ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಿಂಕೋನದಲ್ಲಿ ಗೃಹಲಕ್ಷ್ಮಿ ಮರುಪರಿಶೀಲನೆ ಮಾಹಿತಿ ಕಾರ್ಯಾಗಾರ ಹಾಗೂ ಸೀಮಂತ ಕಾರ್ಯಕ್ರಮ

ಮಡಿಕೇರಿ : ತಾಲೂಕಿನ ಸಿಂಕೋನ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನೆ ಕುರಿತ ಮಾಹಿತಿ ಕಾರ್ಯಾಗಾರ ಹಾಗೂ 9ನೇ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಅಂಗವಾಗಿ ಸೀಮಂತ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪ್ರಸನ್ನ ಕುಮಾರ್ ಅವರು, ಗರ್ಭಾವಸ್ಥೆಯಿಂದ ಮಗುವಿನ ಎರಡು ವರ್ಷದವರೆಗಿನ ಅವಧಿಯಲ್ಲಿ ತಾಯಿ-ಮಗುವಿಗೆ ಪೌಷ್ಟಿಕ ಆಹಾರ ಅತ್ಯಗತ್ಯ. ಗರ್ಭಿಣಿಯರು ಮತ್ತು ಬಾಣಂತಿಯರು ಸಮತೋಲನ ಆಹಾರದ ಜೊತೆಗೆ ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಗೃಹಲಕ್ಷ್ಮಿ ಮರುಪರಿಶೀಲನೆ ಕುರಿತು ಮಾಹಿತಿ ನೀಡಿದ ಅವರು, SIR ಪ್ರಕ್ರಿಯೆ ನಂತರ ಫಲಾನುಭವಿಗಳ ಮನೆ ಭೇಟಿ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಫಲಾನುಭವಿಗಳು ತಮ್ಮ ಹೆಸರಿನ ಮೊಬೈಲ್ ಸಂಖ್ಯೆಯನ್ನು ಆಧಾರ್‌ಗೆ ಜೋಡಣೆ ಮಾಡಿಕೊಳ್ಳಬೇಕು. ಸಾಲವಿಲ್ಲದ ವೈಯಕ್ತಿಕ ಬ್ಯಾಂಕ್ ಖಾತೆ ಸಿದ್ಧವಾಗಿಟ್ಟುಕೊಳ್ಳಬೇಕು. ಜಂಟಿ ಖಾತೆ ಅಥವಾ ಸಂಘದ ಖಾತೆ ಇದ್ದರೆ ಹೊಸ ವೈಯಕ್ತಿಕ ಅಥವಾ IPPB ಖಾತೆ ತೆರೆಯಬೇಕು. ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ ಹಾಗೂ GI ನಂಬರ್ ಸುರಕ್ಷಿತವಾಗಿಡಬೇಕು ಎಂದರು.

ಆಧಾರ್ ಆಧಾರಿತ ಮುಖದ ದೃಢೀಕರಣ ಸಂದರ್ಭದಲ್ಲಿ ತಾಂತ್ರಿಕ ಸಮಸ್ಯೆ ಎದುರಾದರೆ ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ನೆರವು ಪಡೆಯುವಂತೆ ಸೂಚಿಸಿದರು.

ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಅವರು ಸೀಮಂತ ಕಾರ್ಯಕ್ರಮ ನೆರವೇರಿಸಿ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ, ಭಾಗ್ಯಲಕ್ಷ್ಮಿ ಯೋಜನೆ, ತಾಯಿ-ಮಗುವಿನ ಆರೈಕೆ, ಲಸಿಕೆಗಳ ಮಹತ್ವ ಹಾಗೂ ಮೂಢನಂಬಿಕೆಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿದರು.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!