ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಂತಿನಿಕೇತನ ಯುವಕ ಸಂಘದಿಂದ ಗಣೇಶೋತ್ಸವದ ಪ್ರಯುಕ್ತ ಯಶಸ್ವಿ ರಕ್ತದಾನ ಶಿಬಿರ.

ಮಡಿಕೇರಿ : ಶಾಂತಿನಿಕೇತನ ಯುವಕ ಸಂಘದ ವತಿಯಿಂದ 48ನೇ ವರ್ಷದ ಅದ್ದೂರಿ ಗಣೇಶೋತ್ಸವದ ಅಂಗವಾಗಿ ಬೃಹತ್ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು.

ಶಿಬಿರದಲ್ಲಿ ಸಂಘದ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ರಕ್ತದಾನ ಮಾಡುವ ಮೂಲಕ ಮಾನವೀಯ ಸೇವೆಗೆ ಕೈಜೋಡಿಸಿದರು.
ಒಟ್ಟು 51 ಮಂದಿ ರಕ್ತದಾನ ಮಾಡಿದರು.
ರಕ್ತದಾನ ಮಾಡಿದ ಎಲ್ಲಾ ರಕ್ತದಾನಿಗಳಿಗೆ, ಶಿಬಿರದ ಯಶಸ್ಸಿಗೆ ಸಹಕರಿಸಿದ ಸಾರ್ವಜನಿಕರಿಗೆ ಹಾಗೂ ಕಾರ್ಯಕ್ರಮಕ್ಕೆ ವಿವಿಧ ರೀತಿಯಲ್ಲಿ ಸಹಕಾರ ನೀಡಿದ ಎಲ್ಲರಿಗೂ ಶಾಂತಿನಿಕೇತನ ಯುವಕ ಸಂಘದ ಅಧ್ಯಕ್ಷ ಕೆ.ಹೆಚ್.ಚೇತನ್ ಹಾಗೂ ಪದಾಧಿಕಾರಿಗಳು ಧನ್ಯವಾದಗಳನ್ನು ಸಲ್ಲಿಸಿದರು.
“ರಕ್ತದಾನವು ಮತ್ತೊಂದು ಜೀವವನ್ನು ಉಳಿಸುವ ಮಹತ್ವದ ಸೇವೆಯಾಗಿದೆ. ಸಾರ್ವಜನಿಕರಿಂದ ದೊರೆತ ಸಹಕಾರ ಮತ್ತು ಸ್ಪಂದನೆ ಇನ್ನಷ್ಟು ಸೇವಾ ಕಾರ್ಯಗಳನ್ನು ಕೈಗೊಳ್ಳಲು ಪ್ರೇರಣೆಯಾಗಿದೆ,” ಎಂದು ಕೆ.ಹೆಚ್.ಚೇತನ್ ತಿಳಿಸಿದರು.

ಗಣೇಶೋತ್ಸವದ ಪ್ರಯುಕ್ತ ಸೆ.23ರಂದು ಸಂಜೆ 7 ಗಂಟೆಗೆ ಸಾಮೂಹಿಕ ರಂಗಪೂಜೆ ಏರ್ಪಡಿಸಲಾಗಿದೆ
ಸೆ.26ರಂದು ಮಹಾಪೂಜೆಯ ನಂತರ ಶ್ರೀ ಮಹಾ ಗಣಪತಿ ಮೂರ್ತಿಯನ್ನು ಕಥಾ ಸಾರಾಂಶವುಳ್ಳ ಅಲಂಕೃತ ಮಂಟಪದಲ್ಲಿ ಅದ್ದೂರಿ ಶೋಭಾಯಾತ್ರೆಯ ಮೂಲಕ ಮಡಿಕೇರಿಯ ಪ್ರಮುಖ ಬೀದಿಗಳಲ್ಲಿ ಕೊಂಡೊಯ್ದು ಗೌರಿ ಕೆರೆಯಲ್ಲಿ ವಿಸರ್ಜಿಸಲಾಗುವುದು ಎಂದು ಮಾಹಿತಿ ನೀಡಿದರು.

ವರದಿ : ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!