ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

₹2 ಕೋಟಿ ವೆಚ್ಚದ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕಿಡಿಗೇಡಿಗಳ ಅಟ್ಟಹಾಸಶಾಲೆಯ ಕೊಠಡಿಗಳ ಕಿಟಕಿ ಗ್ಲಾಸ್‌ಗಳು ಪುಡಿಪುಡಿ.

ರಾತ್ರಿ ಕಿಟಕಿಗಳ ಕ್ಲಾಸ್ ಒಡೆದರು ಬೆಳಗ್ಗೆ ಅದೇ ಶಾಲೆಯಲ್ಲಿ ಮುಖ್ಯ ಶಿಕ್ಷಕರ ಕೊಠಡಿಯಲ್ಲಿ ವಾಮಾಚಾರ ಮಾಡಿದರು.

ಸರ್ಕಾರಿ ಶಾಲೆ ಅಂದ್ರೆ ಮಕ್ಕಳ ಭವಿಷ್ಯ ರೂಪಿಸುವ ಜಾಗ, ಆದರೆ ಇದೇ ಶಾಲೆಯಲ್ಲಿ ಇದೀಗ ಕಿಡಿಗೇಡಿಗಳ ಅಟ್ಟಹಾಸಕ್ಕೆ ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಬೆಚ್ಚಿ ಬಿದ್ದಿದ್ದಾರೆ.
ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ರಾತ್ರಿ ವೇಳೆ ಕಿಡಿಗೇಡಿಗಳು ಪುಂಡಾಟ ಮೆರೆದಿರುವ ಆರೋಪ ಕೇಳಿ ಬಂದಿದೆ. ಸುಮಾರು ₹2 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ಸರ್ಕಾರಿ ಶಾಲೆಯ ಕಟ್ಟಡದ ಹಲವು ಕೊಠಡಿಗಳ ಕಿಟಕಿ ಗಾಜುಗಳನ್ನು ಕಲ್ಲಿನಿಂದ ಹೊಡೆದು ಪುಡಿಪುಡಿ ಮಾಡಲಾಗಿದೆ.
ಅಷ್ಟೇ ಅಲ್ಲ… ಶಾಲೆಯ ಭದ್ರತೆಗಾಗಿ ಅಳವಡಿಸಲಾಗಿದ್ದ ಸಿ.ಸಿ ಕ್ಯಾಮೆರಾಗಳಿಗೂ ಹಾನಿ ಮಾಡಲಾಗಿದೆ ಎನ್ನಲಾಗಿದ್ದು, ಶಾಲಾ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಕೊರಟಗೆರೆ ತಾಲೂಕಿನ ಹೊಳವನಹಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಹೊಸದಾಗಿ ನಿರ್ಮಾಣಗೊಂಡಿರುವ ಶಾಲಾ ಕಟ್ಟಡದ ಹಲವು ಕೊಠಡಿಗಳ ಕಿಟಕಿ ಗಾಜುಗಳು ಒಡೆದುಹೋಗಿವೆ. ಶಾಲೆಯ ಆವರಣದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾಗಳಿಗೂ ಹಾನಿಯಾಗಿರುವುದು ಕಂಡುಬಂದಿದೆ.
ಮಕ್ಕಳು ವಿದ್ಯಾಭ್ಯಾಸ ಮಾಡಬೇಕಾದ ಶಾಲೆಯಲ್ಲೇ ಇಂತಹ ಘಟನೆ ನಡೆದಿರುವುದು ಪೋಷಕರಲ್ಲಿ ಆತಂಕ ಮೂಡಿಸಿದೆ. ಶಾಲಾ ಆಸ್ತಿಪಾಸ್ತಿಗೆ ಹಾನಿ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಇನ್ನು ಶಾಲಾ ಆವರಣದಲ್ಲಿ ವಾಮಾಚಾರ ನಡೆದಿರುವ ಶಂಕೆಯೂ ಸ್ಥಳೀಯರಲ್ಲಿ ವ್ಯಕ್ತವಾಗಿದೆ ಎಂದು ಹೇಳಲಾಗುತ್ತಿದ್ದು, ಈ ಕುರಿತು ಅಧಿಕಾರಿಗಳು ಹಾಗೂ ಪೊಲೀಸರು ಪರಿಶೀಲನೆ ನಡೆಸಿ ವಾಸ್ತವಾಂಶವನ್ನು ಸ್ಪಷ್ಟ ಪಡಿಸಬೇಕಿದೆ.
ಸರ್ಕಾರಿ ಆಸ್ತಿಗೆ ಹಾನಿ ಮಾಡುವ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಬೇಕು. ಶಾಲೆಯ ಸುತ್ತಮುತ್ತ ರಾತ್ರಿ ವೇಳೆ ಪೊಲೀಸ್ ಗಸ್ತು ಹಾಗೂ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ.

ಸ್ಥಳೀಯ ಟೈಲರ್ ಮಾತನಾಡಿ
ಶಾಲೆಯಲ್ಲಿ ನಡೆದಿರುವ ಈ ಘಟನೆ ಬಗ್ಗೆ ನಿಮ್ಮ ಅಭಿಪ್ರಾಯವೇನು,?
ನಾವು ಕೂಡ ಇದೇ ಶಾಲೆಯಲ್ಲಿ ಓದಿ ಬೆಳೆದವರು. ನಮ್ಮ ಕಾಲದಲ್ಲಿ ಈ ಶಾಲೆ ನಮಗೆ ಬಹಳಷ್ಟು ನೆನಪುಗಳನ್ನು ಕೊಟ್ಟಿದೆ. ಆದರೆ ಈಗ ನಮ್ಮ ಮಕ್ಕಳನ್ನು ಇದೇ ಶಾಲೆಗೆ ಕಳುಹಿಸುವುದಕ್ಕೂ ಭಯವಾಗುವ ಪರಿಸ್ಥಿತಿ ಬಂದಿದೆ. ಶಾಲೆಯ ಕಿಟಕಿ ಗಾಜು, ಸಿಸಿ ಕ್ಯಾಮೆರಾಗಳನ್ನು ಒಡೆದಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.

ಸ್ಥಳೀಯ ಶ್ರೀನಿವಾಸ ಮಾತನಾಡಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ಏನು ಹೇಳುತ್ತೀರಿ?
ಸ್ಥಳೀಯರು: “ಮಕ್ಕಳು ವಿದ್ಯಾಭ್ಯಾಸ ಮಾಡುವ ಜಾಗದಲ್ಲಿ ಇಂತಹ ಘಟನೆ ನಡೆಯಬಾರದು. ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ಸಿಸಿ ಕ್ಯಾಮೆರಾ ಅಳವಡಿಸಿದರೂ ಅವುಗಳಿಗೂ ಹಾನಿ ಮಾಡಲಾಗಿದೆ. ಶಾಲೆಗೆ ಸೂಕ್ತ ಭದ್ರತೆ ನೀಡಬೇಕು. ರಾತ್ರಿ ವೇಳೆ ಪೊಲೀಸ್ ಗಸ್ತು ಹೆಚ್ಚಿಸಬೇಕು. ತಪ್ಪಿತಸ್ಥರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ವರದಿ ಪ್ರಸನ್ನ ಕುಮಾರ್. ಎಸ್. ಕೊರಟಗೆರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!