ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹುಸಿಯಾದ ಬರ ಘೋಷಣೆಯ ಭರವಸೆ ಈಡೇರಿತು : ಶರಣಬಸಪ್ಪ ದಾನಕೈ

ತಾಲೂಕು ತೀವ್ರ ಬರ ಘೋಷಣೆಗೆ ರೈತ ಸಂಘದ ಅಧ್ಯಕ್ಷರ ಹರ್ಷ

ಯಲಬುರ್ಗಾ: ರಾಜ್ಯ ಸರ್ಕಾರವು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕುನ್ನು ತೀವ್ರ ಬರಗಾಲ ಬರಪೀಡಿತ ತಾಲೂಕು ಎಂದು ಅಧಿಕೃತವಾಗಿ ಘೋಷಿಸಿ ಆದೇಶ ಹೊರಡಿಸಿದ್ದು ರೈತಾಪಿ ಜನರಿಗೆ ಸಂತಸವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ( ವಾಸುದೇವ ಬಣದ) ಯಲಬುರ್ಗಾ ತಾಲೂಕು ಅಧ್ಯಕ್ಷ ಶರಣಬಸಪ್ಪ ದಾನಕೈ ಅವರು ಸಚಿವರಾದ ಬಸವರಾಜ ರಾಯರಡ್ಡಿ ಇವರ ಪ್ರಯತ್ನಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆಯಿಂದ ಬೆಳೆಗಳು ಹಾನಿಗೊಳಗಾಗಿ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಈ ಸಮಸ್ಯೆಯನ್ನು ಅರಿತುಕೊಂಡು ,ಯಲಬುರ್ಗಾ ಕ್ಷೇತ್ರದ ಶಾಸಕ ಹಾಗೂ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರು ತಾಲೂಕನ್ನು ಬರಪೀಡಿತ ಎಂದು ಘೋಷಿಸುವಂತೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಿಗೆ ಗಮನಕ್ಕೆ ತಂದು ,
ಯಲಬುರ್ಗಾ ತಾಲೂಕು ತೀವ್ರ ಬರಪೀಡಿತ ತಾಲೂಕು ಎಂದು ಘೋಷಣೆಯಾಗಿದ್ದು, ಇದರಿಂದ ತಾಲೂಕಿನ ರೈತರಿಗೆ ಬರ ಪರಿಹಾರ ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯಗಳು ದೊರೆಯುವಂತೆ
ಯಲಬುರ್ಗಾ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸಿದ ಸರ್ಕಾರದ ಕ್ರಮಕ್ಕೆ ಹಾಗೂ ಈ ನಿಟ್ಟಿನಲ್ಲಿ ಪ್ರಯತ್ನಿಸಿದ ಸಚಿವ ಬಸವರಾಜ ರಾಯರಡ್ಡಿ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ತಾಲೂಕು ಅಧ್ಯಕ್ಷ ಶರಣಬಸಪ್ಪ ದಾನಕೈ ಅವರು ತಾಲೂಕಿನ ರೈತರ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!