ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೃಷಿ ಸಂಸೃತಿಯ ಪರಿಚಯಕ್ಕೆ ರೋಟರಿ ಶಾಲೆಯ ವಿನೂತನ ಹೆಜ್ಜೆ

ವಿರಾಜಪೇಟೆ : ಶಾಲಾ ಶಿಕ್ಷಣವನ್ನು ಕೇವಲ ಪುಸ್ತಕಗಳಿಗೆ ಸೀಮಿತಗೊಳಿಸದೆ, ಮಕ್ಕಳ ಸರ್ವತೋಮುಖ ಬೆಳವಣಿಗೆ ಹಾಗೂ ಕೃಷಿ ಸಂಸ್ಕೃತಿಯ ಪರಿಚಯಕ್ಕಾಗಿ ವಿರಾಜಪೇಟೆ ರೋಟರಿ ಪ್ರಾಥಮಿಕ ಶಾಲೆ ವಿನೂತನ ಹೆಜ್ಜೆಯೊಂದನ್ನು ಇಟ್ಟಿದೆ. ಕೊಡಗಿನಲ್ಲಿ ಪ್ರಥಮ ಬಾರಿಗೆ ಪ್ಲೇಹೋಮ್‌ನಿಂದ 7ನೇ ತರಗತಿಯವರೆಗಿನ ವಿದ್ಯಾರ್ಥಿಗಳನ್ನು ಕಾಕೊಟುಪರಂಬುವಿನಲ್ಲಿ ನಡೆದ ‘ವೆಟ್‌ಲ್ಯಾಂಡ್ ಸ್ಪೋರ್ಟ್ಸ್’ ಕಾರ್ಯಕ್ರಮಕ್ಕೆ ಕರೆದೊಯ್ದು, ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಮಾಡಲಾಯಿತು.
ಶಾಲೆಯ ಎಲ್ಲಾ ವಿದ್ಯಾರ್ಥಿಗಳು, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಭಾಗವಹಿಸಿದರು. ಶಾಲೆಯ ಆಡಳಿತ ಮಂಡಳಿಯ ಸಂಪೂರ್ಣ ಸಹಕಾರ ಹಾಗೂ ಪ್ರೋತ್ಸಾಹದೊಂದಿಗೆ ಆಯೋಜಿಸಲಾದ ಕಾರ್ಯಕ್ರಮದ ಮೂಲಕ ಮಕ್ಕಳಿಗೆ ಭತ್ತದ ಕೃಷಿ, ನಾಟಿ ವಿಧಾನ ಹಾಗೂ ಕೃಷಿಯ ಮಹತ್ವದ ಕುರಿತು ಪ್ರಾಯೋಗಿಕ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಮುಲ್ಲೇರಾ ಮಧು ಮಂಜುನಾಥ್ ಅವರು ಮಕ್ಕಳೊಂದಿಗೆ ಬೆರೆತು, ಭತ್ತದ ನಾಟಿ ಮಾಡುವ ವಿಧಾನ ಸೇರಿದಂತೆ ಕೃಷಿ ಪ್ರಕ್ರಿಯೆಯ ವಿವಿಧ ಹಂತಗಳ ಕುರಿತು ಆಸಕ್ತಿದಾಯಕವಾಗಿ ಹಾಗೂ
ವಿವರವಾಗಿ ಮಾಹಿತಿ ನೀಡಿದರು.

ಮಣ್ಣಿನಲ್ಲಿ ಕಾಲಿಟ್ಟು, ನೇಗಿಲು-ನಾಟಿ ಸಂಸ್ಕೃತಿಯನ್ನು ಕಣ್ಣಾರೆ ಕಂಡು ಅನುಭವಿಸಿದ ಮಕ್ಕಳು ಕೃಷಿಯ ಮಹತ್ವ ಹಾಗೂ ಅನ್ನದಾತ ರೈತರ ಶ್ರಮದ ಕುರಿತು ನೈಜ ಅರಿವು ಪಡೆದುಕೊಂಡರು.
ಪುಟಾಣಿ ಮಕ್ಕಳನ್ನು ಇಂತಹ ಕೃಷಿ ಆಧಾರಿತ ಹೊರಾಂಗಣ ಚಟುವಟಿಕೆಗಳಿಗೆ ಕರೆದೊಯ್ದು ಪ್ರಾಯೋಗಿಕ ಜ್ಞಾನ ನೀಡುತ್ತಿರುವುದು ಕೊಡಗು ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಎನ್ನಲಾಗಿದ್ದು, ಕಾರ್ಯಕ್ರಮಕ್ಕೆ ಪೋಷಕರು, ಸಾರ್ವಜನಿಕರು ಹಾಗೂ ಶಿಕ್ಷಣ ಪ್ರೇಮಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!