ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಸ್ತೂರಿ ರಂಗನ್ ವರದಿ ವಿರುಧ್ಧ ಕರಡಿಗೋಡು ಗ್ರಾಮಸ್ಥರ ಪ್ರತಿಭಟನೆ

ವಿರಾಜಪೇಟೆ: ಕಸ್ತೂರಿ ರಂಗನ್ ವರದಿಯ 7ನೇ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸುವ ವಿಚಾರವಾಗಿ ರೈತ ಸಂಘದ ಕೋರಿಕೆ ಮೇರೆಗೆ ಸಿದ್ದಾಪುರದ ಕರಡಿಗೋಡು ಪ್ರಾಥಮಿಕ ಶಾಲೆಯಲ್ಲಿ ವಿಶೇಷ ಗ್ರಾಮಸಭೆ ನಡೆಯಿತು ಸಭಾಂಗಣದಲ್ಲಿ ಸ್ಥಳಾವಕಾಶದ ಕೊರತೆಯಿಂದ ಶಾಲಾ ಮೈದಾನದಲ್ಲಿ ಸಭೆ ಆಯೋಜಿಸಲಾಯಿತು.

ರೈತ ಸಂಘದ ಅಮ್ಮತ್ತಿ ಹೋಬಳಿ ಅಧ್ಯಕ್ಷ ಚೇನಂಡ ಅಜಿತ್ ಪೂಣಚ್ಚ ಮಾತನಾಡಿ, ವರದಿಯಲ್ಲಿ ಕರಡಿಗೋಡು ಗ್ರಾಮವನ್ನು ಹಸಿರು ಪಟ್ಟಿಯಲ್ಲಿ ಗುರುತಿಸಿರುವುದು ರೈತರ ಸರ್ವತೋಮುಖ ಅಭಿವೃದ್ಧಿಗೆ ಮಾರಕವಾಗಿದೆ ಎಂದು ಹೇಳಿದರು ಉಪಗ್ರಹ ಆಧಾರಿತ ಸಮೀಕ್ಷೆ ಕೈಬಿಟ್ಟು, ಅರಣ್ಯದ ನೈಜ ಗಡಿಯನ್ನು ಸರ್ವೆ ನಡೆಸಿ ವರದಿಯನ್ನು ಅರಣ್ಯ ಪ್ರದೇಶಕ್ಕೆ ಮಾತ್ರ ಸೀಮಿತಗೊಳಿಸಬೇಕು ಎಂದು ಒತ್ತಾಯಿಸಿದರು.

ತಲತಲಾಂತರಗಳಿಂದ ಕೃಷಿಭೂಮಿ ಹೊಂದಿರುವ ರೈತರು ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆ ನಡೆಸಲು ಅರಣ್ಯ ಇಲಾಖೆಯ ಅನುಮತಿಗಾಗಿ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು ವರದಿ ಜಾರಿಯಾದಲ್ಲಿ ವನ್ಯಮೃಗಗಳಿಂದ ಬೆಳೆ ಹಾನಿಯಾದಾಗ ಪರಿಹಾರ ದೊರೆಯುವ ಬಗ್ಗೆಯೂ ಸ್ಪಷ್ಟತೆ ಅಗತ್ಯ ಎಂದರು.

ಕಾರ್ಮಿಕ ಮುಖಂಡ ಎಚ್.ಬಿ. ರಮೇಶ್ ಮಾತನಾಡಿ, ವರದಿಯಲ್ಲಿನ ವಲಯ ವಿಂಗಡಣೆಯಿಂದ ಆಸ್ಪತ್ರೆಗಳು ಸೇರಿದಂತೆ ಅಗತ್ಯ ಸೇವೆಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.

ಸಭೆಯ ನೋಡಲ್ ಅಧಿಕಾರಿಯಾಗಿ ಪೊನ್ನಂಪೇಟೆ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ದೀನ ಎಂ.ಕೆ. ಭಾಗವಹಿಸಿದ್ದರು.
ಅಧ್ಯಕ್ಷತೆ ವಹಿಸಿದ್ದ ಭೂದಾಖಲೆಗಳ ಇಲಾಖೆಯ ಸಹಾಯಕ ನಿರ್ದೇಶಕ ಪಿ.ಸಿ. ಜನಿಶ್ ಕುಮಾರ್ ಮಾತನಾಡಿ, ಗ್ರಾಮಸ್ಥರು ಕೈಗೊಂಡ ಒಕ್ಕೊರಲಿನ ನಿರ್ಣಯವನ್ನು ಸಂಬಂಧಪಟ್ಟ ಮೇಲಾಧಿಕಾರಿಗಳಿಗೆ ಕಳುಹಿಸಲಾಗುವುದು ಎಂದು ತಿಳಿಸಿದರು.

ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್. ವೆಂಕಟೇಶ್, ಭಾರತೀಯ ಮಜ್ದೂರ್ ಸಂಘದ ಅಧ್ಯಕ್ಷ ಸೂದನ ಸತೀಶ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿ.ಕೆ. ಬಶೀರ್, ಕಾಂಗ್ರೆಸ್ ವಲಯ ಅಧ್ಯಕ್ಷ ಪ್ರತೀಶ್, ಶಾಲಾ ಮುಖ್ಯ ಶಿಕ್ಷಕಿ ತ್ರಿವೇಣಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!