗಂಗೋತ್ರಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಯುತ ರಾಮಕೃಷ್ಣ ಮಲ್ಲಪ್ಪ ಕಾಲವಾಡ ಕೇಕ್ ಕತ್ತರಿಸುವ ಮೂಲಕ ಉದ್ಘಾಟಿಸಿದರು.
ಈ ಕಾರ್ಯಕ್ರಮದಲ್ಲಿ ಸುತ್ತಲಿನ ಗ್ರಾಮಗಳಾದಂತಹ ಮೆಣಸಗೇರಿ, ಕಡೆಕೊಪ್ಪ ಕ್ಯಾದಿಗುಪ್ಪ ಮೆಣಸಗೇರಿ ತಾಂಡಾದ ಎಲ್ಲಾ ಪಾಲಕರು ಈ ಕಾರ್ಯಕ್ರಮಕ್ಕೆ ಬಂದು ಈ ಕಾರ್ಯಕ್ರಮದ ಶೋಭೆಯನ್ನು ಹೆಚ್ಚಿಸಿದರು.
ಈ ಕಾರ್ಯಕ್ರಮದಲ್ಲಿ ಶಿಕ್ಷಣ ಸಂಸ್ಥೆಯ ಶಿಕ್ಷಕಿಯರಾದಂತಹ ಸವಿತಾ ತಳವಾರ್, ಬಸವರಾಜ್ ಬೂದಿಹಾಳ, ಅನಸೂಯ ಕರಡಿ ಹಾಗೂ ಮಾರ್ಕಂಡೇಶ್ವರ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ರೇಣುಕಾ ಮಾರುತೆಪ್ಪ ಕಾಚಾಪೂರ ಕೂಡ ಭಾಗವಹಿಸಿದ್ದರು.
ಈ ಕಾರ್ಯಕ್ರಮದ ಅಂಗವಾಗಿ ಬಿಸ್ಕೆಟ್ ತಿನ್ನುವ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸ್ಪರ್ಧೆಯಲ್ಲಿ ಪಾಲಕರು ಅತಿ ಉತ್ಸಾಹದಿಂದ ಭಾಗವಹಿಸಿ ಸ್ಪರ್ಧೆಯನ್ನು ಯಶಸ್ವಿಗೊಳಿಸಿದರು.
- ಕರುನಾಡ ಕಂದ ಸುದ್ದಿ




















